Homeಕರ್ನಾಟಕಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

ಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

- Advertisement -
- Advertisement -

“ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದ ಬಳಿಕ ಇಂತಹ ಒಂದು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಡಿ.ಕೆ.ಶಿವಕುಮಾರ್‌ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಾ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಮಗ ಆಶಿಶ್ ಮೋನು ಮಿಶ್ರಾ ಮತ್ತು ಅವರ ಬೆಂಗಾವಲು ಕಾರು ಹರಿದು, ನಾಲ್ವರು ರೈತರು ಹತ್ಯೆಗೀಡಾಗಿದ್ದಾರೆ. ಬಳಿಕ ಹಿಂಸಾಚಾರದಲ್ಲಿ ರೈತರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ.

“ಸಾರ್ವಜನಿಕರಲ್ಲಿ ಮನವಿ: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವೀಡಿಯೊ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ” ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

“ಬಿಜೆಪಿ ನಾಯಕರ ಕಾರು ರಸ್ತೆಯಲ್ಲಿ ಹೋಗುವಾಗ ಜಾಗೃತರಾಗಿದೆ. ಇತ್ತಿಚಿನ ದಿನಗಳಲ್ಲಿ ಅವರು ಯಾರ ಮೇಲಾದರೂ ಹರಿಸಿ ಕೊಲೆ ಮಾಡುತ್ತಿದ್ದಾರೆ. ನಿಮ್ಮ ಪೋನಿನ ಕ್ಯಾಮರಾ ಅನ್‌ನಲ್ಲಿ ಇರಬೇಕು. ಅವರು ಯಾವಾಗ, ಎಷ್ಟು ಗಂಟೆಗೆ ಹೇಗೆ ಕಾರು ಹರಿಸಿ ಕೊಲೆ ಮಾಡುತ್ತಾರೋ ತಿಳಿಯದು. ಹಾಗಾಗಿ ನೀವು ಸೆರೆ ಹಿಡಿಯುವ ದೃಶ್ಯ ದೇಶಕ್ಕೆ ನೀಡುವ ಕೊಡುಗೆ” ಎಂದು 1:12 ಸೆಕೆಂಡ್‌ಗಳ ವಿಡಿಯೊ ಮೂಲಕ ಡಿ.ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡಕ್ಕೆ ಕಾರಣರಾದ ಆರೋಪಿ ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.


ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...