Homeಕರ್ನಾಟಕ2ನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 30 ನಾಯಕರ ವಿರುದ್ಧ ಎಫ್‌ಐಆರ್‌

2ನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 30 ನಾಯಕರ ವಿರುದ್ಧ ಎಫ್‌ಐಆರ್‌

- Advertisement -
- Advertisement -

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಸಂಗಮದಿಂದ ಚಾಲನೆ ನೀಡಲಾಗಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

ಇನ್ನು ಭಾನುವಾರ ನಡೆದ ಪಾದಯಾತ್ರೆ ವೇಳೆ ಕೊರೊನಾ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಆರೋಪದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 30 ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಐಪಿಸಿ ಸೆಕ್ಷನ್ 141, 143, 290, 336 ರ ಅಡಿಯಲ್ಲಿ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊರೊನಾ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಮಾಡಿರುವುದಾಗಿ ಸರ್ಕಾರ ಹೇಳಿಕೊಂಡಿದ್ದೆ. ಆದರೆ ಕಾಂಗ್ರೆಸ್ ಪಾದಯಾತ್ರೆಗೆ ತಡೆಯೊಡ್ಡಲು ಕರ್ಫ್ಯೂ ವಿಧಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ಇಂದು ಡಿ.ಕೆ.ಶಿವಕುಮಾರ್‌ ಅವರ ಸ್ವಗ್ರಾಮ ದೊಡ್ಡಾಲಹಳ್ಳಿಯಿಂದ ಎರಡನೇ ದಿನದ ಪಾದಯಾತ್ರೆ ಆರಂಭವಾಗಿದೆ. ಇಂದು ದೊಡ್ಡ ಆಲಹಳ್ಳಿಯಿಂದ ಹೊರಟು, ಮಾದಪ್ಪನ ದೊಡ್ಡಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ತಲುಪಿ, ರಾತ್ರಿ ಕನಕಪುರದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 19 ರ ವರೆಗೆ ಪಾದಯಾತ್ರೆ ನಡೆಯಲಿದೆ.

ಇತ್ತ, “ಕೋವಿಡ್ ನಿಯಮ ಉಲ್ಲಂಘಿಸುವವರು ಯಾರೇ ಆಗಿರಲಿ. ಯಾವುದೇ ಭೇದ ಭಾವವಿಲ್ಲದೆ ಕ್ರಮ ಜರುಗಿಸಲಾಗುವುದು. ಮೇಕೆದಾಟು ಪಾದಯಾತ್ರೆಯ ಸಂಘಟಕರು, ಕಾನೂನು ಉಲ್ಲಂಘನೆ ಮಾಡಿರುವವರ ಮೇಲೆ ಕಾನೂನಿನ ಕ್ರಮ ಜರುಗಿಸಲಾಗುತ್ತಿದೆ ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವವರ ಆರೋಗ್ಯದ ಚಿಂತೆ ಸರ್ಕಾರಕ್ಕಿದೆ. ಸುದೀರ್ಘವಾಗಿ ನಡೆದು ಬಂದವರ ಆರೋಗ್ಯ ತಪಾಸಣೆ , ಆರೋಗ್ಯ ಇಲಾಖೆಯ ಕರ್ತವ್ಯ. ಇದಕ್ಕೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವವರು ಇದಕ್ಕೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು ಆರೋಗ್ಯ ಸಮಸ್ಯೆ ಕಾರಣಕ್ಕೆ ಮೊದಲ ದಿನದ ಪಾದಯಾತ್ರೆಯಿಂದ ಅರ್ಧಕ್ಕೆ ಹಿಂತಿರುಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೆರವಣಿಗೆಗೆ ಗೈರಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದು, ನಾಳೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

0
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂಬ ಹೇಳಿಕೆಯನ್ನು ಆಧಾರ ಸಹಿತ ಸಾಬೀತುಪಡಿಸಬೇಕು. ಇಲ್ಲದಿದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ...