Homeಕರ್ನಾಟಕಡಿಸೆಂಬರ್ 5ರ 'ಕರ್ನಾಟಕ ಬಂದ್'ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

'ಕರ್ನಾಟಕ ಬಂದ್' ನಡೆಸಲು ಸರ್ಕಾರವೇ ಕಾರಣ ಹೊರತು ಕನ್ನಡಪರ ಸಂಘಟನೆಗಳಲ್ಲ’ ಎಂದು ಕರವೇ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡದ್ರೋಹಿ ನಡವಳಿಕೆಗಳ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ಕರೆ ನೀಡಲಾಗಿರುವ ‘ಕರ್ನಾಟಕ ಬಂದ್’ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಸೆಂಬರ್ 5 ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ. ಅದೇ ರೀತಿ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ, ತಹಸೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಲಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಪ್ರತಿಭಟನೆ ಯಾವುದೇ ಸಮಾಜದ ವಿರೋಧವಲ್ಲ, ಬದಲಾಗಿ ರಾಜಕೀಯ ಲಾಭಕ್ಕಾಗಿ ಸರ್ಕಾರ ನಡೆಸುತ್ತಿರುವ ಒಡೆದು ಆಳುವ ನೀತಿಗೆ ವಿರುದ್ಧ. ಹೀಗಾಗಿ ಯಾವುದೇ ಭಾಗದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಅಹಿತಕರ ಘಟನೆಗಳು‌ ನಡೆಯದಂತೆ, ಶಾಂತಿಯುತ ಬಂದ್ ನಡೆಸಲು ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಕರವೇ ಮಾಹಿತಿ ನೀಡಿದೆ.

ಇದನ್ನೂ ಓದಿ: ಮರಾಠ ಅಭಿವೃದ್ಧಿ ಪ್ರಾಧಿಕಾರ: ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ!

ಮರಾಠಾ ಪ್ರಾಧಿಕಾರ ರಚನೆ ಸಂಬಂಧ ಮುಖ್ಯಮಂತ್ರಿಗಳು ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಬಹುದಿತ್ತು. ಆದರೆ ಮುಖ್ಯಮಂತ್ರಿಗಳಾದಿಯಾಗಿ ಸರ್ಕಾರವನ್ನು‌‌ ನಡೆಸುತ್ತಿರುವವರು ಹುಂಬತನದಿಂದ ಆಕ್ರಮಣಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಆಳುವ ಪಕ್ಷದ ಶಾಸಕರುಗಳೇ ನಾಲಿಗೆ ಹರಿಬಿಟ್ಟು ಕನ್ನಡಪರ ಸಂಘಟನೆಗಳನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕನ್ನಡದ್ರೋಹಿ ಶಾಸಕರುಗಳು “ನಮಗೆ ಕನ್ನಡಿಗರ ಮತ ಬೇಕಿಲ್ಲ” ಎಂಬಂಥ ಉದ್ಧಟತನದ ಹೇಳಿಕೆಗಳನ್ನೂ ನೀಡಿದ್ದಾರೆ. ಆದರೆ, ದುರದೃಷ್ಟವಶಾತ್ ಈ ಹೇಳಿಕೆಗಳನ್ನು ಖಂಡಿಸದೆ ಸರ್ಕಾರ ಮೌನ ಸಮ್ಮತಿ‌ ನೀಡಿರುವುದು ಕನ್ನಡ ಕಾರ್ಯಕರ್ತರ‌ನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಬಂದ್’ ನಡೆಸಲು ಕಾರಣಕರ್ತರು ಸರ್ಕಾರದವರೇ ಹೊರತು ಕನ್ನಡಪರ ಸಂಘಟನೆಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ತಮ್ಮ ಪ್ರತಿಭಟನೆಗೆ ಸರ್ಕಾರ ಕಾರಣ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನದವರೆಗೆ ತಲುಪಲು ಅವರು ಹೋರಾಟದ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದೇ ಕಾರಣ. ಆದರೆ ಅವರೇ ಇಂದು ಹೋರಾಟಗಾರರಿಗೆ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕುವ ಬೆದರಿಕೆ ಒಡ್ಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆತ್ಮವಿಮರ್ಶೆ ಮಾಡಿಕೊಂಡು ಈ ಬೆದರಿಕೆ ತಂತ್ರವನ್ನು ಕೈಬಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಬುದ್ಧತೆ ಮೆರೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

‘ಕರ್ನಾಟಕ ಬಂದ್’ ವೇಳೆ ವೈದ್ಯಕೀಯ ಸೇವೆಗಳು, ಆಂಬುಲೆನ್ಸ್, ಔಷಧಿ ಅಂಗಡಿಗಳು, ಹಾಲು-ದಿನಪತ್ರಿಕೆ ಸರಬರಾಜಿನಂಥ ಅಗತ್ಯ ಸೇವೆಗಳಲ್ಲಿ ವ್ಯತ್ಯಯವಾಗುವುದಿಲ್ಲ. ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳುವುದರಿಂದ ನಾಗರಿಕರು ಡಿಸೆಂಬರ್ 5ರಂದು ಮನೆಯಲ್ಲೇ ಉಳಿದು ಬಂದ್ ಬೆಂಬಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಇನ್ನು ’ಕನ್ನಡಿಗರಿಗೆ ಅಗತ್ಯವಿರುವ ಎಲ್ಲವನ್ನು ಮಾಡಲು ಸರ್ಕಾರ ಸಿದ್ಧವಾಗಿದೆ. ಆದರೆ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ. ಸಂಘಟನೆಗಳು ಬಲವಂತವಾಗಿ ಬಂದ್ ಜಾರಿಗೊಳಿಸಲು ಮುಂದಾದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರು ಶಾಂತಿಯುತವಾಗಿ ಪ್ರತಿಭಟಿಸಬಹುದು. ಆದರೆ ಸರ್ಕಾರವು ಬಲವಂತದ ಬಂದ್ ಅನ್ನು ನಾವು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...