Homeಮುಖಪುಟಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

- Advertisement -
- Advertisement -

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ 3 ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗ್ರೂಪ್ಸ್‌ಗೆ ಗುತ್ತಿಗೆಗೆ ನೀಡಿತ್ತು.

ಇದನ್ನು ಪ್ರಶ್ನಿಸಿ ಮತ್ತು 2019 ರಲ್ಲಿ ಸಂಸತ್ ಈ ಕುರಿತು ತೆಗೆದುಕೊಂಡ ನಿರ್ಧಾರವನ್ನು ರದ್ದುಗೊಳಿಸುವಂತೆ ಕೋರಿ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರ ನೌಕರರ ಒಕ್ಕೂಟ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಇದನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರ ವಿಭಾಗೀಯ ಪೀಠ ಕೇಂದ್ರಕ್ಕೆ ನೋಟಿಸ್ ನೀಡಿದೆ.

ಇದನ್ನೂ ಓದಿ: ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಆರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಮುನ್ನಡೆಸಲು ಕೇಂದ್ರ ಸಚಿವ ಸಂಪುಟ 2018 ರ ನವೆಂಬರ್ 8 ರಂದು ತಾತ್ವಿಕವಾಗಿ ಅನುಮೋದನೆ ನೀಡಿತ್ತು. ಆ ಕ್ಯಾಬಿನೆಟ್ ನಿರ್ಧಾರದ ಮೇಲೆ ಖಾಸಗೀಕರಣಕ್ಕಾಗಿ ನಡೆದ ಬಿಡ್ಡಿಂಗ್ ಪ್ರಕ್ರಿಯೆಯನ್ನು ‘ಕಾನೂನುಬಾಹಿರ, ಅನಿಯಂತ್ರಿತ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರ ಕಾಯ್ದೆಯ ವ್ಯಾಪ್ತಿಗೆ ಮೀರಿದೆ’ ಎಂದು ಘೋಷಿಸುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿತ್ತು.

ಇದರನ್ವಯ ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಗುತ್ತಿಗೆ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ.


ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...