Homeಮುಖಪುಟ’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

- Advertisement -
- Advertisement -

“ಚುನಾವಣಾ ಪ್ರಚಾರ ಸಭೆಗಳಲ್ಲಿ ನಿರಂತರ ಸುಳ್ಳು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಪಕ್ಷದ ಮೂಲ ತತ್ವವನ್ನು ಎತ್ತಿಹಿಡಿದಿದ್ದಾರೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯವೆಂದು ನಂಬಿಸುವುದು ಬಿಜೆಪಿಯವರ ಹುಟ್ಟುಗುಣವಲ್ಲವೇ..? ಎಂದು ಪ್ರಶ್ನಿಸಿದ್ದಾರೆ.


’ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ನನ್ನಲ್ಲಿ ಇತ್ತು. ಆ ನಿರೀಕ್ಷೆಗಳೆಲ್ಲ ಹುಸಿಯಾಗಿದೆ.ನಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಆಗಾಗ್ಗೆ ಪ್ರಶ್ನೆ ಕೇಳುವ, ಸುಳ್ಳು ಹೇಳುವ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿದ್ದೂ ಮಾಹಿತಿ ತರಿಸಿಕೊಳ್ಳಲು ಕಷ್ಟವಾಗುತ್ತಿದೆಯೇ ಅಥವಾ ಮುಖ್ಯಮಂತ್ರಿಗಳು ಕೇಳಿದರೂ ಇಲಾಖೆಗಳೇ ಮಾಹಿತಿ ನೀಡುತ್ತಿಲ್ಲವೇ..?” ಎಂದು ವ್ಯಂಗ್ಯವಾಡಿದ್ದಾರೆ.

’2013 ರಿಂದ 2018 ರ ಮಾರ್ಚ್‌ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 15 ಲಕ್ಷ ಮನೆಗಳನ್ನು 16,775 ಕೋಟಿ ರೂ.ಗಳ ವೆಚ್ಚದಲ್ಲಿ ವಸತಿ ರಹಿತರಿಗಾಗಿ ನಿರ್ಮಾಣ ಮಾಡಿಕೊಟ್ಟಿದ್ದೆವು. ಈ ಮಾಹಿತಿಯನ್ನು ವಸತಿ ಸಚಿವ ಸೋಮಣ್ಣನವರ ಕಛೇರಿಯಿಂದಲೆ ನನಗೆ ಲಿಖಿತವಾಗಿ ಕಳಿಸಿದ್ದಾರೆ. ನಿಮಗೊಂದು ಪ್ರತಿ ತರಿಸಿ ಕೊಡಲೇ ಬೊಮ್ಮಾಯಿ ಅವರೇ..?’ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಪಳೆಯುಳಿಕೆ ಬಿಜೆಪಿ- ಸಿದ್ದರಾಮಯ್ಯ ಆಕ್ರೋಶ


‘ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಒಳಗೊಂಡಂತೆ 32 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ.ನಿಮ್ಮ ಸರ್ಕಾರದ ಸಾಧನೆ ಇನ್ನೂ ಸೊನ್ನೆಯಲ್ಲೇ ಭದ್ರವಾಗಿ ಕೂತಿದೆ ಅಲ್ಲವೇ..? ನಾನು ಮುಖ್ಯ ಮಂತ್ರಿಯಾಗಿದ್ದಾಗ ಗ್ರಾಮ ವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಜಾರಿಗೆ ತಂದಿದ್ದೆ. ಈ ಯೋಜನೆಯಡಿ 1750 ಕೋಟಿ ರೂಪಾಯಿಗಳನ್ನು ನೀಡಿ 2000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದೆ. ಇಂತಹ ಜನಪರ ಯೋಜನೆ ನಿಲ್ಲಿಸಿದ್ದು ನಿಮ್ಮದೇ ಸರ್ಕಾರ ಅಲ್ಲವೇ..?’ ಎಂದು ಪ್ರಶ್ನಿಸಿದ್ದಾರೆ.


’ಅಮೃತ ಯೋಜನೆಯಡಿ ಆಯ್ದ ಗ್ರಾಮಗಳಿಗೆ ಕೇವಲ 25 ಲಕ್ಷ ರೂಪಾಯಿ ನೀಡುತ್ತೇವೆಂದು ಬೊಮ್ಮಾಯಿವರು ಹೇಳುತ್ತಾರೆ. 25 ಲಕ್ಷ ರೂಪಾಯಿಗಳಲ್ಲಿ 40% ನಿಮ್ಮ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ಕಮಿಷನ್ ಹೋದರೆ ಉಳಿಯುವ ಹಣ ಎಷ್ಟು..? ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಗ್ರಾಮೀಣ ರಸ್ತೆಗಳಿಗೆಂದು 1350 ಕೋಟಿ ನೀಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ಇದುವರೆಗೆ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಬರಿ ಘೋಷಣೆಗಳಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವೇ..?’ ಎಂದು ಟೀಕಿಸಿದ್ದಾರೆ.

’ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮ ಪಂಚಾಯತಿ ನೌಕರರಿಗೆ ಸಂಬಳ ನೀಡಲೆಂದು ಪ್ರತಿ ವರ್ಷ 912 ಕೋಟಿ ರೂಗಳನ್ನು ತೆಗೆದಿಡುತ್ತಿದ್ದೆವು. ಅದರಿಂದ ಸಾವಿರಾರು ನೌಕರರಿಗೆ ಅನುಕೂಲವಾಗಿತ್ತು. ನಮ್ಮದು ಬಿಜೆಪಿ ಸರ್ಕಾರದಂತೆ ಹಾಳೆಗಳ ಮೇಲಿನ ಘೋಷಣೆಗಳಾಗಿ ಉಳಿದಿಲ್ಲ, ಸಾಧನೆಗಳಾಗಿವೆ’ ಎಂದು ತಿಳಿಸಿದ್ದಾರೆ.


’ಗ್ರಾಮ ಪಂಚಾಯತಿಗಳಿಗೆ ಅನುದಾನ ಬರಲು ಆರಂಭವಾಗಿದ್ದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರವರು ನರೇಗಾ ಯೋಜನೆ ಪ್ರಾರಂಭಿಸಿದ ಮೇಲೆ. ನರೇಗಾ ಯೋಜನೆಯನ್ನು ಗುಜರಾತಿನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ವಿರೋಧಿಸಿದ್ದರು ಎಂಬ ಸತ್ಯವನ್ನು ಬಿಜೆಪಿ ಯವರು ಮರೆಯಬಾರದು. ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3 ಕೋಟಿಗೂ ಹೆಚ್ಚು ಜನ ಬಿಪಿಎಲ್ ಕಾರ್ಡುದಾರರಿದ್ದಾರೆ. ಅದರಲ್ಲಿ ಒಂದು ಕೋಟಿ ಜನರಿಗೆ 100 ಮಾನವ ದಿನಗಳಷ್ಟು ಕೆಲಸ ಕೊಟ್ಟರೆ 100 ಕೋಟಿ ಮಾನವ ದಿನಗಳ ಗುರಿ ನೀಡಬೇಕಾಗುತ್ತದೆ. ಆದರೆ ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಗುರಿಯನ್ನು ನೀಡಲಾಗುತ್ತಿದೆ. ಈಗಿರುವ ಗುರಿ ಕೇವಲ 13 ಲಕ್ಷ ಜನರಿಗೆ ಮಾತ್ರ ಸಾಕಾಗುತ್ತಿದೆ. ರಾಜ್ಯದಲ್ಲಿ ಆರ್ಥಿಕ ವರ್ಷ ಮುಗಿಯಲು ಇನ್ನೂ ಆರು ತಿಂಗಳಿದ್ದಾಗಲೆ ಟಾರ್ಗೆಟ್ ಮುಗಿದು ಹೋಗಿದೆ. ಬೊಮ್ಮಾಯಿಯವರು ಸುಳ್ಳು ಹೇಳಿಕೊಂಡು ಓಡಾಡುವ ಬದಲು ದೆಹಲಿಗೆ ಹೋಗಿ ನರೇಗಾ ಯೋಜನೆಗೆ ಬೇಡಿಕೆ ಆಧಾರಿತವಾಗಿ ಹೊಸ ಗುರಿ ನಿಗದಿ ಮಾಡಿಸಿಕೊಂಡು ಬರಲಿ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...