Homeಕರ್ನಾಟಕಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

- Advertisement -
- Advertisement -

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

barandbench.com ವರದಿಯ ಪ್ರಕಾರ, ಪ್ರಕರಣ ರದ್ದತಿ ಕೋರಿ ರವಿಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ನಾಗರಿಕ ಸೇವೆಯಲ್ಲಿರುವ ಅಧಿಕಾರಿಯು ನಿರ್ದಿಷ್ಟ ಧರ್ಮಕ್ಕೆ ಸೇರಿದ್ದಾರೆ ಎಂದು ಹೇಳಿಕೆ ನೀಡುವುದನ್ನು ಸಹಿಸಲಾಗದು ಎಂದಿದೆ.

“ಫೌಝಿಯಾ ಅವರು ಕರ್ನಾಟಕದ ಐಎಎಸ್‌ ಅಧಿಕಾರಿ. ಇದನ್ನು ಒಪ್ಪಲಾಗದು. ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ, ಇದು ಅತಿಯಾಯಿತು. ಇದನ್ನು ಕ್ಷಮಿಸಲಾಗದು. ನೀವು ಏನು ಬೇಕಾದರೂ ಮಾತನಾಡಬಹುದು ಎಂದುಕೊಂಡಿದ್ದೀರಾ? ಇದಕ್ಕೆ ಅವಕಾಶ ನೀಡಲ್ಲ” ಎಂದು ನ್ಯಾಯಾಲಯ ಹೇಳಿದೆ.

“ನಿಮ್ಮ ನಾಲಿಗೆಯ ಮೇಲೆ ಎಚ್ಚರಿಕೆ ಇರಲಿ. ಇಂಥ ಕ್ಷುಲ್ಲಕ ಪ್ರಕರಣಗಳಿಂದಾಗಿ ಕೊಲೆ ಮತ್ತು ಸುಲಿಗೆಯಂಥ ಪ್ರಕರಣಗಳು ಹತ್ತು ವರ್ಷಗಳಿಂದ ಬಾಕಿ ಉಳಿದಿವೆ. ನಿಮ್ಮ ನಾಲಿಗೆಯ ಮೇಲೆ ಎಚ್ಚರಿಕೆ ಇಲ್ಲದೇ ಇರುವುದರಿಂದ ಪ್ರಕರಣಗಳು ಏರುಗತಿಯಲ್ಲಿವೆ” ಎಂದು ಹೈಕೋರ್ಟ್ ಛೀಮಾರಿ ಹಾಕಿರುವುದಾಗಿ ವರದಿ ಉಲ್ಲೇಖಿಸಿದೆ.

“ಯಾವುದೇ ಪಕ್ಷವಾಗಿರಲಿ, ನೀವೆಲ್ಲರೂ ಇದೆಲ್ಲವನ್ನೂ ನಿಲ್ಲಿಸಬೇಕು. ಬರೀ ಕೆಸರೆರಚುವುದೇ ಆಗಿದ್ದು, ಯಾರೂ ನೀತಿ-ನಿರೂಪಣೆಗಳ ಬಗ್ಗೆ ಮಾತನಾಡುತ್ತಿಲ್ಲ. ನೀವೇನು ಮಾತನಾಡುತ್ತಿದ್ದೀರಿ ಎಂಬುದರ ಮೇಲೆ ಜನರಿಗೆ ಆಸಕ್ತಿ ಇಲ್ಲ. ಬದಲಿಗೆ ಅವರ ಕಲ್ಯಾಣದ ಮೇಲೆ ಅವರಿಗೆ ಆಸಕ್ತಿ” ಎಂದು ನ್ಯಾಯಾಲಯ ತೀಕ್ಷ್ಣವಾಗಿ ಹೇಳಿದೆ.

2025ರ ಮೇ ತಿಂಗಳಲ್ಲಿ ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಎಂಎಲ್‌ಸಿ ಎನ್‌. ರವಿಕುಮಾರ್‌ ಅವರು ಫೌಝಿಯಾ ಅವರನ್ನು ಕುರಿತು ಜಿಲ್ಲಾಧಿಕಾರಿ ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದರು. ಇದರ ಬೆನ್ನಿಗೇ ರವಿಕುಮಾರ್‌ ಕ್ಷಮೆ ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...