Homeಕರ್ನಾಟಕರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಾಳೆ ಸಿಎಂ ನೇತೃತ್ವದಲ್ಲಿ ಸಭೆ

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಾಳೆ ಸಿಎಂ ನೇತೃತ್ವದಲ್ಲಿ ಸಭೆ

- Advertisement -
- Advertisement -

ರಾಜ್ಯದಲ್ಲಿ ಹೊಸ ವರ್ಷದ ಆಚರಣೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಯೋಚಿಸಲಾಗುತ್ತಿದ್ದು, ತಜ್ಞರ ಸಮಿತಿಯ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು.

’ದೇಶದಲ್ಲಿ ಓಮಿಕ್ರಾನ್ ಹೆಚ್ಚುತ್ತಿರುವಂತೆ ಕರ್ನಾಟಕಕ್ಕೆ ಅಪಾಯವಿದೆ. ವಿದೇಶಿ ಪ್ರಯಾಣಿಕರಿಗಿಂತ ಮಹಾರಾಷ್ಟ್ರ, ಕೇರಳ ಮತ್ತು ಇತ್ತೀಚೆಗೆ ತಮಿಳುನಾಡಿನಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವುದು ರಾಜ್ಯಕ್ಕೆ ಆತಂಕಕಾರಿ ಅಂಶವಾಗಿದೆ’ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

“ಈಗಿರುವ ನಿಯಮಗಳಲ್ಲಿ ಬದಲಾವಣೆ ಮಾಡುವ ಮುನ್ನ ನಾಳೆ (ಭಾನುವಾರ) ಬೆಂಗಳೂರಿನಲ್ಲಿ ತಜ್ಞರ ಸಮಿತಿ ಸದಸ್ಯರು ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಕಳೆದ ಕೆಲವು ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳು ನೈಟ್‌ ಕರ್ಫ್ಯೂ ಜಾರಿಗೊಳಿಸುತ್ತಿರುವ ಬಗ್ಗೆ ನನಗೆ ಮಾಹಿತಿಯಿದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರದಿಂದ ನಿರ್ಬಂಧ

ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ 32 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಈಗಾಗಲೇ ಸಾರ್ವಜನಿಕ ಸಭೆ, ಥಿಯೇಟರ್‌ಗಳಲ್ಲಿ ಮತ್ತು ಮದುವೆ ಕಾರ್ಯಕ್ರಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿಗೊಳಿಸುವ ಅಗತ್ಯವನ್ನು ತಜ್ಞರ ಸಮಿತಿ ಶಿಫಾರಸು ಮಾಡಿಲ್ಲ.

ಓಮಿಕ್ರಾನ್ ರೂಪಾಂತರಿಯ ಆತಂದಿಂದ ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧ ವಿಧಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ ಆರಂಭವಾಗಲಿರುವ ಡಿಸೆಂಬರ್ 30 ರಿಂದ ಜನವರಿ 2ರ ವರೆಗೆ ರಾಜ್ಯದಾದ್ಯಂತ ನಿರ್ಬಂಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಡಿಜೆ, ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್, ರೆಸ್ಟೋರೆಂಟ್ ಮತ್ತಿತರ ಸ್ಥಳಗಳಲ್ಲಿ 50 % ಮಂದಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ತಿಳಿಸಲಾಗಿದೆ.

ಜೊತೆಗೆ ಬ್ರಿಗೇಡ್ ರಸ್ತೆ ಶಾಪ್ಸ್ ಅಂಡ್ ಅಸ್ಟಾಬ್ಲಿಷ್ ಮೆಂಟ್ ಅಸೋಸಿಯೇಷನ್ ಕೂಡ ಈ ವರ್ಷ ಕೂಡ ಸಂಭ್ರಮಾಚರಣೆ ಮಾಡದಿರಲು ಮುಂದಾಗಿದೆ.


ಇದನ್ನೂ ಓದಿ: ‘ನೀವು ಬಿಜೆಪಿ ಏಜೆಂಟಾ?’- ಕನ್ಹಯ್ಯ ಪ್ರಶ್ನೆಗಳಿಗೆ ಪತ್ರಕರ್ತ ತಬ್ಬಿಬ್ಬು; ಕ್ಷಮೆಯಾಚಿಸಿದ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...