Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...