- Advertisement -
- Advertisement -
ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿದೆ.
ಎಐಸಿಸಿ ಇಂದು ವಿಧಾನ ಪರಿಷತ್ ಚುನಾವಣೆಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆಯನ್ನು ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬಿಡುಗಡೆ ಮಾಡಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ..
ಬೆಂಗಳೂರು ಪದವೀಧರರ ಕ್ಷೇತ್ರ-ರಾಮೋಜಿ ಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
ನೈರುತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್,
ಆಗ್ನೇಯ ಶಿಕ್ಷಕರ ಕ್ಷೇತ್ರ- ಡಿ.ಟಿ.ಶ್ರೀನಿವಾಸ್
ಈಶಾನ್ಯ ಪದವೀಧರರ ಕ್ಷೇತ್ರ- ಡಾ.ಚಂದ್ರಶೇಖರ್ ಬಿ. ಪಾಟಿಲ್
ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ವ್ಯಕ್ತಿ ಕಸ್ಟಡಿಯಲ್ಲಿ ಸಾವು; ಪೊಲೀಸರ ವಿರುದ್ಧ ಕೊಲೆ ಆರೋಪ ಮಾಡಿದ ಕುಟುಂಬ


