Homeಕರ್ನಾಟಕಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

'ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ..?'

- Advertisement -
- Advertisement -

“ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ (ನಿಮ್ಹಾನ್ಸ್)ಯ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಮೂರನೇ ಸ್ಥಾನ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

“ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ” ಎಂದಿದ್ದಾರೆ.

“ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ..?” ಎಂದು ಪ್ರಶ್ನಿಸಿದ್ದಾರೆ.

“ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ?” ಎಂದು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ..? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು” ಎಂದು #ನಮ್ಮಕನ್ನಡ #ನಮ್ಮಕರ್ನಾಟಕ ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...