Homeಕರ್ನಾಟಕಶಾಸಕರಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಶಾಸಕರಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ (ಏ.22) ವಜಾಗೊಳಿಸಿದೆ ಎಂದು barandbench.com ವರದಿ ಮಾಡಿದೆ.

ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ. ಶಂಕರ್‌ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನಿಲ್‌ ದತ್‌ ಯಾದವ್‌ ನೇತೃತ್ವದ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ವರದಿ ತಿಳಿಸಿದೆ.

ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಸಿದ್ದರಾಮಯ್ಯ ಅವರು ಚುನಾವಣೆ ಗೆದ್ದಿದ್ದಾರೆ ಎಂದು ಅರ್ಜಿದಾರ ಶಂಕರ್‌ ಅವರು ಆರೋಪಿಸಿದ್ದರು.

ಈ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್‌ ವತಿಯಿಂದ ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಲಾಗಿತ್ತು. ಇದು ಮತದಾರರಿಗೆ ಒಡ್ಡಿದ ಆಮಿಷ, ಇದು ಲಂಚಕ್ಕೆ ಸಮವಾಗಿದೆ. ಹೀಗಾಗಿ ಅಕ್ರಮ ಎಸಗುವ ಮೂಲಕ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧು ಗೊಳಿಸಬೇಕು ಎಂದು ಶಂಕರ್‌ ತನ್ನ ಅರ್ಜಿಯಲ್ಲಿ ಕೋರಿದ್ದರು.

ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆ ಪಕ್ಷಕ್ಕೆ ಸೇರಿದ್ದು, ಇದನ್ನು ನನ್ನ ವೆಚ್ಚಕ್ಕೆ ಸೇರಿಸಬಹುದೇ? ಗ್ಯಾರಂಟಿ ಯೋಜನೆ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇದು ನನ್ನ ಚುನಾವಣಾ ವೆಚ್ಚಕ್ಕೆ ಸೇರುತ್ತದೆಯೇ, ನಾನು ಮುಖ್ಯಮಂತ್ರಿಯಾದ ಮೇಲೆ ಇದು ಅನ್ವಯಿಸುವುದೇ?” ಎಂದು  ಸಿಎಂ ಸಿದ್ದರಾಮಯ್ಯ ಪರ ವಕೀಲರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ ಎಂದು barandbench.com ತಿಳಿಸಿದೆ.

ಬೆಂಗಳೂರು | ಹಲ್ಲೆಯ ಸುಳ್ಳು ಕಥೆ ಕಟ್ಟಿದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...