Homeಕರ್ನಾಟಕರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ...

ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ…

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ದಿನನಿತ್ಯ‌ ತರಗತಿಗಳನ್ನು ಪ್ರಾರಂಭಿಸಲು ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್ ತರಗತಿಗಳೇ ಆರಾಮದಾಯಕವೆಂದು ಪೋಷಕರು ಹೇಳುತ್ತಾರೆ. ಇಲ್ಲಿ ಪೋಷಕರಿಗೆ ತಮ್ಮ ಮಕ್ಕಳ ಬಗ್ಗೆ ಇರುವ ಕಾಳಜಿ ಅರ್ಥ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದರು.

ಜೊತೆಗೆ, ಕೇಂದ್ರದಿಂದ ತರಗತಿಗಳ ಪ್ರಾರಂಭಕ್ಕೆ ಒಪ್ಪಿಗೆ ದೊರೆತ ಬಳಿಕ, ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ? 

ಪ್ರತಿವರ್ಷ ಜೂನ್ ವೇಳೆಗೆ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಅದು ಈ ವರ್ಷ ಆಗಲಿಲ್ಲ. ಆದ್ದರಿಂದ, ಸೆಪ್ಟೆಂಬರ್ ಅಂತ್ಯದ ವೇಳೆಗೆ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಈ ಬಾರಿ ಖಾಸಗಿ ಶಾಲೆಗಳು ಕೇವಲ ಒಂದು ಟರ್ಮ್ ಫೀಸ್ ಮಾತ್ರ ಪಡೆಯಬೇಕು ಎಂಬ ಆದೇಶವನ್ನು ಸರ್ಕಾರ ಜಾರಿಗೆ ತಂದಿದೆ. ಆಗೊಮ್ಮೆ ಖಾಸಗಿ ಶಾಲೆಗಳಿಂದ ಪೋಷಕರಿಗೆ ಸಮಸ್ಯೆ ಆದರೆ ಡಿಡಿಪಿಐ, ಬಿಇಓ ಈ‌ ಬಗ್ಗೆ ಕ್ರಮ‌ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಜೊತೆಗೆ 2020-21ರ ಶೈಕ್ಷಣಿಕ ವರ್ಷಕ್ಕೆ ಶಾಲೆಗಳು ಶುಲ್ಕವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...