Homeಕರ್ನಾಟಕನೆರೆ ಭೀತಿಯಲ್ಲಿ ಜನತೆ: ಸರ್ಕಾರ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ನೆರೆ ಭೀತಿಯಲ್ಲಿ ಜನತೆ: ಸರ್ಕಾರ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿಗಳು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದಿದ್ದಾರೆ.

ರಾಜ್ಯ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಇತ್ತೀಚೆಗೆ ವರ್ಗಾವಣೆಗೊಂಡಿರುವ ಬಿಬಿಎಂಪಿ ಆಯುಕ್ತರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿರುವುದರಿಂದ ಪ್ರವಾಹ ಪರಿಸ್ಥಿತಿಯ ಉಸ್ತುವಾರಿ ಕಾರ್ಯ ಕುಂಠಿತಗೊಂಡಿದೆ. ಮುಖ್ಯಮಂತ್ರಿಗಳು ಈ ಕಡೆತಕ್ಷಣ ಗಮನಹರಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...