Homeಕರ್ನಾಟಕಮುಂದುವರಿದ ಬಿಜೆಪಿ- ಜೆಡಿಎಸ್ ಕುಟುಂಬ ರಾಜಕಾರಣದ ಫೈಟ್: ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೊಡಿ ಎಂದ ಬಿಜೆಪಿ

ಮುಂದುವರಿದ ಬಿಜೆಪಿ- ಜೆಡಿಎಸ್ ಕುಟುಂಬ ರಾಜಕಾರಣದ ಫೈಟ್: ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೊಡಿ ಎಂದ ಬಿಜೆಪಿ

- Advertisement -
- Advertisement -

ಕಳೆದೆರಡು ದಿನಗಳಿಂದ ರಾಜ್ಯ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಕುಟುಂಬ ರಾಜಕಾರಣದ ಫೈಟ್ ನಡೆಯುತ್ತಿದ್ದು, ಇಂದು ಕೂಡ ಮುಂದುವರೆದಿದೆ. ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲಾ ಪಕ್ಷಗಳ ದಾಖಲೆ ಮುರಿದಿದೆ ಎಂದು ಆರೋಪಿಸಿದ್ದ ಜೆಡಿಎಸ್, ಬಿಜೆಪಿಯ ಪಟ್ಟಿಯನ್ನು ನೀಡಿತ್ತು. ಇದಕ್ಕೆ ಇಂದು ಕರ್ನಾಟಕ ಬಿಜೆಪಿ ಪ್ರತಿಕ್ರಿಯೆ ನೀಡಿದೆ.

“ಕುಮಾರಸ್ವಾಮಿ ಅವರೇ, ಜಾತ್ಯತೀತ ಜನತಾ ದಳ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಯಾರ ಕುಟುಂಬಕ್ಕೆ ನೀಡಿದ್ದೀರಿ..? ರಾಜ್ಯ ಅಧ್ಯಕ್ಷ ಸ್ಥಾನದಲ್ಲಿ ಸುದೀರ್ಘ ಅವಧಿಗೆ ಇದ್ದಿದ್ದು ಯಾರ ಕುಟುಂಬ..?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.

ನ.14 ರಂದು ಟ್ವೀಟ್ ಮಾಡಿದ್ದ ಜಾತ್ಯಾತೀತ ಜನತಾ ದಳ, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದಿತ್ತು.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೊಟ್ಟು ಮಾಡಿ ಮಾಡಿರುವ ಸರಣಿ ಟ್ವೀಟ್‌ಗಳಲ್ಲಿ, “ಕುಮಾರಸ್ವಾಮಿ ಅವರೇ, ಜೆಡಿಎಸ್‌ಗೆ ಅಧಿಕಾರ ಸಿಗುತ್ತದೆ ಎಂದು ಸ್ಪಷ್ಟವಾದ ಕ್ಷಣದಿಂದ ನಿಮ್ಮ ಶಾಸಕಾಂಗ ಪಕ್ಷದ ನಾಯಕರಾಗಿ ನೀವೇ ಯಾಕೆ ಆಯ್ಕೆಯಾಗುತ್ತೀರಿ..? ಪಕ್ಷಕ್ಕಾಗಿ ದುಡಿಮೆ ಮಾಡಿದವರಿಗೆ ಸ್ವಲ್ಪ ಅವಕಾಶ ಕೊಡಬಹುದಲ್ಲವೇ..!!?” ಎಂದು ಬಿಜೆಪಿ ಟೀಕಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರೇ, ನಿಮ್ಮ ಪಕ್ಷದ ಅಧಿಕೃತ ವೆಬ್‌ಸೈಟ್‌ನಲ್ಲಿ ಪಕ್ಷದ ಹಾಲಿ ರಾಜ್ಯಾಧ್ಯಕ್ಷರ ಭಾವಚಿತ್ರಕ್ಕೇ ಜಾಗವಿಲ್ಲ. ಅವರು ನಿಮ್ಮ ಕುಟುಂಬದವರಲ್ಲ ಎಂಬ ಕಾರಣಕ್ಕಾಗಿ ಈ ದ್ವೇಷವೇ..? ಇದೂ ಕುಟುಂಬ ರಾಜಕಾರಣದ ಭಾಗವೇ..?” ಎಂದು ಪ್ರಶ್ನಿಸಿದೆ.

ಭಾನುವಾರ ಟ್ವೀಟ್ ಮಾಡಿದ್ದ ಜೆಡಿಎಸ್ ಬಿಜೆಪಿ ಪಕ್ಷದಲ್ಲಿರುವ ಒಂದೇ ಕುಟುಂಬದ ಸದಸ್ಯರು ರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಪಟ್ಟಿಯನ್ನು ನೀಡಿ ಬಿಜೆಪಿಯನ್ನು ಟೀಕಿಸಿತ್ತು.


ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...