Homeಕರ್ನಾಟಕ5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್​ ಅನುಮತಿ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್​ ಅನುಮತಿ

- Advertisement -
- Advertisement -

ಸುಪ್ರೀಂ ಕೋರ್ಟ್‌ ಆದೇಶದಿಂದಾಗಿ ನಿಲ್ಲಿಸಲಾಗಿದ್ದ 5, 8, 9 & 11ನೇ ತರಗತಿಗಳ ಬೋರ್ಡ್‌ ಪರೀಕ್ಷೆಗಳನ್ನು ಮುಂದುವರೆಸಲು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅನುಮತಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಿರುವ ಕರ್ನಾಟಕ ಹೈಕೋರ್ಟ್‌, ಪರೀಕ್ಷೆ ನಡೆಸಲು ಸರ್ಕಾರಕ್ಕೆ ಅನುಮತಿ ನೀಡಿದೆ. ಈ ಮೂಲಕ ಪರೀಕ್ಷೆ ನಡೆಸಲು ಕೋರಿದ್ದ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ರಾಜೇಶ್ ರೈ ಕೆ ಅವರ ನೇತೃತ್ವದ ಪೀಠವು ಸುದೀರ್ಘ ಕಾಲ ನಡೆಸಿ ಹಿಂದಿನ ಸೋಮವಾರ ಆದೇಶ ಕಾಯ್ದಿರಿಸಿತ್ತು.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಇದೇ ವೇಳೆ ತಿರಸ್ಕರಿಸಿದ ವಿಭಾಗೀಯ ಪೀಠ, ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಅಲ್ಲೇ ಕೋರುವಂತೆ ಎಂದು ಸೂಚಿಸಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ರಾಜ್ಯದ 17 ಕ್ಷೇತ್ರ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read