Homeಕರ್ನಾಟಕಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ 38,000 ಸಿಮ್‌ ಪೋರ್ಟ್‌ ಮಾಡಲು ಕರ್ನಾಟಕ ಪೊಲೀಸ್ ನಿರ್ಧಾರ

- Advertisement -
- Advertisement -

ಕರ್ನಾಟಕ ರಾಜ್ಯ ಪೊಲೀಸರು ತಾವು ಬಳಸುತ್ತಿರುವ ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌)ನ ತಮ್ಮ ಎಲ್ಲಾ 38,000 ಅಧಿಕೃತ ಮೊಬೈಲ್ ಫೋನ್ ಸಿಮ್ ಕಾರ್ಡ್‌ಗಳನ್ನು ರಿಲಯನ್ಸ್ ಜಿಯೋಗೆ ಪೋರ್ಟ್ ಮಾಡಲು ನಿರ್ಧರಿಸಿದ್ದಾರೆ. ಈ ನಿರ್ಧಾರವನ್ನು ಬಿಎಸ್‌ಎನ್‌ಎಲ್‌ ನೌಕರರ ಒಕ್ಕೂಟ ಸೇರಿದಂತೆ ಹಲವರು ವಿರೋಧಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

‘ಬಿಎಸ್‌ಎನ್‌ಎಲ್‌ನಿಂದ ಜಿಯೊಗೆ ಪೋರ್ಟ್ ಆಗುವ ಸಂಬಂಧ ಸರ್ಕಾರದ ಅನುಮೋದನೆಯ ಬಗ್ಗೆ’ ಮತ್ತು ‘ಪೋರ್ಟ್ ಮಾಡುವ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯುತ್ತದೆ’ ಎಂಬುದಾಗಿ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ಲಾಜಿಸ್ಟಿಕ್ಸ್‌ ಅಂಡ್ ಮೊಡರೇಷನ್‌‌ನ ಹೆಚ್ಚುವರಿ ಮಹಾನಿರ್ದೇಶಕರು ಹೊರಡಿಸಿರುವ ಸುತ್ತೋಲೆಯನ್ನು ‘ದಿ ಹಿಂದೂ’ ವರದಿ ಉಲ್ಲೇಖಿಸಿದೆ. ಒಟ್ಟು 38,347 ಸಂಪರ್ಕ ಸಂಖ್ಯೆಗಳಿವೆ ಎಂದು ವರದಿ ತಿಳಿಸಿದೆ.

“ಪೊಲೀಸ್ ವ್ಯವಸ್ಥೆಯಂತಹ ತುರ್ತು ಸೇವೆಗೆ ನೆಟ್‌ವರ್ಕ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಲಭ್ಯವಿರುವ ನೆಟ್‌ವರ್ಕ್‌ನ ದಕ್ಷತೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಸಂಪೂರ್ಣವಾಗಿ ವಾಣಿಜ್ಯಿಕ ನಿರ್ಧಾರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಈ 38,000 ಸಂಪರ್ಕ ಸಂಖ್ಯೆಗಳಲ್ಲಿ ಹೆಚ್ಚಿನವು ದೂರದ ಗ್ರಾಮೀಣ ಪ್ರದೇಶಗಳಲ್ಲಿವೆ. ಉತ್ತಮ ನೆಟ್‌ವರ್ಕ್ ವ್ಯಾಪ್ತಿಯ ಕೊರತೆಯ ಬಗ್ಗೆ ಅಲ್ಲಿನ ಅಧಿಕಾರಿಗಳು ದೂರಿದ್ದಾರೆ. ಈ ದಿನಮಾನಗಳಲ್ಲಿ ಪೊಲೀಸರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಲೊಕೇಷನ್‌, ಫೋಟೋಗಳು ಮತ್ತು ವೀಡಿಯೊಗಳನ್ನು ಒಳಗೊಂಡಂತೆ ಅನೇಕ ಡೇಟಾಗಳನ್ನು ವರ್ಗಾಯಿಸಬೇಕಾಗುತ್ತದೆ. ಈಗ ಬಳಸಲಾಗುತ್ತಿರುವ ಸೇವಾ ಪೂರೈಕೆದಾರರ ಡೇಟಾ ಸ್ಪೀಟ್‌ ಶೋಚನೀಯವಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಖಾಸಗಿ ಸಂಸ್ಥೆಗಳು 5G ಸೇವೆಗಳನ್ನು ನೀಡುತ್ತಿದ್ದರೆ, ಬಿಎಸ್‌ಎನ್‌ಎಲ್‌ ಇನ್ನೂ 4G ಸೇವೆಗಳನ್ನೂ ನೀಡುತ್ತಿಲ್ಲ. ನಮ್ಮಂಥವರ ತುರ್ತು ಸೇವೆಗೆ ಇದು ತೊಂದರೆಯುಂಟುಮಾಡಿದೆ. ವಾಣಿಜ್ಯ ಮೌಲ್ಯಮಾಪನದ ನಂತರ, ‘ಕರ್ನಾಟಕ ಟ್ರಾನ್ಸ್‌ಪರೆನ್ಸಿ ಇನ್‌ ಪಬ್ಲಿಕ್‌ ಪ್ರೊಕ್ಯೂರ್‌ಮೆಂಟ್ ಆಕ್ಟ್‌’ 1999ರ ಪ್ರಕಾರ ರಿಲಯನ್ಸ್ ಜಿಯೋವನ್ನು ಪರ್ಯಾಯ ಸೇವಾ ಪೂರೈಕೆದಾರರಾಗಿ ಆಯ್ಕೆ ಮಾಡಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಿಎಸ್‌ಎನ್‌ಎಲ್‌ನ ಜಾಗದಲ್ಲಿ ರಿಲಯನ್ಸ್‌ ಜಿಯೋವನ್ನು ಉತ್ತೇಜಿಸುವ ಇತ್ತೀಚಿನ ಉದಾಹರಣೆ ಇದಾಗಿದೆ ಎಂದು ಬಿಎಸ್‌ಎನ್‌ಎಲ್‌ ನೌಕರರ ಸಂಘ ಟೀಕಿಸಿದೆ.

“ಈ ಹಾದಿ ತುಳಿದವರಲ್ಲಿ ಕರ್ನಾಟಕ ಪೊಲೀಸರೇ ಮೊದಲಿಗರೇನಲ್ಲ. ಭಾರತೀಯ ರೈಲ್ವೇ ಮತ್ತು ತೆಲಂಗಾಣ ಪೊಲೀಸ್‌ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ರಿಲಯನ್ಸ್ ಜಿಯೋಗೆ ಪೋರ್ಟ್‌ ಆಗಲು ನಿರ್ದೇಶನ ನೀಡಲಾಗಿದೆ. ಇದೀಗ ಕರ್ನಾಟಕದ ಸರದಿ ಬಂದಿದೆ” ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗುಂಡಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ವಲಯದ ಉದ್ಯಮವನ್ನು (ಪಿಎಸ್‌ಯು) ಮುಚ್ಚಿ, ಖಾಸಗಿ ವಲಯವನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶ. ಹೀಗಾಗಿ ಸಾರ್ವಜನಿಕ ಉದ್ದಿಮೆಗಳು ಸರ್ಕಾರದ ನಿರಾಸಕ್ತಿಯಿಂದ ಬಲಿಪಶುಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಸರ್ಕಾರವು ಇತ್ತೀಚೆಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತಂದಿತು, ಅದರ ಅಡಿಯಲ್ಲಿ ಸುಮಾರು 80,000 ಉದ್ಯೋಗಿಗಳು ನಿವೃತ್ತರಾದರು. ಇದರಿಂದಾಗಿ ಬಿಎಸ್‌ಎನ್‌ಎಲ್‌ನಲ್ಲಿ ಮಾನವ ಸಂಪನ್ಮೂಲದ ಅಭಾವ ಉಂಟಾಯಿತು. ಸಂಸ್ಥೆ ನಲುಗಿತು. ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಹೂಡಿಕೆ ಮಾಡಿಲ್ಲ. 5G ತರಂಗಾಂತರಗಳನ್ನು ಖಾಸಗಿ ಕಂಪನಿಗಳಿಗೆ ಹರಾಜು ಹಾಕುತ್ತಿರುವಾಗ ಬಿಎಸ್‌ಎನ್‌ಎಲ್‌ಗೆ 4G ಸೇವೆಗಳನ್ನು ಒದಗಿಸಲೂ ಸರ್ಕಾರ ಅನುಮತಿ ನೀಡಲಿಲ್ಲ. ಇದು ಉದ್ದೇಶಪೂರ್ವಕ ಕೃತ್ಯ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. So, now no secret would be kept in secret, so total confidentiality of the individual and country has gone in to the hand of private people. It may go to any ones hand and the country is in threat at last.
    Country only socialistic in words
    Controlled by ……………

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...