ಇತ್ತಿಚೆಗೆ ನಮ್ಮನ್ನಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಗೌರವ ನೀಡಬೇಕು ಎಂಬ ಕೂಗು ಅಭಿಮಾನಿಗಳು ಮತ್ತು ಚಿತ್ರರಂಗದಿಂದ ಕೇಳಿ ಬರುತ್ತಿದೆ.
ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್‌ಕುಮಾರ್ ಅವರನ್ನು ಆಸ್ಪತ್ರೆಗೆ ಸೇರಿಸಿದಾನಿಂದ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯುವವರೆಗೂ ಡಾ.ರಾಜ್‌ಕುಮಾರ್ ಅವರ ಕುಟುಂಬದ ಜೊತೆಗಿದ್ದರು.
ಇದನ್ನೂ ಓದಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು
ಡಾ.ರಾಜ್‌ಕುಮಾರ್ ಕುಟುಂಬದ ಪ್ರತಿಭಾನ್ವಿತ ನಟ, ಸಹೃದಯಿ ಪುನೀತ್ ರಾಜ್‌ಕುಮಾರ್ ಅವರು ನಾಲ್ಕು ದಶಕಗಳ ಸಿನಿಮಾ ಪಯಣವನ್ನು ಮುಗಿಸಿ ಕಳೆದ ಶುಕ್ರವಾರದಂದು (ಅ.29) ಇಹಲೋಹ ತ್ಯಜಿಸಿದ್ದಾರೆ. ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು.
ಬಾಲ ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್ ರಾಜ್‌ಕುಮಾರ್ ಅವರು ಕನ್ನಡಿಗರ ಹೃದಯದಲ್ಲಿ ನೆಲೆಸಿದರು. ನಟರಾಗಿ ಅಷ್ಟೇ ಆಗಿ ಉಳಿಯದೇ ಕನ್ನಡ ಚಿತ್ರರಂಗದಲ್ಲಿ ಹೊಸ ನೀರು ಹರಿಯಬೇಕೆಂದು ಹಂಬಲಿಸಿದ ವ್ಯಕ್ತಿ ಅವರಾಗಿದ್ದರು. ಚಿತ್ರರಂಗಕ್ಕೆ ಹೊಸದಾಗಿ ಕಾಲಿಟ್ಟವರನ್ನು ಪೊರೆಯುತ್ತಿದ್ದರು. ಸೋತವರಿಗೆ ಮತ್ತೊಂದು ಅವಕಾಶ ದೊರಕಿಸಿ ನೆಲೆ ನಿಲ್ಲಲು ಬೆನ್ನೆಲುಬಾಗಿದ್ದರು. ತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ.
ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು


