Homeಕರ್ನಾಟಕಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ: ಡಿ.10ಕ್ಕೆ ಮತದಾನ

ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ: ಡಿ.10ಕ್ಕೆ ಮತದಾನ

- Advertisement -
- Advertisement -

ಕರ್ನಾಟಕ ವಿಧಾನ ಪರಿಷತ್‌ನ 75 ಸ್ಥಾನಗಳ ಪೈಕಿ  25 ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣಾ ದಿನಾಂಕ ನಿಗದಿಗೊಳಿಸಿದೆ. ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆ ಇದಾಗಿದ್ದು, ಡಿಸೆಂಬರ್‌ 10 ಕ್ಕೆ ಮತದಾನ ನಡೆಯಲಿದೆ.

ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ನವೆಂಬರ್ 16 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ನವೆಂಬರ್ 24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಡಿಸೆಂಬರ್ 10 (ಶುಕ್ರವಾರ) ಬೆಳಗ್ಗೆ 8 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳಿಂದ ಚುನಾವಣೆ ನಡೆಯಲಿದೆ.

ಕರ್ನಾಟಕ ವಿಧಾನ ಪರಿಷತ್‌ನ ಒಟ್ಟು ಸದಸ್ಯರ ಸಂಖ್ಯೆ 75 . ಪರಿಷತ್ತಿನ ಒಟ್ಟು ಸದಸ್ಯರಲ್ಲಿ ಮೂರನೇ ಒಂದರಷ್ಟು ಸದಸ್ಯರನ್ನು ಇತರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಗ್ರಾಮ ಸಭೆ, ಗ್ರಾಮ ಪಂಚಾಯಿತಿ, ಪಂಚಾಯಿತಿ ಸಮಿತಿಗಳು ಹಾಗು ಜಿಲ್ಲಾ ಪರಿಷತ್ತುಗಳ ಸದಸ್ಯರು ಆಯ್ಕೆ ಮಾಡುತ್ತಾರೆ.

ಇನ್ನು ಮೂರನೇ ಒಂದರಷ್ಟು ಸದಸ್ಯರನ್ನು ವಿಧಾನ ಸಭಾ ಸದಸ್ಯರು ಆಯ್ಕೆ ಮಾಡುತ್ತಾರೆ. ಪರಿಷತ್‌ನ ಒಟ್ಟು ಸದಸ್ಯರಲ್ಲಿ ಆರನೇ ಒಂದರಷ್ಟು ಸದಸ್ಯರು ರಾಜ್ಯಪಾಲರಿಂದ ನೇರವಾಗಿ ನೇಮಕವಾಗುತ್ತಾರೆ. ಸಾಹಿತ್ಯ, ವಿಜ್ಞಾನ, ಕಲೆ, ಸಮಾಜ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯಪಾಲರು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುತ್ತಾರೆ.


ಇದನ್ನೂ ಓದಿ: ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...