ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಹೈಕೋರ್ಟ್ ಇಂದು (ಅ.30) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
Breaking: Karnataka High Court grants interim bail for 6 weeks to actor Darshan to undergo surgery#Darshan
— Bar and Bench (@barandbench) October 30, 2024
ನಿನ್ನೆ (ಅ.29) ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಅದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಕನಿಷ್ಠ 3 ತಿಂಗಳ ಮಧ್ಯಂತರ ಜಾಮೀನು ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಬೆನ್ನು ನೋವಿಗೆ ತುರ್ತು ಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದರು.
ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು. ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು. ಆಸ್ಪತ್ರೆಗೆ ದಾಖಲಿಸಿದ ಬಳಿಕವೇ ಅವರ ಅನಾರೋಗ್ಯ ಕುರಿತು ಹೆಚ್ಚಿನ ಮಾಹಿತಿ ಲಭಿಸುತ್ತದೆ. ಚಿಕಿತ್ಸೆಗೆ ಎಷ್ಟು ದಿನ ಬೇಕೆಂದು ವೈದ್ಯರು ಮಾತ್ರ ಹೇಳಬಹುದು. ನಾವು ಕೇಳುತ್ತಿರುವುದು ಕೇವಲ ಮಧ್ಯಂತರ ಜಾಮೀನು ಮಾತ್ರ. ಬಳ್ಳಾರಿಯ ವೈದ್ಯರು ಈಗಾಗಲೇ ವರದಿ ನೀಡಿದ್ದಾರೆ. ಇದನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ ಎಂದು ವಕೀಲರು ವಾದಿಸಿದ್ದರು.
ಇದನ್ನೂ ಓದಿ : ಸಿನಿಮಾ ಶೂಟಿಂಗ್‌ಗಾಗಿ ಹೆಚ್‌ಎಂಟಿ ಭೂಮಿಯಲ್ಲಿ ಅರಣ್ಯ ನಾಶ : ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ್ ಖಂಡ್ರೆ


