Homeಕರ್ನಾಟಕKSRTC ಟ್ರೇಡ್‌ ಮಾರ್ಕ್‌ ವಿವಾದ: ಹೈಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ

KSRTC ಟ್ರೇಡ್‌ ಮಾರ್ಕ್‌ ವಿವಾದ: ಹೈಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ

- Advertisement -
- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಕೆಎಸ್ಸಾರ್ಟಿಸಿ(KSRTC) ಟ್ರೇಡ್‌ ಮಾರ್ಕ್‌ ಬಳಸಲು ಅನುಮತಿಸಬಾರದು ಎಂದು ಕೇರಳ ರಾಜ್ಯ ಆರ್‌ಟಿಸಿ ಸಲ್ಲಿಸಿದ ಮನವಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾಗೊಳಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ಯಾವುದೇ ಕಾನೂನಿನ ಸಮಸ್ಯೆಯಿಲ್ಲದೆ ಕೆಎಸ್ಸಾರ್ಟಿಸಿ ಹೆಸರನ್ನು ಬಳಸಬಹುದಾಗಿದೆ.

ಈ ಕುರಿತು ಕೇರಳ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕೆಎಸ್ಸಾರ್ಟಿಸಿ ಹೆಸರು ಬಳಕೆ ಮಾಡಲು ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು, ಕೇರಳ ಆರ್ಟಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಕೆಎಸ್‌ಆರ್‌ಟಿಸಿ ಎಂಬ ಟ್ರೇಡ್‌ ಮಾರ್ಕ್‌ ಬಳಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಇರುವ ಎಲ್ಲಾ ಕಾನೂನು ಅಡೆತಡೆಗಳನ್ನು ಮದ್ರಾಸ್ ಹೈಕೋರ್ಟ್ ತೆರವುಗೊಳಿಸಿದೆ.

ಕೇರಳ ಮತ್ತು ಕರ್ನಾಟಕ ರಾಜ್ಯಗಳು ತಮ್ಮ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸಾರಿಗೆ ನಿಗಮಗಳಿಗೆ ಕ್ರಮವಾಗಿ 1965 ಮತ್ತು 1973 ರಿಂದ KSRTC ಎಂಬ ಸಂಕ್ಷೇಪಣವನ್ನು ಬಳಸುತ್ತಿವೆ. ಕರ್ನಾಟಕವು 1973ರಿಂದ ಕೆಎಸ್‌ಆರ್‌ಟಿಸಿ ಲೋಗೊ ಬಳಸುತ್ತಿರುವ ಬಗ್ಗೆ ದಾಖಲೆಗಳನ್ನು ಚೆನ್ನೈ ಟ್ರೇಡ್‌ ಮಾರ್ಕ್‌ ನೋಂದಣಿ ಅಧಿಕಾರಿಗೆ ಸಲ್ಲಿಸಿ 2013ರಲ್ಲಿ ಟ್ರೇಡ್‌ ಮಾರ್ಕ್‌ ಪ್ರಮಾಣ ಪತ್ರವನ್ನು ಪಡೆದಿತ್ತು. ಇದಲ್ಲದೆ ಭಾರತ ಸರಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘ಕೆಎಸ್ಸಾರ್ಟಿಸಿ’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ಸಹ ಪಡೆದಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ (ಇಂಟಲೆಕ್ಚುವಲ್‌ ಪ್ರಾಪರ್ಟಿ ಅಪೀಲ್‌ ಬೋರ್ಡ್‌)  ಮುಂದೆ ಇದನ್ನು ಪ್ರಶ್ನಿಸಿತ್ತು. ಆದರೆ ಕೇಂದ್ರ ಸರ್ಕಾರವು ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯನ್ನು ರದ್ದುಗೊಳಿಸಿ ಅಲ್ಲಿರುವ ಪ್ರಕರಣಗಳನ್ನು ಮದ್ರಾಸ್‌ ಹೈಕೋರ್ಟ್‌ಗೆ ವರ್ಗಾಯಿಸಿತ್ತು.

1937ರಿಂದ ತಿರುವಾಂಕೂರು ರಾಜ್ಯ ಸಾರಿಗೆ ಸಂಸ್ಥೆಯಿದ್ದು, ಕೇರಳ ರಾಜ್ಯ ಉದಯವಾದ ಬಳಿಕ 1965ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭವಾಯಿತು.  42 ವರ್ಷಗಳಿಂದ ಕೇರಳ ರಾಜ್ಯ ಆರ್‌ಟಿಸಿಯು ಕೆಎಸ್‌ಆರ್‌ಟಿಸಿ ಬಳಸುತ್ತಿರುವುದರಿಂದ ಕರ್ನಾಟಕದ ಟ್ರೇಡ್‌ ಮಾರ್ಕ್‌ ಪ್ರಮಾಣ ಪತ್ರವನ್ನು ಅಮಾನ್ಯಗೊಳಿಸಬೇಕು ಎಂದು ಕೋರ್ಟ್‌ನಲ್ಲಿ ವಾದಿಸಿತ್ತು.

ಈ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿದ ಮದ್ರಾಸ್ ಹೈಕೋರ್ಟ್‌, ಉಭಯ ರಾಜ್ಯಗಳ ವಾದ–ಪ್ರತಿವಾದ ಆಲಿಸಿ ಕೇರಳದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕದ ವಾದವನ್ನು ಎತ್ತಿ ಹಿಡಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್ಸಾರ್ಟಿಸಿ ಅಧಿಕಾರಿಗಳು, ಕೇರಳ ರಾಜ್ಯ ಕೆಎಸ್‌ಆರ್‌ಟಿಸಿ ಬಳಕೆ ಮಾಡುವುದನ್ನು ನಾವು ಆಕ್ಷೇಪಿಸಿಲ್ಲ. ಆದರೆ ಅವರು ಆಕ್ಷೇಪಣೆ ಸಲ್ಲಿಸಿದ್ದು, ಹೈಕೋರ್ಟ್‌ ಅರ್ಜಿಯನ್ನು ವಜಾ ಮಾಡಿದೆ. ಈಗ ನಮಗೆ ಯಾವುದೇ ಕಾನೂನಿನ ತಡೆಯಿಲ್ಲ ಎಂದು ಹೇಳಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...