Homeಕರೋನಾ ತಲ್ಲಣರಾಜ್ಯದಲ್ಲಿ ಆ.23 ರಿಂದ 9, 10ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಆ.23 ರಿಂದ 9, 10ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ

- Advertisement -
- Advertisement -

ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ​​ ಬಿಡುಗಡೆ ಮಾಡಿದೆ. ಪ್ರತಿದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗೆ ಅವಕಾಶ ನೀಡಲಾಗಿದ್ದು, ಕೊರೊನಾ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭವಾಗಲಿದೆ.

ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಶಾಲೆಗೆ ಬರುವುದಕ್ಕೆ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೊರೊನಾ ಲಕ್ಷಣಗಳಿಲ್ಲದಿರುವುದು ದೃಢಪಡಿಸಿರಬೇಕು. ಮಕ್ಕಳು ಮನೆಯಿಂದಲೇ ಕುಡಿಯುವ ನೀರು, ಊಟ ತರಬೇಕು.

ಮಕ್ಕಳ ಅವಶ್ಯಕತೆಗೆ ಅನುಸಾರ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸೋಮವಾರದಿಂದ ಶುಕ್ರವಾರದವರೆಗೆ ಅರ್ಧದಿನ ಅಂದರೆ, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ತರಗತಿ ನಡೆಯಲಿದೆ. ಶನಿವಾರ ಬೆಳಗ್ಗೆ 10ರಿಂದ ಮ.12.50ರ ವರೆಗೆ ತರಗತಿಗಳು ನಡೆಯಲಿದೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

 

ತರಗತಿಗಳಿಗೆ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಿರುವುದಿಲ್ಲ. ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಹಾಜರಾಗಬಹುದು. ಶಿಕ್ಷಕರು 15 ರಿಂದ 20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿ ಭೌತಿಕ ತರಗತಿ ನಡೆಸಬೇಕು.

ಶಾಲೆ ಆರಂಭಕ್ಕೂ ಮೊದಲು ಸಂಪೂರ್ಣ ಶಾಲೆಯನ್ನು ಸ್ವಚ್ಛಗೊಳಿಸಬೇಕು. ಶಾಲೆಯ ಆವರಣವನ್ನು ಸ್ಯಾನಿಟೈಸ್ ಮಾಡಬೇಕು. ಕುಡಿಯುವ ನೀರಿನ ಸೌಲಭ್ಯ, ಶೌಚಾಲಯಗಳನ್ನು ಸ್ವಚ್ಛಗೊಳಿಸಬೇಕು.

ಇನ್ನು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸೆಪ್ಟಂಬರ್‌ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ, ದುರ್ಗಾಪೂಜೆ ಸೇರಿದಂತೆ ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸೆಪ್ಟಂಬರ್, ಅಕ್ಟೋಬರ್‌ ತಿಂಗಳಲ್ಲಿ ಆಚರಣೆ ಮಾಡಲಾಗುವ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ಮೊಹರಂ, ದುರ್ಗಾಪೂಜೆಯ ಧಾರ್ಮಿಕ ಆಚರಣೆಗಳಲ್ಲಿ ಜನ ಸೇರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜನರ ಒಗ್ಗೂಡುವಿಕೆ, ಬೃಹತ್ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...