Homeಕರ್ನಾಟಕಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

ಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

- Advertisement -
- Advertisement -

ಹಿರಿಯ ರಂಗಕರ್ಮಿ, ನಟ, ಚಿಂತಕ, ಬರಹಗಾರ, ನಾಡಿನ ಸಾಕ್ಷಿಪ್ರಜ್ಞೆಯಾಗಿದ್ದ ಪ್ರೊ.ಜಿ.ಕೆ ಗೋವಿಂದ ರಾವ್ (84) ಶುಕ್ರವಾರ (ಅ.15) ಮುಂಜಾನೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.

ವಿಚಾರವಾದಿ ಪ್ರೊ. ಜಿ.ಕೆ. ಗೋವಿಂದ ರಾವ್ ಅವರು 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಪ್ರೀತಿಯಿಂದ ಜಿಕೆಜಿ ಸರ್‌ ಎಂದು ಕರೆಸಿಕೊಳ್ಳುತ್ತಿದ್ದ ಅವರು ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿ, ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.

ರಂಗಭೂಮಿ, ಸಿನಿಮಾರಂಗದಲ್ಲಿ ಸಕ್ರಿಯ ಒಡನಾಟ ಇಟ್ಟುಕೊಂಡಿದ್ದ ಇವರು ಕಥಾ ಸಂಗಮ, ಗ್ರಹಣ, ಮಿಥಿಲೆಯ ಸೀತೆಯರು, ಕರ್ಫ್ಯೂ, ನಿಶ್ಯಬ್ದ, ಭೂಮಿ ತಾಯಿಯ ಚೊಚ್ಚಲ ಮಗ, ಅಜ್ಜು, ಶಾಸ್ತ್ರಿ, ರೇ ಮುಂತಾದ ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರು.

ಜಿಕೆಜಿ ಅವರು ಸಮಕಾಲೀನ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಭಾಗವಹಿಸಿ ತಮ್ಮ ಜನಪರ ನಿಲುವು ಪ್ರಕಟಿಸಿದ್ದಾರೆ. ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್ ಸಂವಾದ (ವಿಮರ್ಶಾ ಲೇಖನಾ ಮಾಲಿಕೆ), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? ಮುಂತಾದ ಹಲವು ಕೃತಿಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನಕ್ಕೆ ಗಣ್ಯರು, ಸಾಮಾಜಿಕ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. “ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ” ಎಂದಿದ್ದಾರೆ.
Actor, literature, thinker G K Govindarao is no more
“ವಯಸ್ಸು, ಅನಾರೋಗ್ಯದಿಂದ ದೇಹ ಬಳಲಿದ್ದರೂ ಆಗಾಗ ತಮ್ಮ ಕಂಚಿನ ಕಂಠದಿಂದ ನಮ್ಮನ್ನೆಲ್ಲ ಬಡಿದೆಚ್ಚರಿಸುತ್ತಿದ್ದ, ಕೊನೆ ಉಸಿರಿನ ವರೆಗೆ ಸೈದ್ಧಾಂತಿಕವಾಗಿ ರಾಜಿ ಮಾಡಿಕೊಳ್ಳದೆ ನೇರ-ನಿಷ್ಠುರ ಮಾತು, ಬರಹಗಳ ಮೂಲಕ ನಾಡಿನ ನಿಜವಾದ ಸಾಕ್ಷಿ‌ಪ್ರಜ್ಞೆಯಂತಿದ್ದ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ. ಹಳೆಮರಗಳು ಉರುಳಿ ಬೀಳಲಿವೆ ಎನ್ನುವುದು ಅವರಿಗೆ ಗೊತ್ತಿತ್ತು, ಇದಕ್ಕಾಗಿಯೇ ಹೊಸ ಚಿಗುರು ಹುಟ್ಟಿಸುವ ಸತತ ಪ್ರಯತ್ನದಲ್ಲಿದ್ದರು. ಅವರ ನಿರೀಕ್ಷೆಯ ಹೊಸ ಕಾಲವನ್ನು ಕಾಣಲಾಗದೆ ಅಗಲಿ ಹೋದರು.
ಈ ‌ನಿರ್ವಾತ ಬಹಳ ದಿನ ನಮ್ಮನ್ನು ಕಾಡಲಿದೆ. ಹಿರಿಯ ಜೀವಕ್ಕೆ ಒಂದು ನಮಸ್ಕಾರ, ಇನ್ನೊಂದು Sorry” ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಬರೆದಿದ್ದಾರೆ.

 

ಪ್ರೊ. ಜಿ.ಕೆ ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು, ಸಾವಿರಾರೂ ಅಭಿಮಾನಿಗಳು ಮತ್ತು ಶಿಷ್ಯರನ್ನು ಅಗಲಿದ್ದಾರೆ.


ಇದನ್ನೂ ಓದಿ: ಮಹಿಳಾ ಚಳವಳಿಗೆ ದೊಡ್ಡ ನಷ್ಟ: ಪ್ರಖ್ಯಾತ ಸ್ತ್ರೀವಾದಿ ಕಮಲ ಭಾಸಿನ್‌ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...