Homeಕರ್ನಾಟಕರಾಜ್ಯದಲ್ಲಿ ಒಂದೇ ದಿನ 25 ಸಾವಿರ ಗಡಿ ದಾಟಿದ ಕೊರೊನಾ ಪ್ರಕರಣಗಳು

ರಾಜ್ಯದಲ್ಲಿ ಒಂದೇ ದಿನ 25 ಸಾವಿರ ಗಡಿ ದಾಟಿದ ಕೊರೊನಾ ಪ್ರಕರಣಗಳು

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿದ್ದು, ಒಂದೇ ದಿನ 25 ಸಾವಿರದ ಗಡಿ ದಾಟಿದೆ. 24 ಗಂಟೆಗಳಲ್ಲಿ ದಾಖಲೆಯ 25,795 ಮಂದಿಗೆ ಸೋಂಕು ಹಬ್ಬಿದ್ದು, ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 123 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವ ಬೆಂಗಳೂರಿನಲ್ಲಿ 15,244 ಹೊಸ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

24 ಗಂಟೆಯಲ್ಲಿ 5,624 ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಡಿರ್ಸಾಜ್ ಆದವರ ಸಂಖ್ಯೆ 10,37,857 ಆಇದೆ. ಇನ್ನು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,96,236ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 243 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...