ಇತ್ತೀಚೆಗೆ ಸುಲಿಗೆ ಆರೋಪ ಮತ್ತು ಸುದ್ದಿ ಪ್ರಸಾರಕ್ಕೆ ತಡೆಯಾಜ್ಞೆ ತಂದು ಸಾಕಷ್ಟು ವಿವಾದಕ್ಕೆ ಒಳಗಾಗಿದ್ದ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಸಿಐಡಿಯಿಂದ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಸರ್ಕಾರದ ನಿಗಮ ಮಂಡಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.
ಸಿಐಡಿಯಲ್ಲಿ ಎಸ್‌ಪಿ ಆಗಿರುವ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದ್ದಾರೆ. ಐಪಿಎಸ್ ಅಧಿಕಾರಿಯನ್ನು ನಿಗಮ ಮಂಡಳಿಗೆ ವರ್ಗಾವಣೆ ಮಾಡಿರುವ ಸರ್ಕಾರದ ನಿರ್ಧಾರದ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ.
ಇತ್ತಿಚೆಗೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿತ್ತು. ಈ ಕುರಿತು ‘ದಿ ಫೈಲ್.ಇನ್’ ವಿಸ್ತೃತವಾಗಿ ವರದಿ ಮಾಡಿತ್ತು. ಆ ಬಳಿಕ ರವಿ ಚನ್ನಣ್ಣವರ್ ಈ ಪ್ರಕರಣದಲ್ಲಿ ಯಾವುದೇ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದರು.
ಇದನ್ನೂ ಓದಿ: ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಡಿ ಚನ್ನಣ್ಣನವರ್
ರವಿ ಡಿ. ಚನ್ನಣ್ಣನವರ್ ಸೇರಿ 9 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಒಂಡ ಅಧಿಕಾರಿಗಳ ಪಟ್ಟಿ ಹೀಗಿದೆ.
1. ಭೀಮಾಶಂಕರ ಎಸ್ ಗುಳೇದ್ – ಡಿಸಿಪಿ, ಬೆಂಗಳೂರು ಪೂರ್ವ
2. ಅಬ್ದುಲ್ ಅಹಾದ್ – ಕೆಎಸ್‌ಆರ್‌ಟಿಸಿ ನಿರ್ದೇಶಕ
3. ಟಿ. ಶ್ರೀಧರ್ – ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ (DCRE)
4. ಟಿ.ಪಿ. ಶಿವಕುಮಾರ್ – ಚಾಮರಾಜನಗರ ಎಸ್‌ಪಿ
5. ದಿವ್ಯಸಾರ ಥಾಮಸ್- ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ
6. ಡೆಕ್ಕ ಕಿಶೋರ್ ಬಾಬು – ಬೀದರ್ ಪೊಲೀಸ್ ವರಿಷ್ಠಾಧಿಕಾರಿ (SP)
7. ಎ. ಗಿರಿ – ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ
8. ಡಿ.ಎಲ್. ನಾಗೇಶ್ – ಸಿಐಡಿ ಎಸ್‌ಪಿ
ಇದನ್ನೂ ಓದಿ: ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು
ಇನ್ನು ಮುಂದೆ ಈ ಅಧಿಕಾರಿಯನ್ನು ಯಾವ ಕಾರಣಕ್ಕೂ ಪೊಲೀಸ್ ಇಲಾಖೆಯ ಹುದ್ದೆಗಳಲ್ಲಿ ನೇಮಿಸಬಾರದು.