Homeಕರ್ನಾಟಕಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ ಬೆನ್ನಲ್ಲೇ ರೇವಣ್ಣನ ಶಾಸಕ ಸ್ಥಾನಕ್ಕೂ ಕುತ್ತು!

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ ಬೆನ್ನಲ್ಲೇ ರೇವಣ್ಣನ ಶಾಸಕ ಸ್ಥಾನಕ್ಕೂ ಕುತ್ತು!

- Advertisement -
- Advertisement -

ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಘೋಷಿಸಿತ್ತು. ಇದೀಗ ಶಾಸಕರಾಗಿ ಹೆಚ್​.ಡಿ.ರೇವಣ್ಣ  ಆಯ್ಕೆ ಅಸಿಂಧು ಕೋರಿ ಅರ್ಜಿ ವಿಚಾರಣೆಗೆ ಬಂದಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಹೊಳೆನರಸೀಪುರದಿಂದ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡಿರುವ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು(ಸೆಪ್ಟೆಂಬರ್ 04) ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಮಾಡಿದೆ.

ಈ ಹಿಂದೆ ಇದೇ ಚುನಾವಣಾ ತಕರಾರು ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ವಿರುದ್ಧ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಿತ್ತು. ಇದೀಗ ಸಮನ್ಸ್​ ಜಾರಿಗೆ ಆದೇಶಿಸಿದೆ.

”ಹೆಚ್.ಡಿ. ರೇವಣ್ಣ ಅವರು ಚುನಾವಣಾ ಅಕ್ರಮಗಳಿಂದ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸಬೇಕು” ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ಕೋರ್ಟ್​ಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ

ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್​ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎಂಪಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು 2019ರಲ್ಲಿ ಹೈಕೋರ್ಟ್ ನಲ್ಲಿ ಅವರ ವಿರುದ್ಧ ಅರ್ಜಿ ಸಲ್ಲಿಕೆಯಾಗಿತ್ತು.

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರಜ್ವಲ್ ರೇವಣ್ಣ ಅವರು ಚೊಚ್ಚಲ ಪ್ರಯತ್ನದಲ್ಲೇ ಜಯ ಗಳಿಸಿದ್ದರು. ಆದರೆ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನದಲ್ಲಿ ಸೋಲು ಕಂಡ ಪರಾಜಿತ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ಅವರು 2019ರ ಜೂನ್ 26ರಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು.

ಆದರೆ ಅವರ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಅಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...