Homeಕರ್ನಾಟಕಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

- Advertisement -
- Advertisement -

ಪತ್ನಿಯ ಮೇಲೆ ಅತ್ಯಾಚಾರವೆಸಗುವ ಪತಿಗೆ ‘ಅತ್ಯಾಚಾರ’ ಕಾನೂನನ್ನು ಅನ್ವಯಿಸಬಹುದು ಎಂದು ರಾಜ್ಯ ಹೈಕೋರ್ಟ್‌ ಬುಧವಾರದಂದು ಹೇಳಿದೆ. ಸಂತ್ರಸ್ತೆಯು ಗಂಡನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಆರೋಪಗಳನ್ನು ರೂಪಿಸುವುದನ್ನು ನ್ಯಾಯಾಲಯ ಎತ್ತಿಹಿಡಿದಿದೆ.

“ಮದುವೆಯಾದ ಮಾತ್ರಕ್ಕೆ, ಯಾವುದೇ ವಿಶೇಷ ಸವಲತ್ತು ಪುರುಷರಿಗೆ ನೀಡಲಾಗುವುದಿಲ್ಲ. ಮದುವೆಯಾದಕ್ಕೆ ಮಾತ್ರಕ್ಕೆ ಕ್ರೂರ ಮೃಗದಂತೆ ವರ್ತಿಸಲು ಪರವಾನಗಿ ನೀಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ. “ಅತ್ಯಾಚಾರ ಮಾಡಿದ್ದಕ್ಕೆ ಪುರುಷನೊಬ್ಬನಿಗೆ ಕಾನೂನು ಶಿಕ್ಷೆ ನೀಡಿದ್ದರೆ, ಆ ಪುರುಷ ಗಂಡನಾಗಿದ್ದರೂ ಸಹ ಶಿಕ್ಷೆಯಾಗಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವೈವಾಹಿಕ ಅತ್ಯಾಚಾರ ಅಪವಾದವನ್ನು ಆಧರಿಸಿದದ ಹಳೆಯ ಸಿದ್ಧಾಂತವನ್ನು ಟೀಕಿಸಿದರು. “ಗಂಡಂದಿರು ತಮ್ಮ ಹೆಂಡತಿಯರ ದೇಹ, ಮನಸ್ಸು ಮತ್ತು ಆತ್ಮದ ಅಧಿಪತಿಗಳು ಎಂಬ ಪ್ರಾಚೀನ ಚಿಂತನೆ ಮತ್ತು ಸಂಪ್ರದಾಯವನ್ನು ಅಳಿಸಿ ಹಾಕಬೇಕು. ಈ ಪುರಾತನ, ಪ್ರತಿಗಾಮಿ ಮತ್ತು ಪೂರ್ವಗ್ರಹದ ಕಲ್ಪನೆಯಿಂದಾಗಿ ಈ ರೀತಿಯ ಪ್ರಕರಣಗಳು ದೇಶದಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ” ಎಂದು ಆದೇಶವು ಹೇಳಿದೆ.

ಪ್ರಸ್ತುತ ಪ್ರಕರಣವು 2006 ರಲ್ಲಿ ವಿವಾಹವಾದ ದಂಪತಿಗಳಿಗೆ ಸಂಬಂಧಿಸಿದೆ. ಈ ಪ್ರಕರಣದಲ್ಲಿ, ಮದುವೆಯಾಗಿ ಕೆಲವು ವರ್ಷಗಳ ನಂತರ ಅವರ ಸಂಬಂಧವು ಹದಗೆಟ್ಟಿತ್ತು. ಮಹಿಳೆಯು ತನ್ನ ಪತಿ ಕೌಟುಂಬಿಕ ದೌರ್ಜನ್ಯ ಹಾಗೂ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ 2017ರಲ್ಲಿ ದೂರು ದಾಖಲಿಸಿದ್ದರು. ಸೆಕ್ಷನ್ 506, 498A, 323, ಮತ್ತು 377 ಮತ್ತು POCSO ಕಾಯಿದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮೇಲಿನ ಸೆಕ್ಷನ್‌ಗಳ ಜೊತೆಗೆ, ಸೆಕ್ಷನ್ 376 (ಅತ್ಯಾಚಾರ) ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳನ್ನು ಕೂಡಾ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಬಳಸಲಾಗಿದೆ.

ಶಾಸಕಾಂಗವು ಈ ಸಮಸ್ಯೆಯನ್ನು ಪರಿಶೀಲಿಸಿ, ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿ ಅಸ್ತಿತ್ವದಲ್ಲಿರುವ ವಿನಾಯಿತಿಯನ್ನು ಬದಲಾಯಿಸುವ ಬಗ್ಗೆ ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ. “ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಗುರುತಿಸಬೇಕೇ ಅಥವಾ ಶಾಸಕಾಂಗವು ವಿನಾಯಿತಿಯನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಈ ನ್ಯಾಯಾಲಯವು ಉಚ್ಚರಿಸುತ್ತಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ಲೈವ್ ಲಾ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಆದರೂ, ತನ್ನ ಹೆಂಡತಿಯ ಮೇಲೆ ಹಲ್ಲೆ ಅಥವಾ ಅತ್ಯಾಚಾರ ಎಸಗುವುದರಿಂದ ಪತಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ಮಹಿಳೆಗೆ ಮಹಿಳೆಯಾಗಿ ನಿರ್ದಿಷ್ಟ ಸ್ಥಾನಮಾನವನ್ನು ನೀಡಲಾಗುತ್ತದೆ; ಹೆಂಡತಿಯಾಗಿರುವ ಮಹಿಳೆಗೆ ವಿಭಿನ್ನ ಸ್ಥಾನಮಾನವನ್ನು ನೀಡಲಾಗುತ್ತದೆ. ಅಂತೆಯೇ, ಒಬ್ಬ ಪುರುಷ, ಅವನು ಪುರುಷನಾಗಿರುವುದರಿಂದ ಅವನ ಕೃತ್ಯಗಳಿಗೆ ಶಿಕ್ಷೆಯಾಗುತ್ತದೆ; ಒಬ್ಬ ಪುರುಷನು ಗಂಡನಾಗಿರುವುದರಿಂದ ಅವನ ಕೃತ್ಯಗಳಿಗೆ ವಿನಾಯಿತಿ ನೀಡಲಾಗುತ್ತದೆ. ಈ ಅಸಮಾನತೆಯೇ ಸಮಾನತೆಯ ಹಕ್ಕಿನ ಬಗ್ಗೆ ಇರುವ ಸಂವಿಧಾನದ ಆತ್ಮವನ್ನು ನಾಶಪಡಿಸುತ್ತದೆ” ಎಂದು ಗಂಡಂದಿರಿಗೆ ಇರುವ ವಿನಾಯಿತಿಯ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧೀಕರಿಸದ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಜನವರಿಯಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಪೀಠವು ಭಾರತೀಯ ದಂಡ ಸಂಹಿತೆಯಲ್ಲಿನ ವೈವಾಹಿಕ ಅತ್ಯಾಚಾರದ ವಿನಾಯಿತಿಗಳನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಚರ್ಚೆ ಮುನ್ನಲೆಗೆ ಬಂದಿತ್ತು.

ಭಾರತದಲ್ಲಿ ಪತ್ನಿಯ ಮೇಲೆ ದೈಹಿಕ ಹಿಂಸೆ ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವೆಂದು ಪರಿಗಣಿಸಲಾಗಿದೆಯೆ ಹೊರತು ಪತ್ನಿಯ ಮೇಲೆ ಪತಿ ನಡೆಸುವ ಅತ್ಯಾಚಾರವನ್ನಲ್ಲ.

ಇದನ್ನೂ ಓದಿ: ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...