Homeಕರ್ನಾಟಕಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಸಿಐಡಿ ಮಾಡಿರುವ ತನಿಖೆ ಮತ್ತು ಅಂತಿಮ ವರದಿ ಹಾಗೆಯೇ ಉಳಿಯಲಿದೆ ಎಂದಿರುವ ಹೈಕೋರ್ಟ್, ಸಿಐಡಿ ತನ್ನ ಮುಂದೆ ಇಟ್ಟಿರುವ ಸಾಮಗ್ರಿಗಳು ಮತ್ತು ಈ ಆದೇಶದಲ್ಲಿ ಮಾಡಿದ ಅವಲೋಕನಗಳನ್ನು ಪರಿಗಣಿಸಿ ಹೊಸದಾಗಿ ಸೂಕ್ತ ಆದೇಶ ನೀಡಲು ವಿಚಾರಣಾ ನ್ಯಾಯಾಲಯಕ್ಕೆ ವಿಷಯವನ್ನು ಹಿಂದಿರುಗಿಸಿದೆ. ಇದೇ ವೇಳೆ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜುಲೈ 4, 2024 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. ಪೋಕ್ಸೋ ಮತ್ತು ಐಪಿಸಿ ನಿಬಂಧನೆಗಳ ಅಡಿಯಲ್ಲಿ ಸದಾಶಿವನಗರ ಠಾಣೆಯಲ್ಲಿ ತನ್ನ ವಿರುದ್ದ ದಾಖಲಾಗಿರುವ ಎಫ್‌ಐಆರ್, ಆನಂತರ ಸಿಐಡಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ಸಕ್ಷಮ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಪ್ರತ್ಯೇಕ ಎರಡು ಅರ್ಜಿಗಳನ್ನು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿದ್ದಾರೆ.

2024ರ ಜೂನ್‌ನಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೋ) ಸೆಕ್ಷನ್ 8 ಮತ್ತು 1860ರ ಭಾರತೀಯ ದಂಡ ಸಂಹಿತೆಯ 354ಎ ಅಡಿಯಲ್ಲಿ ಯಡಿಯೂರಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.

ಸಂಜ್ಞೇ ಪರಿಗಣಿಸಿರುವ ಆದೇಶ ಹೊರತುಪಡಿಸಿ ಉಭಯ ಪಕ್ಷಕಾರರ ಪರ ಹಿರಿಯ ವಕೀಲರಾದ ಸಿ ವಿ ನಾಗೇಶ್‌ ಮತ್ತು ಪ್ರೊ. ರವಿವರ್ಮ ಕುಮಾರ್‌ ಅವರು ಎತ್ತಿರುವ ಯಾವುದೇ ವಾದಗಳಿಗೆ ಹೈಕೋರ್ಟ್ ಉತ್ತರಿಸಿಲ್ಲ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದ್ದು, ಅರ್ಜಿದಾರರು ಸೂಕ್ತ ಸಂದರ್ಭದಲ್ಲಿ ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬಹುದಾಗಿದೆ” ಎಂದು ಆದೇಶ ಮಾಡಿದೆ.

ಹೀಗಾಗಿ, ಈ ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ವೈ ಎಂ ಅರುಣ, ರುದ್ರೇಶ ಮರಳಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರ ವಿರುದ್ಧ ಸಂಜ್ಞೇ ಪರಿಗಣಿಸಿರುವ ಆದೇಶ ಮುಂದುವರಿಯಲಿದೆ.

ಮಾರ್ಚ್ 28,2024 ರಂದು ಯಡಿಯೂರಪ್ಪ ಅವರಿಗೆ ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಅದರ ಪ್ರಕಾರ, ಯಡಿಯೂರಪ್ಪ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಜೂನ್ 10, 2024 ರಂದು ಯಡಿಯೂರಪ್ಪ ಅವರಿಗೆ ಎರಡನೇ ನೋಟಿಸ್‌ ನೀಡಿ, ಜೂನ್ 11, 2024 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಅವರು ಜೂನ್ 17 ರವರೆಗೆ ಹಾಜರಾಗಲು ಸಮಯ ಕೋರಿದ್ದರು. ಈ ನಡುವೆ ಯಡಿಯೂರಪ್ಪ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸಿಐಡಿ ಆರೋಪಿಸಿತ್ತು.

ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬವಾಗಿದೆ ಎಂದು ಯಡಿಯೂರಪ್ಪ ಪರ ವಕೀಲರು ವಾದಿಸಿದ್ದಾರೆ. ಕ್ಯಾನ್ಸರ್‌ನಿಂದಾಗಿ ಕೊನೆಯುಸಿರೆಳೆದ ಸಂತ್ರಸ್ತೆಯ ತಾಯಿ, ದೂರುದಾರರ ಅರ್ಹತೆಗಳು ಮತ್ತು ಅರ್ಜಿದಾರರ ವಿರುದ್ಧ ಹೊರಿಸಲಾದ ಆರೋಪಗಳ ಸ್ವರೂಪ, ದೂರುದಾರರು ಇತರರ ವಿರುದ್ಧ ದಾಖಲಿಸಿರುವ ಹಲವಾರು ಪ್ರಕರಣಗಳ ಬಗ್ಗೆಯೂ ವಕೀಲರು ಉಲ್ಲೇಖಿಸಿದ್ದಾರೆ. ತನ್ನ ಕಕ್ಷಿದಾರರ ವಿರುದ್ಧದ ಪ್ರಕರಣದಂತೆ ಅವೆಲ್ಲವೂ ಕ್ಷುಲ್ಲಕವಾಗಿವೆ ಎಂದು ಅವರು ವಾದಿಸಿದ್ದಾರೆ. ಇದಲ್ಲದೆ, ರಾಜಕೀಯ ದ್ವೇಷದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಮಧ್ಯಂತರ ಆದೇಶದ ಮೂಲಕ, ನ್ಯಾಯಾಲಯವು ಯಡಿಯೂರಪ್ಪ ಅವರಿಗೆ ತನಿಖೆಗೆ ಸಹಕರಿಸುವಂತೆ ಮತ್ತು ತನಿಖೆಗಾಗಿ ಪೊಲೀಸರ ಮುಂದೆ ಹಾಜರಾದಾಗ ಅವರನ್ನು ಬಂಧಿಸದಂತೆ ನಿರ್ದೇಶಿಸಿತ್ತು.

ಪ್ರಕರಣದ ಹಿನ್ನೆಲೆ : ಫೆಬ್ರವರಿ 2, 2024ರಂದು ಬೆಂಗಳೂರಿನ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14, 2024 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಯಡಿಯೂರಪ್ಪ ವಿರುದ್ಧದ ದೂರಿನ ಸಂಬಂಧ ಅಪ್ರಾಪ್ತ ಬಾಲಕಿಯ ತಾಯಿ ಮೇ 27, 2024 ರಂದು ವಕೀಲ ಬಾಲನ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಅವರು ಮೇ 26, 2024ರಂದು ಬೆಂಗಳೂರಿನ ನ್ಯಾನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಾವಿನ ಸುತ್ತವೂ ಹಲವು ಅನುಮಾನಗಳು ವ್ಯಕ್ತವಾಗಿದ್ದು, ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮೇ 27,2024ರಂದು ದೂರು ದಾಖಲಿಸಿದೆ.

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...