Homeಕರ್ನಾಟಕಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

- Advertisement -
- Advertisement -

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟರಾಗಿದ್ದರು. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ `ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್‌ ಆರು ತಿಂಗಳು ಮಗು. ನಂತರ ವಸಂತ ಗೀತ (1980) ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್‌, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28 ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್‌. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್‌ ರಾಜ್‌ಕುಮಾರ್‌ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್‌ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.  ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು.   ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು , ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, ಮಾಯಾಬಜಾರ್’, ಫ್ರೆಂಚ್‌ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್‌ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್‌ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಷನ್‌ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ`ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ, ಫ್ಯಾಮಿಲಿ ಪವರ್‌ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ.

ಡಿಸೆಂಬರ್ 1 ,1999 ರಂದು ಚಿಕ್ಕಮಗಳೂರಿನ ಅಶ್ವಿನಿ ರೇವಂತ್‌ರನ್ನು ವಿವಾಹವಾದರು. ಈ ದಂಪತಿಗೆ ಧೃತಿ ಮತ್ತು ವಂದಿತಾ ಎಂಬ ಪುತ್ರಿಯರಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡುತ್ತಿದ್ದೇವೆ: ಡಾ.ರಂಗನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...