Homeಕರ್ನಾಟಕ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

- Advertisement -
- Advertisement -

ಮಾಂಸಾಹಾರವನ್ನು ‘ಅನಿಷ್ಠ’ ಎಂದು ಬಿಂಬಿಸುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಗಿದೆ. ಈ ಸಂಬಂಧ #ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಹ್ಯಾಶ್‌ಟ್ಯಾಗ್‌ ಚಳವಳಿ ಪ್ರಾರಂಭವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರನ್ನು ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಂಸಲೇಖ ಕ್ಷಮೆ ಕೇಳಿದ ನಂತರವು ಸಾಮಾಜಿಕ ಜಾಲತಾಣದಲ್ಲಿ ಅವರ ತೇಜೋವಧೆ ಮುಂದುವರೆದಿತ್ತು. ಇಷ್ಟೇ ಅಲ್ಲದೆ ಮಾಂಸಾಹಾರ ಮತ್ತು ಕುರಿ ರಕ್ತದ ಫ್ರೈ ಜೊತೆಗೆ ಮಾಂಸ ತಿನ್ನುವವರ ಬಗ್ಗೆಯು ಅವಹೇಳನದ ಮಾತುಗಳನ್ನು ಆಡಲಾಗಿತ್ತು. ಮಾಂಸವನ್ನು ‘ಅಸಹ್ಯ’ ಮತ್ತು ‘ಅನಿಷ್ಠ’ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ಮಾಂಸ ತಿನ್ನುವವರನ್ನು ‘ರಾಕ್ಷಸರು’, ‘ಕ್ರೂರಿಗಳು’ ಎಂದು ಹೇಳಿ ಅವಮಾನಿಸಲಾಗಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಮಾಂಸಾಹಾರಿಗಳು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈಗಾಗಲೆ ಹಲವಾರು ಜನರು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಸಸ್ಯಾಹಾರದಂತೆಯೆ ಮಾಂಸಾಹಾರ ಕೂಡಾ ಆಹಾರವೇ ಆಗಿದೆ. ಅದನ್ನು ಅನಿಷ್ಠ ಮತ್ತು ಅಸಹ್ಯ ಎಂಬಂತೆ ಬಿಂಬಿಸುವುದು ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ದೇಶದ 90% ಜನರು ತಿನ್ನುವ ಮಾಂಸಾಹಾರವನ್ನು ಅವಮಾನಿಸುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಹಾಕಲಾಗಿದೆ.

ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

#ಮಾಂಸವೇ_ನಮ್ಮನೆ_ದ್ಯಾವ್ರು ಮತ್ತು #ಬಾಡೇ_ನಮ್_ಗಾಡು ಅಭಿಯಾನವು ಮುಂದಿನ ಒಂದು ವಾರ ನಡೆಯಲಿದ್ದು, ತಮ್ಮ ಮಾಂಸದೂಟದ ಜೊತೆಗೆ ಸೆಲ್ಫಿಯನ್ನು ಕ್ಲಿಕ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸೇರಬಹುದಾಗಿದೆ. ಇಷ್ಟೇ ಅಲ್ಲದೆ ಅಭಿಯಾನದಲ್ಲಿ ಸೇರಬಯಸುವವರು ತಮ್ಮ ಕನಿಷ್ಠ ಐವರು ಸ್ನೇಹಿತರಿಗೆ ಖೋ ಕೊಟ್ಟು ಅವರು ಅಭಿಯಾನಕ್ಕೆ ಸೇರುವಂತೆ ಮಾಡಬೇಕು ಎಂದು ಅಭಿಯಾನದ ಪೋಸ್ಟರ್‌ ಒಂದು ಹೇಳುತ್ತದೆ.

ಈಗಾಗಲೆ ಹಲವಾರು ಜನರು ಈ ಅಭಿಯಾನದಲ್ಲಿ ಸೇರಿದ್ದು ಅವುಗಳ ಕೆಲವು ಝಲಕ್‌ಗಳು ಇಲ್ಲಿವೆ.

ಇದನ್ನೂ ಓದಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಇದನ್ನೂ ಓದಿ: ಪ್ರತಿದಿನ ಕರ್ನಾಟಕದಿಂದ ಕಳುಹಿಸಲ್ಪಟ್ಟ 2,100 ಕೆಜಿ ಗೋಮಾಂಸವನ್ನು ಗೋವಾದಲ್ಲಿ ಸೇವಿಸುತ್ತಾರೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...