Homeಕರ್ನಾಟಕಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

- Advertisement -
- Advertisement -

ಇತ್ತೀಚೆಗೆ ಸುಲಿಗೆ ಆರೋಪ ಮತ್ತು ಸುದ್ದಿ ಪ್ರಸಾರಕ್ಕೆ ತಡೆಯಾಜ್ಞೆ ತಂದು ಸಾಕಷ್ಟು ವಿವಾದಕ್ಕೆ ಒಳಗಾಗಿದ್ದ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್‌ ಅವರನ್ನು ಸಿಐಡಿಯಿಂದ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಸರ್ಕಾರದ ನಿಗಮ ಮಂಡಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ಸಿಐಡಿಯಲ್ಲಿ ಎಸ್‌ಪಿ ಆಗಿರುವ ರವಿ ಡಿ ಚನ್ನಣ್ಣನವರ್‌ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ  ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದ್ದಾರೆ. ಐಪಿಎಸ್ ಅಧಿಕಾರಿಯನ್ನು ನಿಗಮ ಮಂಡಳಿಗೆ ವರ್ಗಾವಣೆ ಮಾಡಿರುವ ಸರ್ಕಾರದ ನಿರ್ಧಾರದ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ.

ಇತ್ತಿಚೆಗೆ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿತ್ತು. ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿತ್ತು. ಆ ಬಳಿಕ ರವಿ ಚನ್ನಣ್ಣವರ್‌ ಈ ಪ್ರಕರಣದಲ್ಲಿ ಯಾವುದೇ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದರು.

ಇದನ್ನೂ ಓದಿ: ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಡಿ ಚನ್ನಣ್ಣನವರ್‌

ರವಿ ಡಿ. ಚನ್ನಣ್ಣನವರ್ ಸೇರಿ 9 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಒಂಡ ಅಧಿಕಾರಿಗಳ ಪಟ್ಟಿ ಹೀಗಿದೆ.

1. ಭೀಮಾಶಂಕರ ಎಸ್ ಗುಳೇದ್ – ಡಿಸಿಪಿ, ಬೆಂಗಳೂರು ಪೂರ್ವ

2. ಅಬ್ದುಲ್ ಅಹಾದ್ – ಕೆಎಸ್‌ಆರ್‌ಟಿಸಿ ನಿರ್ದೇಶಕ

3. ಟಿ. ಶ್ರೀಧರ್ – ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿ (DCRE)

4. ಟಿ.ಪಿ. ಶಿವಕುಮಾರ್ – ಚಾಮರಾಜನಗರ ಎಸ್‌ಪಿ

5. ದಿವ್ಯಸಾರ ಥಾಮಸ್- ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ

6. ಡೆಕ್ಕ ಕಿಶೋರ್ ಬಾಬು – ಬೀದರ್ ಪೊಲೀಸ್ ವರಿಷ್ಠಾಧಿಕಾರಿ (SP)

7. ಎ. ಗಿರಿ – ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ

8. ಡಿ.ಎಲ್. ನಾಗೇಶ್ – ಸಿಐಡಿ ಎಸ್‌ಪಿ


ಇದನ್ನೂ ಓದಿ: ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನು ಮುಂದೆ ಈ ಅಧಿಕಾರಿಯನ್ನು ಯಾವ ಕಾರಣಕ್ಕೂ ಪೊಲೀಸ್ ಇಲಾಖೆಯ ಹುದ್ದೆಗಳಲ್ಲಿ ನೇಮಿಸಬಾರದು.

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...