Homeಕರ್ನಾಟಕಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ ಎಂದ ಯತ್ನಾಳ್‌ಗೆ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕರವೇ ಕಿಡಿಕಾರಿದೆ.

ಈ ನಾಡಿನ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನು ಧಾರೆಯೆರೆದು ಹೋರಾಡುತ್ತಿರುವ ರಾಜ್ಯದ ಲಕ್ಷಾಂತರ ಕರವೇ ಕಾರ್ಯಕರ್ತರು ಸರಿಯಾದ ಸಂದರ್ಭದಲ್ಲಿ ಯತ್ನಾಳ್‌ಗೆ ಸರಿಯಾದ ಉತ್ತರ ನೀಡುತ್ತಾರೆ. ಯಾರು ಕಳ್ಳರು, ಯಾರು ಸುಳ್ಳರು ಎಂಬುದನ್ನು ರಾಜ್ಯದ ಜನತೆಯ ಮುಂದೆ ತೆರೆದಿಡಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್‌ಟಿ ಬಾಕಿ ತರಲು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹಿಂದೆ ಸವಾಲು ಹಾಕಿದ್ದೆ. ಆದರೆ ಯತ್ನಾಳ್ ಆ ವಿಷಯ ಮಾತಾಡುತ್ತಿಲ್ಲ. ಅವರಿಗೆ ಜನರ ಕಷ್ಟಗಳ ಕುರಿತು ಕಾಳಜಿಯಿಲ್ಲ, ಕೇವಲ ಪ್ರಚಾರಕ್ಕಾಗಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಅವರು ನಾಡಿನ ಸಾಕ್ಷಿಪ್ರಜ್ಞೆ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರ ಕುರಿತೂ ಕೀಳಾಗಿ ಮಾತಾಡಿದ್ದಾರೆ. ಇದು ಅವರ ಸಂಸ್ಕಾರ, ಸಂಸ್ಕೃತಿಯನ್ನು ತೋರಿಸುತ್ತದೆ. ಒಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು‌ ನಿಂದಿಸುವ ಇವರು ಯಾವ ಸೀಮೆಯ ದೇಶಭಕ್ತರು? ಇವರೆಂಥ ರಾಷ್ಟ್ರೀಯವಾದಿಗಳು? ಎಂದು ಪ್ರಶ್ನಿಸಿದ್ದಾರೆ.

“ಕರವೇಯಲ್ಲಿ ಸಾಬರು ಇದ್ದಾರೆ” ಎಂದು ಹೇಳಿದ್ದಾರೆ ಯತ್ನಾಳ್. ಕರವೇಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧರಾದಿಯಾಗಿ ಎಲ್ಲ ಧರ್ಮದವರೂ ಇದ್ದಾರೆ. ಭಾರತ ಸಂವಿಧಾನದ 14 ನೇ ವಿಧಿ, ಎಲ್ಲ ಭಾರತೀಯರೂ ಸಮಾನರೆಂದು ಹೇಳುತ್ತದೆ. ಕರವೇಯಲ್ಲಿ ಎಲ್ಲ ಧರ್ಮದವರೂ ಕನ್ನಡಸೇವೆಯಲ್ಲಿ ತೊಡಗಿದ್ದಾರೆ, ಅದಕ್ಕಾಗಿ ನಾವು ಹೆಮ್ಮೆಪಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ “ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು” ಎಂಬ ಘೋಷವಾಕ್ಯದೊಂದಿಗೆ 21 ವರ್ಷಗಳಿಂದ ಕನ್ನಡ ಚಳವಳಿಯನ್ನು ಸಂಘಟಿಸುತ್ತಿದೆ. ಧರ್ಮ-ಧರ್ಮಗಳ ನಡುವೆ ದ್ವೇಷ ಹರಡಿ, ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವುದು ಯತ್ನಾಳ್‌ರಂಥವರ ಕುತಂತ್ರ. ಯತ್ನಾಳ್ ಕುತಂತ್ರ ಫಲ ಕೊಡುವುದಿಲ್ಲ, ಅವರಿಗೆ ತಿರುಗುಬಾಣವಾಗುತ್ತದೆ ಎಂದಿದ್ದಾರೆ.

ತನ್ನನ್ನು ಮಂತ್ರಿ ಮಾಡಲೆಂದು ಆಗಾಗ ಬ್ಲಾಕ್ ಮೇಲ್ ಮಾಡುವ ಯತ್ನಾಳ್ ಈಗ ಬಿಜೆಪಿಯವರ ಪಾಲಿಗೇ ಗೊಡ್ಡುಹಸುವಾಗಿದ್ದಾರೆ. ಹೀಗಾಗಿ ಸುದ್ದಿಯಲ್ಲಿ ಇರಲು, ಆಕಾಶಕ್ಕೆ ಉಗುಳುವ ಕೆಲಸ ಮಾಡುತ್ತಿದ್ದಾರೆ. ಆಕಾಶಕ್ಕೆ ಉಗಿದರೆ ಅದು ಅವರ ಮೇಲೇ ಬೀಳುವುದಿಲ್ಲವೇ? ಹತ್ತು ಮಂದಿ ಪುಂಡಪೋಕರಿಗಳನ್ನು ಸುತ್ತ ನಿಲ್ಲಿಸಿಕೊಂಡು, ಮೀಡಿಯಾ ಮೈಕುಗಳ ಎದುರು ಬಾಯಿಗೆ ಬಂದಿದ್ದು ಮಾತನಾಡಿದರೆ ದೊಡ್ಡ ನಾಯಕನೆನಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಯತ್ನಾಳ್ ಇದ್ದಾರೆ. ಇಂಥವರು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಿದ್ದಾರೆ, ಇವರೂ ಆಗುತ್ತಾರೆ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿಜಕ್ಕೂ ಜನರ ಪರವಾದ ಕಾಳಜಿ ಇದ್ದರೆ, ಅವರದೇ ಜಿಲ್ಲೆ ವಿಜಯಪುರದಲ್ಲಿ ನರಳುತ್ತಿರುವ ನೆರೆಸಂತ್ರಸ್ಥರ ಜತೆ ನಿಲ್ಲಲಿ. ನೆರೆ ಪರಿಹಾರ ಯಾಕೆ ಕೊಟ್ಟಿಲ್ಲವೆಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋರಾಟ ರೂಪಿಸಲಿ. ಆಗ ಅವರನ್ನು ಜನರು ನಾಯಕರೆಂದು ಪರಿಗಣಿಸುತ್ತಾರೆ ಎಂದು ನಾರಾಯಣಗೌಡ್ರು ತಿಳಿಸಿದ್ದಾರೆ.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...