Homeಕರ್ನಾಟಕಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಕೊಳಚೆ ತೆಗೆಯುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ 14 ಯಂತ್ರೋಪಕರಣಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ.

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

2013ರ ಕಾನೂನಿನ ಅನ್ವಯ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿರುವ ಯಂತ್ರೋಪಕರಣಗಳ ವರದಿ ಸಲ್ಲಿಸಬೇಕು. ಕಾನೂನು ಪಾಲನೆ ಆಗಿಲ್ಲದಿದ್ದರೆ ಕಾರಣವನ್ನು ನೀಡಬೇಕು ಎಂದು ಜಸ್ಟೀಸ್‌ ಸತೀಶ್‌ ಚಂದ್ರ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಮ್‌ ಇದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.

ರಾಜ್ಯದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ ಕಾನೂನು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಅಥಾರಿಟಿ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (AICCTU) ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಅಕ್ಟೋಬರ್‌ 4ರಂದು ನಡೆಯುವ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಆದೇಶಿಸಿದೆ.

“ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಸಂಬಂಧ ಮೊದಲು ಕಾನೂನು ಬಂದಿದ್ದು 1993ರಲ್ಲಿ. ಹೊಸ ಕಾನೂನು 2013ರಲ್ಲಿ ಬಂದಿತು. ಇಷ್ಟಾದರೂ ಸಫಾಯಿಗಳ ಸರ್ವೇ ಕಾರ್ಯ ನಡೆದಿಲ್ಲ. ಸಫಾಯಿಗಳನ್ನು ಗುರುತಿಸದಿದ್ದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದು. ಅವರು ಆರ್ಥಿಕ ದುಸ್ಥಿತಿಯಿಂದಾಗಿ ಒತ್ತಾಯಪೂರ್ವಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಯಂತ್ರಗಳನ್ನು ಬಳಸುತ್ತಿದ್ದರೂ ಇವರನ್ನು ಕಟ್ಟಕಡೆಯ ಕಾರ್ಮಿಕರನ್ನಾಗಿ ನೋಡಲಾಗುತ್ತದೆ. ಅತ್ಯಂತ ಕೆಳವರ್ಗದವರು ಈ ಕೆಲಸದಲ್ಲಿ ತೊಡಗುವುದರಿಂದ ಅಧಿಕಾರ ವರ್ಗ ಎಷ್ಟರ ಮಟ್ಟಿಗೆ ಕಾನೂನು ಪಾಲನೆ ಮಾಡುತ್ತಿದೆ ಎಂಬ ಪ್ರಶ್ನೆಯೂ ಏಳುತ್ತದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮತ್ತು AICCTU ಪದಾಧಿಕಾರಿ ಮೈತ್ರೇಯಿ ಕೃಷ್ಣನ್‌.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಎಫ್‌ಐಆರ್‌ ಆದರೂ ಮುಂದಿನ ಕ್ರಮಗಳು ಜರುಗುವುದಿಲ್ಲ. ಸಫಾಯಿ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿರ್ದೇಶನಗಳನ್ನು ಹೈಕೋರ್ಟ್‌ ನೀಡಿದೆ. ಸಫಾಯಿಗಳ ಸಮೀಕ್ಷೆ ಹೇಗೆ ಮಾಡಬೇಕೆಂದೂ ತಿಳಿಸಲಾಗಿದೆ. ನಾವು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಹೊಸ ಹೊಸ ರೂಪದಲ್ಲಿ ಬರುತ್ತಿದೆ. ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಆದರೆ ಒಳಚರಂಡಿ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಯಿತು. ಈ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಪ್ರೋತ್ಸಾಹಿಸಲಾಯಿತು. ಪೌರಕಾರ್ಮಿಕರನ್ನೂ ಸ್ಕ್ಯಾವೆಂಜಿಂಗ್‌ಗೆ ದೂಡಲಾಗುತ್ತಿದೆ. ಮಂಡ್ಯದಲ್ಲಿ ಒಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಈಗ ಹೈಕೋರ್ಟ್ ಮ್ಯಾನುವಲ್ ಸ್ಕಾವೇಂಜಿಗ್ ನಿಷೇಧಿಸಿ, ಕಡ್ಡಾಯವಾಗಿ ಯಂತ್ರೋಪಕರಣಗಳನ್ನು ಬಳಸಬೇಕೆಂದು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನ ಕರ್ತವ್ಯಲೋಪ ಎಸಗಿರುವ ಜಿಲ್ಲಾಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ. ಇನ್ನಾದರೂ ಸರ್ಕಾರಗಳು, ಸ್ಥಳೀಯ ಆಡಳಿತಗಳು ಈ ಕುರಿತು ಎಚ್ಚೆತ್ತುಕೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಘನತೆಯ ಜೀವನ ನಡೆಸಲು ಅವಕಾಶ ನೀಡಬೇಕು ಮತ್ತು ಅನ್ಯಾಯದ ಸಾವುಗಳನ್ನು ತಡೆಗಟ್ಟಬೇಕಿದೆ.


ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...