ಮತದಾರರು ಮೂರ್ಖರಲ್ಲ, ಜನ ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೆ ಮತ ನೀಡುತ್ತಾರೆ ಎನ್ನುವ ಮೂಲಕ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.
ವಿಜಯಪುರ ಜಿಲ್ಲೆಯ ಕಾಂಗ್ರೆಸ್ ನಾಯಕರ ಒಮ್ಮತದ ಅಭಿಪ್ರಾಯದ ಮೇರೆಗೆ ಸಿಂಧಗಿ ವಿಧಾನಸಭಾ ಕ್ಷೇತ್ರದಿಂದ ಎಂ.ಸಿ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಪಕ್ಷದ ಟಿಕೆಟ್ ನೀಡಿದ್ದೇವೆ. ಕ್ಷೇತ್ರದ ಜನರ ಒಲವು ಮತ್ತು ಪಕ್ಷದ ನಾಯಕರ ಉತ್ಸಾಹವನ್ನು ಗಮನಿಸಿದರೆ ಗರಿಷ್ಠ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು, ನಾನು RSS ಹೊಗಳಿದ್ದೇನೆ ಎಂಬುದು ಸುಳ್ಳು: ಎಚ್.ಡಿ.ದೇವೇಗೌಡ
ಅಗತ್ಯ ವಸ್ತುಗಳ ಬೆಲೆಯೇರಿಕೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ನಿಷ್ಕ್ರಿಯತೆ ಬಗ್ಗೆ ಜನರಿಗಿರುವ ಅಸಹನೆಯನ್ನು ಹೊರಹಾಕಲು ಈ ಬಾರಿಯ ಉಪಚುನಾವಣೆಯನ್ನು ಅಸ್ತ್ರವಾಗಿ ಬಳಸಿಕೊಳ್ಳಲಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಜೆಡಿ(ಎಸ್) ಪಕ್ಷದವರು ಎರಡೂ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದರ ಹಿಂದಿನ ಉದ್ದೇಶ ಏನೇ ಇರಬಹುದು, ಆದರೆ ಮತದಾರರು ಮೂರ್ಖರಲ್ಲ.
ಜನ ಕಾಂಗ್ರೆಸ್ ನ ಗೆಲ್ಲುವ ಅಭ್ಯರ್ಥಿಗೆ ಮತ ನೀಡುತ್ತಾರೆಯೇ ಹೊರತು ಸೋಲುವ ಅಭ್ಯರ್ಥಿಗಲ್ಲ. 5/5#ಸಿಂಧಗಿ— Siddaramaiah (@siddaramaiah) October 8, 2021
ಜೆಡಿಎಸ್ ವಿರುದ್ಧ ಕಿಡಿ ಕಾರಿರುವ ಅವರು, “ಜೆಡಿ(ಎಸ್) ಪಕ್ಷದವರು ಎರಡೂ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದರ ಹಿಂದಿನ ಉದ್ದೇಶ ಏನೇ ಇರಬಹುದು, ಆದರೆ ಮತದಾರರು ಮೂರ್ಖರಲ್ಲ. ಜನ ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೆ ಮತ ನೀಡುತ್ತಾರೆಯೇ ಹೊರತು ಸೋಲುವ ಅಭ್ಯರ್ಥಿಗಲ್ಲ” ಎಂದಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಕಾಂಗ್ರೆಸ್ ನಾಯಕರು ರ್‍ಯಾಲಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಭಾಗವಹಿಸಿದ್ದರು.
ಇದನ್ನೂ ಓದಿ: ಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್


