Homeಮುಖಪುಟ’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕೇರಳದಿಂದ ಕಳುಹಿಸಲಾಗಿದ್ದ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ಒಕ್ಕೂಟ ಸರ್ಕಾರದ ಸಮರ್ಥನೆಗೆ ಇಳಿದಿರುವುದನ್ನು ಜಾತ್ಯಾತೀತ ಜನತಾದಳ ಖಂಡಿಸಿದೆ.

“ಗಣರಾಜ್ಯೋತ್ಸವ ಪರೇಡ್ ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ನಾರಾಯಣ ಗುರುಗಳ ಚಿತ್ರವುಳ್ಳ ಕೇರಳ ರಾಜ್ಯದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿದ್ದನ್ನು ಪ್ರಶ್ನೆ ಮಾಡಿದ್ದನ್ನೇ ಬಿಜೆಪಿ ವಿವಾದ ಎಂದು ಬಿಂಬಿಸುತ್ತಿದೆ. ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಕರ್ನಾಟಕ ಬಿಜೆಪಿ ಮತ್ತು ಸಿ.ಟಿ.ರವಿ ಅವರಿಗೆ ಕರತಲಾಮಲಕ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

’ವಿವಾದವಲ್ಲದ ವಿಚಾರ ಅಂದರೇನು..? ನಾರಾಯಣ ಗುರುಗಳಿಗೆ ಆದ ಅನ್ಯಾಯವನ್ನು ಪ್ರಶ್ನೆ ಮಾಡಬಾರದಿತ್ತೆ..? ಕೇರಳ ಸರ್ಕಾರ ಸ್ತಬ್ಧಚಿತ್ರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದಾದರೆ ಆ ಮಾರ್ಗದರ್ಶಿ ಸೂತ್ರಗಳನ್ನು ಸಾರ್ವಜನಿಕವಾಗಿ ದೇಶದ ಮುಂದಿಡಿ. ಅರೆಬರೆ ವಿವರ ಬೇಡ’ ಎಂದಿದೆ.

ಇದನ್ನೂ ಓದಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

’ಕೇರಳದ ಜತೆಗೆ ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಕೂಡ ನಿರಾಕರಿಸಲಾಗಿದೆ. ಪ್ರಾದೇಶಿಕ ಪಕ್ಷಗಳ ಆಡಳಿತ ಇರುವ ರಾಜ್ಯಗಳ ಸ್ತಬ್ಧ ಚಿತ್ರಗಳ ಆಯ್ಕೆ ಬಗ್ಗೆ ಏಕೆ ತಾರತಮ್ಯ ನೀತಿ..? ಪ್ರಾದೇಶಿಕ ಆಸ್ಮಿತೆಯ ಕತ್ತು ಹಿಸುಕುವ ಪ್ರಯತ್ನವೇ ಇದು ಎಂಬ ಅನುಮಾನ ಬರುತ್ತಿದೆ’ ಎಂದು ಅನುಮಾನ ವ್ಯಕ್ತಪಡಿಸಿದೆ.

’ಆಯ್ಕೆ ಸಮಿತಿಯಲ್ಲಿ ಇರುವವರು ಯಾರು..? ಅವರ ಹಿನ್ನೆಲೆ ಏನು..? ಅವರ ಆಯ್ಕೆಯ ಬಗ್ಗೆ ಇರುವ ಮಾನದಂಡ ಏನು..? ಇದು ಕೂಡ ದೇಶಕ್ಕೆ ಗೊತ್ತಾಗಬೇಕಿದೆ. ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ಕೇಂದ್ರ ಸರಕಾರದ ಪಾತ್ರ ಇಲ್ಲ ಎನ್ನುವ ಬಿಜೆಪಿ, ಪ್ರಧಾನಿಗಳಿಗೆ ಶ್ರೀ ನಾರಾಯಣ ಗುರುಗಳ ಬಗ್ಗೆ ತುಂಬಾ ಗೌರವ ಇದೆ ಎನ್ನುತ್ತೀರಿ. ಏನಿದು ಎರಡು ನಾಲಗೆಯ ತುತ್ತೂರಿ..?’ ಎಂದು ಪ್ರಶ್ನಿಸಿದೆ.

’ಈ ವಿವಾದವನ್ನು ಹುಟ್ಟು ಹಾಕಿದವರು ಎಚ್.ಡಿ.ಕುಮಾರಸ್ವಾಮಿ ಅವರಲ್ಲ, ಬಿಜೆಪಿ ಮತ್ತು ಕೇಂದ್ರ ಸರ್ಕಾರ. ವಿವಿಧತೆಯಲ್ಲಿ ಏಕತೆಯುಳ್ಳ ಭಾರತವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಇಂಥ ಹುನ್ನಾರಗಳು ಇನ್ನಾದರೂ ನಿಲ್ಲಲ್ಲಿ. ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದಲ್ಲಿ ಇದ್ದ ನ್ಯೂನತೆಗಳು ಏನು..? ಎಂದು ತಿಳಿಯುವ ಹಕ್ಕು ದೇಶಕ್ಕಿದೆ ಎನ್ನುವುದು ನಮ್ಮ ಭಾವನೆ’ ಎಂದು ಹೇಳಿದೆ.


ಇದನ್ನೂ ಓದಿ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...