Homeಕರ್ನಾಟಕಮೈಸೂರು ದಸರಾ: ಚಾಮುಂಡಿ ದೇವಿಗೆ ಪುಷ್ಪ ನಮನ ಸಲ್ಲಿಸಿ ದಸರಾಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಚಾಲನೆ

ಮೈಸೂರು ದಸರಾ: ಚಾಮುಂಡಿ ದೇವಿಗೆ ಪುಷ್ಪ ನಮನ ಸಲ್ಲಿಸಿ ದಸರಾಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಚಾಲನೆ

- Advertisement -
- Advertisement -

ಇಂದಿನಿಂದ (ಅ.7) ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಮೈಸೂರು ದಸರಾ ಮಹೋತ್ಸವವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಇಂದು ಉದ್ಘಾಟಿಸಿದ್ದಾರೆ.

ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ದಸರಾ ಮಹೋತ್ಸಕ್ಕೆ ಚಾಲನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿಗೆ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅವರ ಪತ್ನಿ ಚೆನ್ನಮ್ಮ, ಸಚಿವರಾದ ಆರ್.ಅಶೋಕ್, ಬೈರತಿ ಬಸವರಾಜ್, ಸಂಸದ ಪ್ರತಾಪ್ ಸಿಂಹ ಸೇರಿ ಹಲವು ಮಂದಿ ಜೊತೆಯಾಗಿದ್ದರು.

ದಸರಾ ಚಾಲನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷ್ಣರಾಜ ಸಾಗರ ಡ್ಯಾಮ್ ಬಳಿ ತಮ್ಮ ಪತ್ನಿ ಸಮೇತವಾಗಿ ಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ದಸರಾ ಮಹೋತ್ಸವ ಇಂದಿನಿಂದ (ಅ.7) ಆರಂಭವಾಗಿದ್ದು, ಒಂಬತ್ತು ದಿನಗಳ ಕಾಲ ಅಂದರೆ ಅ. 15ರವರೆಗೆ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆಯೇ ಈ ಬಾರಿಯೂ ಕೂಡ ಸರಳ ದಸರ ಆಚರಿಸಲಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ನಾಡಿನ ಸಮಸ್ತ ಜನತೆಗೆ ದಸರಾ ನಾಡಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ನಾಡು ಸಮೃದ್ಧವಾಗಿರುವಂತೆ ತಾಯಿ ಅನುಗ್ರಹಿಸಲಿ. ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ, ನಾಡಿನ ಒಳಿತಿಗಾಗಿ ಪ್ರಾರ್ಥಿಸೋಣ’ ಎಂದು ಶುಭ ಹಾರೈಸಿದ್ದಾರೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆಗಳು ಆಶ್ಚರ್ಯಕರ ಫಲಿತಾಂಶ ನೀಡುತ್ತವೆ: ಭಗವಂತ್ ಮಾನ್

0
'ಚುನಾವಣಾ ಪೂರ್ವ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷದ ಜನಪ್ರಿಯತೆಯನ್ನು ಸೆರೆಹಿಡಿಯದಿದ್ದರೂ, ಅದರ ನೈಜ ಸಾಧನೆಯು ನೇರವಾಗಿ ಸರ್ಕಾರವನ್ನು ರಚಿಸಲು ಸಹಾಯ ಮಾಡುತ್ತದೆ. ಲೋಕಸಭೆ ಚುನಾವಣೆಗಳು ಆಶ್ಚರ್ಯಕರ ಫಲಿತಾಂಶಗಳನ್ನು ನೀಡುತ್ತವೆ' ' ಎಂದು ಪಂಜಾಬ್...