Homeಕರ್ನಾಟಕಮಂಗಳೂರು: ಚರಂಡಿಯಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣ, 20ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಗಳೂರು: ಚರಂಡಿಯಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣ, 20ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

- Advertisement -
- Advertisement -

ಮಂಗಳೂರಿನ ಉಳಾಯಿಬೆಟ್ಟು ಸಮೀಪದ ಪರಾರಿಯಲ್ಲಿ 8 ವರ್ಷದ ಬಾಲಕಿಯ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದ್ದ ಪ್ರಕರಣದಲ್ಲಿ ಪೊಲೀಸರು ಸುಮಾರು 20 ಮಂದಿ ಉತ್ತರ ಭಾರತದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಚರಂಡಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಾರಿ ಎಂಬಲ್ಲಿನ ರಾಜ್‌ಟೈಲ್ಸ್ ಹಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬದ 8 ವರ್ಷ ಬಾಲಕಿ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಘಟನೆ ಭಾನುವಾರ ಬೆಳಕಿಗೆ ಬಂದಿತ್ತು.

ಈ ಟೈಲ್ಸ್ ಫ್ಯಾಕ್ಟರಿಯಲ್ಲಿ ಅಸ್ಸಾಂ, ಬಿಹಾರ, ಜಾರ್ಖಂಡ್ ಮತ್ತು ರಾಜ್ಯದ ಹಲವು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿರುವ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಉಳಾಯಿಬೆಟ್ಟು ಸಮೀಪದ ಗುರುಪುರ ಸೇತುವೆಯ ಬಳಿಯ ಪರಾರಿ ಕ್ರಾಸ್‌ನಲ್ಲಿ ಕೇರಳ ಮೂಲದ ವ್ಯಕ್ತಿಗಳ ಮಾಲಿಕತ್ವದ ರಾಜ್‌ ಟೈಲ್ಸ್‌ ಫ್ಯಾಕ್ಟರಿ ಇದೆ. ಕಾರ್ಖಾನೆಯಲ್ಲಿ ಸುಮಾರು 25 ಮಂದಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಕುಟುಂಬದ ಕಾರ್ಮಿಕರ 8 ವರ್ಷದ ಬಾಲಕಿ ಭಾನುವಾರ ಸಂಜೆ ನಾಪತ್ತೆಯಾದ್ದರು. ಹುಡುಕಾಟ ನಡೆಸಿದಾಗ ಕಾರ್ಖಾನೆಯ ಸಮೀಪದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಜಾನ್ಸನ್‌ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಭಾಗವಾಗಿ ಪೊಲೀಸರು ರಾಜ್‌ ಟೈಲ್ಸ್‌ ಫ್ಯಾಕ್ಟರಿಯ ಸಿಸಿ ಕ್ಯಾಮೆರಾಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಆದರೆ ಮೃತದೇಹ ಪತ್ತೆಯಾದ ಜಾಗದಲ್ಲಿ ಓಡಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ರಾಜಸ್ಥಾನ: ಬಿಜೆಪಿ ಶಾಸಕರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...