Homeಕರ್ನಾಟಕನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

ನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

- Advertisement -
- Advertisement -

ನ್ಯಾಯಾಲಯದ ಕಲಾಪದ ಕೆಲವು ವಿಡಿಯೋಗಳು ವೈರಲ್‌ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌, ಪೂರ್ವಾನುಮತಿ ಪಡೆಯದೆ ವಿಡಿಯೋ ರೆಕಾರ್ಡಿಂಗ್‌, ಹಂಚಿಕೆ ಮಾಡದಂತೆ ವೀಕ್ಷಕರಿಗೆ ಎಚ್ಚರಿಸಿದೆ. ಅಲ್ಲದೆ, ಲೈವ್‌ ಸ್ಟ್ರೀಮಿಂಗ್‌ಗೂ ಮುನ್ನ ಸಂದೇಶ ಹಾಕಲಾರಂಭಿಸಿದೆ.

ಕರ್ನಾಟಕ ಹೈಕೋರ್ಟ್‌ 2022ರ ಜನವರಿ 1ರಿಂದ “ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್‌ಸ್ಟ್ರೀಮ್‌) ಮತ್ತು ರೆಕಾರ್ಡಿಂಗ್‌ ನಿಯಮಗಳು 2021” ಅನ್ನು ಜಾರಿಗೊಳಿಸಿದೆ. ಇದರನ್ವಯ ಲೈವ್‌ ಸ್ಟ್ರೀಮಿಂಗ್‌ ಹಾಗೂ ರೆಕಾರ್ಡಿಂಗ್‌ ನಿಯಮಗಳನ್ನು ಸೂಚಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಈ ಸಂಬಂಧದ ನೋಟಿಸ್‌ ಅನ್ನು ಪ್ರತಿಯೊಂದು ಕೋರ್ಟ್‌ ಹಾಲ್‌ಗಳ ವಿಡಿಯೋ ಕಾನ್ಫರೆನ್ಸ್‌ ಪರದೆಯ ಮೇಲೆ ಕಲಾಪ ಆರಂಭಕ್ಕೂ ಮುನ್ನ ಮತ್ತು ಮಧ್ಯಾಹ್ನ ಭೋಜನದ ವೇಳೆಯಲ್ಲಿ ಪ್ರಸಾರ ಮಾಡಲಾಗಿದೆ.

“ಅನುಮತಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆ ಹೊರತುಪಡಿಸಿ, ಯಾವುದೇ ವ್ಯಕ್ತಿ ಅಥವಾ ಸಂಸ್ಥೆ (ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳು) ಕಲಾಪದ ಲೈವ್‌ ಸ್ಟ್ರೀಮಿಂಗ್‌ ಅಥವಾ ಹೈಕೋರ್ಟ್‌ ಯೂಟ್ಯೂಬ್‌ ಚಾನಲ್‌ನಲ್ಲಿನ ವಿಡಿಯೋಗಳನ್ನು ರೆಕಾರ್ಡ್‌ ಮಾಡುವುದಾಗಲಿ, ಪ್ರಸರಣ ಮಾಡುವುದಾಗಲಿ ಮಾಡುವಂತಿಲ್ಲ” ಎಂದು ಸಂದೇಶದಲ್ಲಿ ಹೇಳಲಾಗಿದೆ. ಈ ನಿರ್ಬಂಧವು ಎಲ್ಲಾ ಸಂದೇಶ ಅಪ್ಲಿಕೇಶನ್‌ಗಳಿಗೂ ಅನ್ವಯಿಸಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪೂರ್ವಾನುಮತಿ ಪಡೆಯದೇ ಲೈವ್‌ ಸ್ಟ್ರೀಮಿಂಗ್‌ನ ಮರು ಪ್ರಸಾರ, ವರ್ಗಾವಣೆ, ಅಪ್ಲೋಡ್ ಮಾಡುವುದು, ಪೋಸ್ಟ್‌ ಮಾಡುವುದು, ಮಾರ್ಪಾಡು ಮಾಡುವುದು ಪ್ರಸಾರ ಅಥವಾ ಮರು ಪ್ರಸಾರವನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಕಲಾಪವನ್ನು ರೆಕಾರ್ಡ್‌ ಮಾಡಲು ಅಥವಾ ಅದರ ನಿರೂಪಣೆಗೆ ಯಾವುದೇ ವ್ಯಕ್ತಿಗೆ ಅನುಮತಿ ನೀಡಲಾಗಿಲ್ಲ. ನ್ಯಾಯಾಲಯದ ನಿಯಮ ಉಲ್ಲಂಘಿಸಿದ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲಾಗುತ್ತದೆ. ನ್ಯಾಯಾಲಯದ ಕಲಾಪದ ರೆಕಾರ್ಡಿಂಗ್‌ ಮತ್ತು ಆರ್ಕೈವ್‌ ದತ್ತಾಂಶದ ಮೇಲೆ ನ್ಯಾಯಾಲಯಕ್ಕೆ ವಿಶೇಷ ಹಕ್ಕುಸ್ವಾಮ್ಯವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಹೈಕೋರ್ಟ್‌ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ ಮತ್ತು ಮಹಿಳಾ ವಕೀಲೆಯೊಬ್ಬರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ  ವಿಡಿಯೋ ಕ್ಲಿಪ್‌ಗಳು ಎಲ್ಲೆಡೆ ವೈರಲ್ ಆದ ಬಳಿಕ, ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ ಹೇರಿದೆ.

ಇದನ್ನೂ ಓದಿ : ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? – ಸಚಿವ ಭೈರೆಗೌಡ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...