Homeಕರ್ನಾಟಕಉಪ್ಪಿನಂಗಡಿ: ಹಿಜಾಬ್‌ಗೆ ಅವಕಾಶ ನೀಡಿ ಎಂದು ಪ್ರತಿಭಟಿಸಿದ್ದ 23 ವಿದ್ಯಾರ್ಥಿನಿಯರ ಅಮಾನತು

ಉಪ್ಪಿನಂಗಡಿ: ಹಿಜಾಬ್‌ಗೆ ಅವಕಾಶ ನೀಡಿ ಎಂದು ಪ್ರತಿಭಟಿಸಿದ್ದ 23 ವಿದ್ಯಾರ್ಥಿನಿಯರ ಅಮಾನತು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ.

“ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ,” ಎಂದು ಪುತ್ತೂರು ಬಿಜೆಪಿ ಶಾಸಕ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷ ಸಂಜೀವ ಮಠಂದೂರು ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ.

ಕಳೆದ ವಾರ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು, ಸ್ಕಾರ್ಫ್ ಧರಿಸಲು ತಮಗೆ ಅನುಮತಿ ನೀಡಬೇಕೆಂದು ಒತ್ತಾಯಿಸಿ, ಪ್ರತಿಭಟಿಸಿದ್ದರು. ಈ ಬಗ್ಗೆ ಸೋಮವಾರ ಸಿಡಿಸಿ ಸಭೆ ನಡೆಸಿ ಅವರನ್ನು ಅಮಾನತುಗೊಳಿಸಿದೆ.

ಇದನ್ನೂ ಓದಿ: ಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

ಈ ಹಿಂದೆಯೂ ಹಿಜಾಬ್‌ ಧರಿಸಿ ಕಾಲೇಜಿಗೆ ಬಂದಿದ್ದ ಏಳು ವಿದ್ಯಾರ್ಥಿನಿಯರನ್ನು ಸಮಿತಿ ಅಮಾನತುಗೊಳಿಸಿತ್ತು.

ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಬಟ್ಟೆಯನ್ನು ನಿಷೇಧಿಸಿರುವ ಕರ್ನಾಟಕ ಸರ್ಕಾರದ ಆದೇಶವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಇಸ್ಲಾಂ ಧರ್ಮದಲ್ಲಿ ಸ್ಕಾರ್ಫ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರ ಇರುವ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲರೂ ಏಕರೂಪದ ಉಡುಗೆ ನಿಯಮವನ್ನು ಪಾಲಿಸಬೇಕು ಎಂದು ಈ ವರ್ಷದ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.

ಹಿಜಾಬ್‌ ಕುರಿತ ಕರ್ನಾಟಕ ಹೈಕೋರ್ಟ್‌ ತೀರ್ಪು ತನ್ನ ಮುಂದಿರುವ ಅಗತ್ಯ ಪ್ರಶ್ನೆಗಳನ್ನು ಬದಿಗಿಟ್ಟಿದೆ ಎಂದು ಬೆಂಗಳೂರಿನ ವಿದ್ಯಾರ್ಥಿ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿತ್ತು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌), ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ (ಎಸ್‌ಐಒ), ಸ್ಟೂಡೆಂಟ್ಸ್ ಕಲೆಕ್ಟೀವ್ ಬೆಂಗಳೂರು, ದಲಿತ ವಿದ್ಯಾರ್ಥಿ ಪರಿಷತ್‌ (ಡಿವಿಪಿ), ಸ್ಟೂಡೆಂಟ್ಸ್ ಕ್ರಿಶ್ಚಿಯನ್ ಮೂವ್‌ಮೆಂಟ್‌ ಆಫ್ ಇಂಡಿಯಾ (ಎಸ್‌ಸಿಎಂಐ), ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ (ಜಿಐಒ) ಸಂಘಟನೆಗಳು ಈ ಒಕ್ಕೂಟದಲ್ಲಿದ್ದು, ಹೈಕೋರ್ಟ್ ತೀರ್ಪಿನ ಕುರಿತು ಆಕ್ಷೇಪಗಳನ್ನು ಎತ್ತಿ‌ವೆ.


ಇದನ್ನೂ ಓದಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...