Homeಕರ್ನಾಟಕಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

- Advertisement -
- Advertisement -

ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 19 ರ ವರೆಗೆ 10 ದಿನಗಳ ನೀರಿಗಾಗಿ ನಡಿಗೆ ಅಭಿಯಾನದ ಪಾದಯಾತ್ರೆ ಹಮ್ಮಿಕೊಂಡಿದೆ.

“ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು ಇದರಲ್ಲಿ ಭಾಗವಹಿಸಬೇಕು. ಕಾನೂನಾತ್ಮಕ ಅಡೆತಡೆಗಳಿಲ್ಲದಿದ್ದರೂ ರಾಜ್ಯ ಸರ್ಕಾರದ ವಿಳಂಬ ಧೋರಣೆಯಿಂದಾಗಿ ಮೇಕೆದಾಟು ಯೋಜನೆ ನೆನೆಗುದಿಗೆ ಬಿದ್ದಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜನವರಿ 9 ರಂದು ಪಾದಯಾತ್ರೆ ಆರಂಭವಾಗಲಿದ್ದು, ಐದು ದಿನ ಗ್ರಾಮಾಂತರ ಪ್ರದೇಶ ಹಾಗೂ ಐದು ದಿನ ನಗರದಲ್ಲಿ ಪಾದಯಾತ್ರೆ ಮಾಡಲಾಗುತ್ತದೆ. ಮೇಕೆದಾಟಿನಿಂದ ಕನಕಪುರ, ರಾಮನಗರ, ಕೆಂಗೇರಿ, ನಾಯಂಡಳ್ಳಿ ಮಾರ್ಗವಾಗಿ ಬೆಂಗಳೂರು ನಗರಕ್ಕೆ ಬರಲಿದೆ. ಒಟ್ಟು 160 ಕಿ.ಮೀ ಗೂ ಹೆಚ್ಚು ದೂರ ಪಾದಯಾತ್ರೆ ನಡೆಯಲಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸಲು ಒತ್ತಾಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ


’1968 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮೇಕೆದಾಟು ಯೋಜನೆಗೆ ಜಾರಿಗೆ ಚಿಂತನೆ ಮಾಡಿತ್ತು, ಆದರೆ ಜಲ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯೋಜನೆ ಜಾರಿ ಆಗಿರಲಿಲ್ಲ. 2013 ನಾವು ಅಧಿಕಾರಕ್ಕೆ ಬಂದಮೇಲೆ ಇದರ ಯೋಜನಾ ವರದಿ ಸಿದ್ಧಪಡಿಸಿದ್ದೆವು. ಪ್ರವಾಹ, ಅತಿವೃಷ್ಟಿ ಮುಂತಾದ ಕಾರಣಗಳಿಂದ ಹರಿವು ಹೆಚ್ಚಾದ ಸಂದರ್ಭದಲ್ಲಿ ಸಮುದ್ರದ ಪಾಲಾಗಿ ವ್ಯರ್ಥವಾಗುವ ನೀರನ್ನು ಸಂಗ್ರಹಿಸಿ ಬೇಸಿಗೆ ಸಮಯದಲ್ಲಿ ಕೃಷಿ, ವಿದ್ಯುತ್ ಉತ್ಪಾದನೆ ಮುಂತಾದ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುವುದು ಮೇಕೆದಾಟು ಯೋಜನೆಯ ಉದ್ದೇಶ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

’ಬೆಂಗಳೂರು ನಗರದ 30% ಜನರಿಗೆ ಕಾವೇರಿ ನೀರಿನ ಪೂರೈಕೆ ಆಗುತ್ತಿಲ್ಲ. ಬೆಂಗಳೂರು ಸೇರಿದಂತೆ ಮೇಕೆದಾಟು ಯೋಜನೆಯಿಂದ ಸುಮಾರು ಹತ್ತು ಜಿಲ್ಲೆಗಳ 2.5 ಕೋಟಿ ಜನರಿಗೆ ಅನುಕೂಲ ಆಗಲಿದೆ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ಹಸಿರು ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್‌ಗಳು ಯೋಜನೆ ಜಾರಿಗೆ ಆಕ್ಷೇಪ ಮಾಡುತ್ತಿಲ್ಲ. ಯೋಜನಾ ವರದಿ ಸಿದ್ಧವಾಗಿದೆ, ತಮಿಳುನಾಡಿಗೆ ಕಾನೂನಾತ್ಮಕವಾಗಿ ವಿರೋಧಿಸುವ ಹಕ್ಕು ಇಲ್ಲ, ಇಷ್ಟೆಲ್ಲಾ ಅನುಕೂಲಗಳಿದ್ದಾಗ್ಯೂ ರಾಜ್ಯ ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದ ಯೋಜನೆಯ ಅನುಷ್ಠಾನ ಆರಂಭವಾಗಿಲ್ಲ. ರಾಜ್ಯದಲ್ಲಿ ಮತ್ತು ಕೇಂದ್ರ ಬಿಜೆಪಿ ಅಧಿಕಾರಕ್ಕೆ ಬರಬೇಕು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಕೇಂದ್ರದಿಂದ ಹಣದ ಹೊಳೆ ಹರಿಯುತ್ತದೆ ಎಂದಿದ್ದರು, ಈಗ ಹೋಗಿ ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ’ ಎಂದು ಟೀಕಿಸಿದ್ದಾರೆ.

ಮೇಕೆದಾಟು ಯೋಜನೆ

ಕರ್ನಾಟಕ ಮತ್ತು ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಬೆಂಗಳೂರು ಸೇರಿದಂತೆ ಸುತ್ತಲಿನ ಹಳ್ಳಿ-ನಗರಗಳಿಗೆ ಮುಂದಿನ 100 ವರ್ಷಗಳಿಗೆ ಕುಡಿಯುವ ನೀರು ಪೂರೈಸುವುದು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವುದು ಈ ಯೋಜನೆಯ ಉದ್ದೇಶ. 5,000 ಎಕರೆ ಪ್ರದೇಶದಲ್ಲಿ ಸುಮಾರು 6,000 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ರೂಪಿಸಲಾಗಿದ್ದು, ಇದರ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಕೇಂದ್ರ ಪರಿಸರ ಇಲಾಖೆಯ ಅನುಮತಿ ದೊರೆತ ಕೂಡಲೇ ಯೋಜನೆ ಆರಂಭಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...