Homeಮುಖಪುಟಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

ಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

 ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ

- Advertisement -
- Advertisement -

ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಇತ್ತ ‘ಲವ್ ಜಿಹಾದ್’ ತಡೆಯುವ ಕಾನೂನು ಜಾರಿಗೆ ತರಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ತಿಳಿಸಿದ್ದಾರೆ.

ಇತ್ತಿಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, “ಅಲಹಾಬಾದ್ ಹೈಕೋರ್ಟ್ ಆದೇಶದ ಪ್ರಕಾರ, ಕರ್ನಾಟಕವು ವಿವಾಹದ ಸಲುವಾಗಿ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನನ್ನು ಜಾರಿಗೆ ತರುತ್ತದೆ” ಎಂದಿದ್ದಾರೆ.

“ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಕಿತ್ತು ಹಾಕುತ್ತಿರುವಾಗ ನಾವು ಮೌನವಾಗಿರುವುದಿಲ್ಲ. ಯಾರೇ ಇರಲಿ ಇಂತಹ ಕೃತ್ಯದಲ್ಲಿ ಭಾಗಿಯಾದರೆ ಕಠಿಣ ಶಿಕ್ಷೆಗೆ ಗುರಿಯಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಅಂತರ್​ಧರ್ಮೀಯ ವಿವಾಹಗಳನ್ನು ತಡೆಯಲು ಸೂಕ್ತ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಪ್ರೀತಿಯ ಹೆಸರಲ್ಲಿ ಯಾರೂ ಜಿಹಾದ್​ ಮಾಡುವಂತಿಲ್ಲ. ಯಾರಾದರೂ ಇಂತಹ ಕೆಲಸ ಮಾಡುತ್ತಿದ್ದರೆ, ಯಾರಾದರೂ ಧೈರ್ಯ ಮಾಡಿದರೆ ಅಂತವರಿಗೆ ತಕ್ಕ ಪಾಠ ಕಲಿಸಲಾಗುತ್ತದೆ. ಈ ದೃಷ್ಟಿಯಿಂದ ಕಾನೂನು ಜಾರಿಗೆ ತರಲಿದ್ದೇವೆ ಎಂದು ಹೇಳಿದ್ದಾರೆ.

“ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ”ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಸಿದ್ದಾರೆ.

MP CM Shivraj Singh Chouhan Tests Positive For Covid-19
PC: Otv

ಕಳೆದ ಮೂರು ದಿನಗಳ ಹಿಂದೆ, ಬಿಜೆಪಿಯ ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರು “ಹಿಂದೂ ಹುಡುಗಿಯರನ್ನು ಲವ್ ಜಿಹಾದ್ ನಿಂದ ರಕ್ಷಿಸಲು” ಕಾನೂನು ಬೇಕು ಎಂದು ಕೋರಿದ್ದರು. ಇದಕ್ಕಾಗಿ ಫರಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ  21 ವರ್ಷದ ಕಾಲೇಜು ಯುವತಿಯ ಹತ್ಯೆಯನ್ನು ಉಲ್ಲೇಖಿಸಿದ್ದರು.

ಹರಿಯಾಣ ಮತ್ತು ಉತ್ತರ ಪ್ರದೇಶ ಕೂಡ ಲವ್ ಜಿಹಾದ್ ವಿರುದ್ಧದ ಕಾನೂನನ್ನು ಪರಿಗಣಿಸುತ್ತಿವೆ. ನಾವು ಅದಕ್ಕೆ ಕಾನೂನು ರೂಪವನ್ನೂ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

ಒಂದು ಮತಾಂತರವು ಧರ್ಮದ ಭಾವನೆಯಿಂದ ಪ್ರೇರಿತವಾಗದಿದ್ದರೆ ಮತ್ತು ತನ್ನದೇ ಆದ ಉದ್ದೇಶಕ್ಕೆ ಒಳಗಾಗಿದ್ದರೆ ಅದು ಮತಾಂತರವಲ್ಲ. ಕೇವಲ ವಿವಾಹದ ಉದ್ದೇಶದಿಂದ ಆದ ಮತಾಂತರ ಮಾನ್ಯವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನವೆಂಬರ್‌ 1 ರಂದು ತೀರ್ಪು ನೀಡಿತ್ತು. ಧಾರ್ಮಿಕ ಮತಾಂತರ ಆಗುವ ಸಂದರ್ಭದಲ್ಲಿ ಮೂಲ ಧರ್ಮದ ಸಿದ್ಧಾಂತಗಳ ಬದಲಾಗಿ ಹೊಸ ಧರ್ಮದ ಸಿದ್ಧಾಂತಗಳಲ್ಲಿ ಪ್ರಾಮಾಣಿಕ ನಂಬಿಕೆ ಇರಬೇಕು” ಎಂದು ನ್ಯಾಯಾಲಯ ಹೇಳಿತ್ತು.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...