ರಾಮಚಂದ್ರಾಪುರ ಮಠದ ಸ್ವಾಮಿ ರಾಘವೇಶ್ವರ ಭಾರತೀ ಅವರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದ ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಂತ್ರಸ್ತೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಗಳ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಹಿಂದೆ ಸರಿದಿದ್ದಾರೆ.
ಇದುವರೆಗೂ ಒಟ್ಟು 16 ನ್ಯಾಯಮೂರ್ತಿಗಳು ಈ ಪ್ರಕರಣದಲ್ಲಿ ವಿವಿಧ ಕಾರಣ ನೀಡಿ ಹಿಂದೆ ಸರಿದಿದ್ದಾರೆ. ಪ್ರಸ್ತುತ ಪ್ರಕರಣದಿಂದ ಹಿಂದೆ ಸರಿದಿರುವ ನ್ಯಾಯಮೂರ್ತಿ ಸುಧೀಂದ್ರ ರಾವ್ ಅವರು ಮುಂದಿನ ತಿಂಗಳು ಡಿಸೆಂಬರ್ 3 ಕ್ಕೆ ನಿವೃತ್ತಿ ಹೊಂದಲಿದ್ದಾರೆ.
“ವಾದವನ್ನು ಆಲಿಸಲು ಕಡಿಮೆ ಸಮಯಾವಕಾಶ ಇರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಹೇಳಿ ನ್ಯಾಯಮೂರ್ತಿ ವಿಚಾರಣೆಯಿಂದ ಬಿಡುಗಡೆ ಹೊಂದಿದ್ದಾರೆ.
ಇದನ್ನೂ ಓದಿ: ರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್!
ರಾಘವೇಶ್ವರ ಭಾರತೀ ಸ್ವಾಮಿಯನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ಸೆಷನ್ಸ್ ನ್ಯಾಯಾಲಯ 2016 ಮಾರ್ಚ್ 31 ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಬೇಕು ಎಂದು ಸಂತ್ರಸ್ತೆ ರಾಮಕಥಾ ಗಾಯಕಿ ಮತ್ತು ಪ್ರಾಸಿಕ್ಯೂಷನ್ ಮೇಲ್ಮನವಿ ಸಲ್ಲಿಸಿದ್ದರು.
ರಾಘವೇಶ್ವರ ಭಾರತಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇದುವರೆಗೂ 16 ಜನ ನ್ಯಾಯಮೂರ್ತಿಗಳು ವಿವಿಧ ಕಾರಣ ನೀಡಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಪ್ರಸ್ತುತ ವಿಚಾರಣೆಯಿಂದ ಹಿಂದೆ ಸರಿದಿರುವ ಸುಧೀಂದ್ರ ರಾವ್ ಅವರು ಪ್ರಕರಣದ ವಾದವನ್ನು ಅರ್ಧ ಆಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಲು ಈಗ ಬೇರೆ ನ್ಯಾಯಪೀಠದ ಮುಂದೆ ನಿಗದಿ ಪಡಿಸಬೇಕಿದೆ. ಆದರೆ ಅಲ್ಲಿ ಪ್ರಕರಣವನ್ನು ಮತ್ತೆ ಪ್ರಾಥಮಿಕ ಹಂತದಿಂದ ವಾದ-ಪ್ರತಿವಾದ ಪ್ರಕ್ರಿಯೆ ನಡೆಸಬೇಕಿದೆ ಎಂದು ಲೈವ್ ಲಾ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ: ಪಿ.ಲಂಕೇಶ್ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಭವಿಸಿದ ಎರಡು ಘಟನೆಗಳು!


