Homeಕರ್ನಾಟಕ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

- Advertisement -
- Advertisement -

ರಾಜ್ಯದ ಸರ್ಕಾರಿ ಬಸ್ಸಿನ ‘ಕೆಎಸ್‌ಆರ್‌‌ಟಿಸಿ’ ಎಂಬ ಹೆಸರನ್ನು ಕರ್ನಾಟಕ ರಾಜ್ಯ ಸಾರಿಗೆ ನಿಗಮವು ಕಳೆದುಕೊಂಡಿದ್ದು, ಇನ್ನು ಮುಂದಕ್ಕೆ ಈ ಹೆಸರನ್ನು ಕರ್ನಾಟಕವು ಈ ಹೆಸರನ್ನು ಬಳಸುವಂತಿಲ್ಲ. ಕೇಂದ್ರ ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯು ‘ಕೆಎಸ್‌ಆರ್‌ಟಿಸಿ’ ಹೆಸರು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದೆ ಎಂದು ತೀರ್ಪಿತ್ತಿದೆ.

ಕೇರಳ ಮತ್ತು ಕರ್ನಾಟಕದ ಸಾರಿಗೆ ಇಲಾಖೆಗಳ ನಡುವಿನ ಏಳು ವರ್ಷಗಳ ಕಾನೂನು ಹೋರಾಟದ ಅಂತಿಮ ತೀರ್ಪು ಬುಧವಾರ ಪ್ರಕಟವಾಗಿದ್ದು, ‘ಕೇಂದ್ರ ವ್ಯಾಪಾರ ಗುರುತು ನೋಂದಾವಣೆ’ಯು ‘ಕೆಎಸ್‌ಆರ್‌ಟಿಸಿ’ ಎಂಬ ಸಂಕ್ಷಿಪ್ತ ಹೆಸರು ಕೇರಳ ರಸ್ತೆ ಸಾರಿಗೆಗೆ ಸೇರಿದೆ ಎಂದು ಹೇಳಿದೆ.  ಇದರ ಜೊತೆಗೆ ಕೇರಳವು ‘ಆನವಂಡಿ’ ಎಂಬ ಬಸ್ ಸೇವೆಯ ಜನಪ್ರಿಯ ಅಡ್ಡಹೆಸರಿನ ಮಾಲೀಕತ್ವವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ಆನ್‌ಲೈನ್‌ ಹುಡುಕಾಟದ ಸಮಯದಲ್ಲಿ ‘ಕೆಎಸ್‌ಆರ್‌ಟಿಸಿ’ ಎಂಬ ಸಂಕಿಪ್ತ ಪದವನ್ನು ಬಳಸಿ ಹುಡುಕಿದಾಗ ಕರ್ನಾಟಕ ಮತ್ತು ಕೇರಳ ಬಸ್‌ನ ವಿವರಗಳು ಕಾಣುತ್ತಿದ್ದರಿಂದ ಪ್ರಯಾಣಿಕರು ಗೊಂದಕ್ಕೆ ಒಳಗಾಗುತ್ತಿದ್ದರು. ಆದರೆ ಸಾವಿರಾರು ಜನರ ದೈನಂದಿನ ಪ್ರಯಾಣಕ್ಕಾಗಿ ಅವಲಂಬಿಸಿದ್ದ ಈ ಹೆಸರು ಅದಾಗಲೆ ಎರಡು ರಾಜ್ಯಗಳಲ್ಲೂ ಬ್ರಾಂಡ್‌ ಆಗಿ ವಿಕಸನಗೊಂಡಿದ್ದವು.

2014 ರಲ್ಲಿ ಕರ್ನಾಟಕವು ‘ಕೆಎಸ್‌ಆರ್‌ಟಿಸಿ’ ಬಳಕೆ ಮಾಡದಂತೆ ಕೇರಳಕ್ಕೆ ನೋಟಿಸ್ ನೀಡಿ, ಈ ಹೆಸರಿನ ಮೇಲೆ ತಾನು ಟ್ರೇಡ್‌ಮಾರ್ಕ್ ಪಡೆದುಕೊಂಡಿದ್ದೇನೆ ಎಂದು ಕರ್ನಾಟಕವು ಕಾನೂನು ಸಮರ ಸಾರಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೇರಳವು ತಾನು ಬಸ್‌ಗಳಲ್ಲಿ ‘ಕೆಎಸ್‌ಆರ್‌ಟಿಸಿ’ ಬ್ರಾಂಡ್‌ ಮೊದಲು ಬಳಸಿದ್ದು ಎಂದು ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯನ್ನು ಸಂಪರ್ಕಿಸಿತ್ತು. ಏಳು ವರ್ಷಗಳ ಕಾನೂನು ಸಮರದ ನಂತರ ಅಂತಿಮವಾಗಿ ಇದೀಗ ‘ಕೆಎಸ್‌ಆರ್‌ಟಿಸಿ’ ಪದವು ಕೇರಳ ರಾಜ್ಯ ಸಾರಿಗೆಗೆ ಸೇರಿದೆ.

ಇದನ್ನೂ ಓದಿ: ಬಿಹಾರದಲ್ಲಿ ಭಾರಿ ಮಳೆಯ ಹೊಡೆತಕ್ಕೆ ಇಬ್ಬಾಗವಾದ ಸೇತುವೆ

ಈ ಬಗ್ಗೆ ಪ್ರತಿಕ್ರಿಯೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿತ್ತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕೆಎಸ್‌ಆರ್‌ಟಿಸಿ ಬ್ರಾಂಡ್‌ ನೇಮ್‌ ಕೇರಳಕ್ಕೆ ಸೇರಿದುದರ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, “ಕೇರಳವು ಕೆಎಸ್ಆರ್ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ಮಾರ್ಕ್ ರಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು” ಎಂದು ಹೇಳಿದ್ದಾರೆ.

“ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದ್ದು, ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್ಮಾರ್ಕ್‌ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ. ಕರ್ನಾಟಕವಾಗಲಿ ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಕೇರಳದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ತಿರುವಾಂಕೂರು ರಾಜ ಕುಟುಂಬವು 1937 ರ ಬ್ರಿಟಿಷರ ಕಾಲದಲ್ಲೇ ಪ್ರಾರಂಭಿಸಿತು. ಮೊದಲಿಗೆ ತಿರುವಾಂಕೂರು ರಾಜ್ಯ ಸಾರಿಗೆ ಇಲಾಖೆ (ಟಿಎಸ್‌ಟಿಡಿ) ಎಂದು ಇದ್ದ ಹೆಸರು ನಂತರ 1965 ರಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಯಯಿತು. ಆದರೆ ಕರ್ನಾಟಕವು ಕೆಎಸ್‌ಆರ್‌ಟಿಸಿಯ ಸಂಕ್ಷಿಪ್ತ ಹೆಸರನ್ನು 1973 ಬಳಸಲಾರಂಭಿಸಿತ್ತು.

ಕೇರಳ ಸಾರಿಗೆ ಕಾರ್ಯದರ್ಶಿ ಬಿಜು ಪ್ರಭಾಕರ್ ಅವರು ತಮ್ಮ ಬಸ್‌ಗಳಲ್ಲಿ ಬ್ರಾಂಡ್ ಹೆಸರನ್ನು ಬಳಸುವುದನ್ನು ನಿಲ್ಲಿಸುವಂತೆ ಕೋರಿ ಕರ್ನಾಟಕ ಸಾರಿಗೆ ನಿಗಮಕ್ಕೆ ನೋಟಿಸ್ ಕಳುಹಿಸಲಾಗುವುದು ಎಂದು ಹೇಳಿದ್ದಾರೆ ಎಂದು ಆನ್‌ಮನೋರಮ ವರದಿ ಮಾಡಿದೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...