Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...