Homeಕರ್ನಾಟಕಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಹೈಕೋರ್ಟ್‌ ಶುಕ್ರವಾರ (ಫೆ 7) ನಿರಾಕರಿಸಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ.

“ಲೋಕಾಯುಕ್ತ ಮತ್ತು ಲೋಕಾಯುಕ್ತ ಸಂಸ್ಥೆಯು ಪ್ರಶ್ನಾರ್ಹವಾದ ಸ್ವಾತಂತ್ರ್ಯದಿಂದ ಬಳಲುತ್ತಿಲ್ಲ. ಲೋಕಾಯುಕ್ತ ಸಂಸ್ಥೆ ನಡೆಸಿರುವ ತನಿಖೆಯು ಲೋಪದೋಷ, ಪಕ್ಷಪಾತದಿಂದ ಕೂಡಿದೆ ಎಂದು ತನಿಖಾ ವರದಿಯನ್ನು ಪರಿಶೀಲಿಸಿದಾಗ ಕಂಡು ಬಂದಿಲ್ಲ. ಹೀಗಾಗಿ, ಇದನ್ನು ಮುಂದುವರಿದ ತನಿಖೆ ಅಥವಾ ಮರು ತನಿಖೆ ನಡೆಸಲು ಸಿಬಿಐಗೆ ಆದೇಶಿಸಲಾಗದು. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ “ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವ ನಂತರ ಯಾವುದೇ ಅಕ್ರಮವಾಗಿರುವುದನ್ನು ಅರ್ಜಿದಾರರು ಸಾಬೀತುಪಡಿಸಿಲ್ಲ. ಮುಖ್ಯಮಂತ್ರಿಯಾಗಿರುವ ಕಾರಣಕ್ಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ ಎಂದು ವರದಿ ಹೇಳಿದೆ.

ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಪ್ರಕರಣದ ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿಲ್ಲ ಎಂದು ಅರ್ಜಿದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು.

ಲೋಕಾಯುಕ್ತ, ಸಿಬಿಐ ಅಥವಾ ಯಾವುದೇ ಇತರ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ಕೋರಿದ ನಂತರ, ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25, 2024 ರಂದು ಪ್ರಕರಣದ ತನಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿ ಆದೇಶಿಸಿತ್ತು. ಆದಾಗ್ಯೂ, ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸುವ ಗಂಟೆಗಳ ಮೊದಲು, ಸೆಪ್ಟೆಂಬರ್ 28 ರಂದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಲೋಕಾಯುಕ್ತ ಪೊಲೀಸರ ತನಿಖಾ ವರದಿಯನ್ನು ದಾಖಲಿಸಿಕೊಂಡ ನಂತರ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದರು. ಲೋಕಾಯುಕ್ತ ಪೊಲೀಸರ ವರದಿಯನ್ನು ವಿಚಾರಣಾ ನ್ಯಾಯಾಲಯವು ಸ್ವೀಕರಿಸುವ ಸಮಯವನ್ನು ಹೈಕೋರ್ಟ್ ವಿಸ್ತರಿಸಿತ್ತು.

ಜನವರಿ 27ರಂದು ವಾದ-ಪ್ರತಿವಾದಗಳ ಸಂದರ್ಭದಲ್ಲಿ, ಲೋಕಾಯುಕ್ತ ಪೊಲೀಸರ ವರದಿಯನ್ನು ಪರಿಶೀಲಿಸಿ ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ನಿರ್ಧರಿಸುವುದಾಗಿ ಹೈಕೋರ್ಟ್ ಹೇಳಿತ್ತು. ಈ ಮಧ್ಯೆ, ಸಿದ್ದರಾಮಯ್ಯ ಪರ ವಕೀಲರು, ವರದಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ವಿಚಾರಣಾ ನ್ಯಾಯಾಲಯದ ವಿಶೇಷ ಅಧಿಕಾರ, ಹೈಕೋರ್ಟ್ ಅಲ್ಲ ಎಂದು ನ್ಯಾಯಾಲಯದ ಮುಂದೆ ವಾದಿಸಿದ್ದರು.

ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿದ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಈ ವಿಷಯ ಬರುವುದರಿಂದ, ತನಿಖಾ ವರದಿಯನ್ನು ಪರಿಶೀಲಿಸಿದ ನಂತರ ಸಿಬಿಐ ತನಿಖೆಯ ಬೇಡಿಕೆಯನ್ನು ಹೈಕೋರ್ಟ್ ಪೀಠವು ಸ್ವಯಂಪ್ರೇರಿತವಾಗಿ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಪರ ವಕೀಲರು ಹೇಳಿದ್ದರು.

2010ರಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರ ಸಹೋದರ ದಾನವಾಗಿ ನೀಡಿದ್ದ ಸುಮಾರು 3.16 ಎಕರೆ ಭೂಮಿಯನ್ನು ‘ತಪ್ಪಾಗಿ’ ಸ್ವಾಧೀನಪಡಿಸಿಕೊಂಡ ನಂತರ, ಮುಡಾ ಸಂಸ್ಥೆಯು ಪರಿಹಾರವಾಗಿ ಅವರಿಗೆ ಹಂಚಿಕೆ ಮಾಡಿದ್ದ 56 ಕೋಟಿ ರೂ. ಮೌಲ್ಯದ 14 ನಿವೇಶನಗಳ ಸುತ್ತ ಮುಡಾ ಪ್ರಕರಣ ಕೇಂದ್ರೀಕೃತವಾಗಿದೆ.

ಬಿಜೆಪಿ ಅಧಿಕಾರಾವಧಿಯಲ್ಲಿ ತಮ್ಮ ಪತ್ನಿಗೆ 14 ವಸತಿ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಲ್ಲಿ ನನ್ನ  ಕಡೆಯಿಂದ ಯಾವುದೇ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಧ್ಯೆ ಅವರ ಪತ್ನಿ ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮಗಳ ತನಿಖೆಗೆ ಅನುಕೂಲವಾಗುವಂತೆ ಸೆಪ್ಟೆಂಬರ್ 24, 2024ರ ಏಕಸದಸ್ಯ ಪೀಠದ ಆದೇಶದ ವಿರುದ್ಧ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ವಿಭಾಗೀಯ ಪೀಠವು ಮಾರ್ಚ್ 22 ರಂದು ಮೇಲ್ಮನವಿಯನ್ನು ವಿಚಾರಣೆ ನಡೆಸಲಿದೆ.

ನ್ಯಾಕ್ ಲಂಚ ಪ್ರಕರಣ : ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...