Homeಕರ್ನಾಟಕಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ...

ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ

- Advertisement -
- Advertisement -

ಕೊಪ್ಪಳದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇತ್ತಿಚೆಗೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ವಿಧಿಸಿದ್ದ ಘಟನೆ ಮಾಸುವ ಮುನ್ನವೇ, ಮತ್ತೆ ಅಂತಹದ್ದೇ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ನಾಗನಕಲ್ಲ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ದಲಿತ ಯುವಕ ದೇವಸ್ಥಾನಕ್ಕೆ ತೆರಳಿದ್ದಕ್ಕೆ ದೇವಸ್ಥಾನದ ಆಡಳಿತ ಮಂಡಳಿ 11 ಸಾವಿರ ರೂಪಾಯಿ ದಂಡ ವಿಧಿಸಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣ ನಡೆದ್ದು ಹಲವು ದಿನಗಳಾಗಿದ್ದು, ಮಿಯಾಪುರದಲ್ಲಿ ಮಗು ಪೋಷಕರಿಗೆ ದಂಡ ವಿಧಿಸಿದ್ದ ಪ್ರಕರಣ ಹೊರ ಬಂದ ಮೇಲೆ ಇದು ಮುನ್ನಲೆಗೆ ಬಂದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು ಸ್ವಯಂ ಪ್ರೇರಣೆಯಿಂದ ದೇವಸ್ಥಾನದ ಪೂಜಾರಿ ಸೇರಿದಂತೆ ಆಡಳಿತ ಮಂಡಳಿಯ ಒಟ್ಟು 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ದೇವಸ್ಥಾನಕ್ಕೆ ಹೋಗಿ ತಾನೇ ಪೂಜೆ ಸಲ್ಲಿಸಿ ಬಂದಿದ್ದರಿಂದ ದೇವಸ್ಥಾನ ಮೈಲಿಯಾಗಿದೆ ಎಂದು ದೇವಾಲಯ ಆಡಳಿತ ಮಂಡಳಿಯ ಪ್ರಮುಖರು ಮೈಲಿಗೆ ನಿವಾರಣೆ, ಶುದ್ಧೀಕರಣ ಮತ್ತು ಪಶ್ಚಾತಾಪ ಸೇರಿ ಒಟ್ಟು 5 ಲಕ್ಷ ದಂಡ ಕಟ್ಟುವಂತೆ ಆದೇಶಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ದಂಡದ ಮೊತ್ತ ಹೆಚ್ಚಾಗಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದರಿಂದ ಕೊನೆಗೆ 11 ಸಾವಿರ ದಂಡ ಕಟ್ಟಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು ಎಂದು ವರದಿಯಾಗಿದೆ.

ಗ್ರಾಮದ ದೇವಸ್ಥಾನದ ಪೂಜಾರಿ ಬಸವರಾಜ ಬಡಿಗೇರ, ಆಡಳಿತ ಮಂಡಳಿಯ ರೇವಣಯ್ಯಸ್ವಾಮಿ ಗಾಲಿಮಠ, ಶೇಖರಪ್ಪ ರೇವಣಕಿ, ಶಂಕ್ರಪ್ಪ ಗುಂಜಳ್ಳಿ, ಪ್ರಶಾಂತ ತಮ್ಮಣ್ಣನವರ, ಬಸವರಾಜ ತಳವಾರ, ಕಾಡಪ್ಪ ನಾಯಕ ಮತ್ತು ದುರುಗೇಶ ಸಂಕನಾಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇತ್ತಿಚೆಗೆ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು 25 ಸಾವಿರ ರೂಪಾಯಿ ದಂಡ ದಂಡ ವಿಧಿಸಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

“ಕೊಪ್ಪಳ ಜಿಲ್ಲೆಯಲ್ಲಿ ಸರಣಿ ಘಟನೆಗಳು ಆಗುತ್ತಿವೆ. ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಅವರ ವ್ಯಾಪ್ತಿಯ ಗ್ರಾಮಗಳಲ್ಲಿ ದಲಿತರ ಮೇಲೆ ಅವಮಾನ, ಶೋಷಣೆ ನಡೆಯುತ್ತಲೇ ಇವೆ. ಪೊಲೀಸರು ಉಳ್ಳವರ ಪರ ಇದ್ದಾರೆ. ಹೀಗಾಗಿ ಅವರು ಘಟನೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವರನ್ನು ಗಂಗಾವತಿಯಿಂದ ವರ್ಗಾವಣೆ  ಮಾಡಬೇಕು” ಎಂದು  ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ, ಹೋರಾಟಗಾರ ಕರಿಯಪ್ಪ ಗುಡಿಮನಿ ಆಗ್ರಹಿಸಿದ್ದರು.


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...