Homeಕರ್ನಾಟಕಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

ಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

- Advertisement -
- Advertisement -

ಇಂದು (ನ.10) ’ಮೈಸೂರಿನ ಹುಲಿ’ ಎಂದೇ ಪ್ರಖ್ಯಾತರಾಗಿದ್ದ ದೊರೆ ಟಿಪ್ಪು ಸುಲ್ತಾನ್ ಜಯಂತಿ. ಈ ಹಿನ್ನೆಲೆಯಲ್ಲಿ ನಾಡಿನ ಗಣ್ಯರು, ರಾಜಕಾರಣಿಗಳು, ವಿದ್ಯಾರ್ಥಿಗಳು ಟಿಪ್ಪು ಜಯಂತಿಯ ಶುಭಾಶಯ ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅಪ್ರತಿಮ ಸ್ವಾತಂತ್ರ್ಯ ಸೇನಾನಿ, ದಕ್ಷ ಆಡಳಿತಗಾರ ಮತ್ತು
ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ” ಎಂದು ಟ್ವೀಟ್ ಮಾಡಿದ್ದಾರೆ.

“ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ. ನಾಡ ಬಂಧುಗಳಿಗೆ ಟಿಪ್ಪು ಜಯಂತಿಯ ಶುಭಾಶಯಗಳು” ಎಂದಿದ್ದಾರೆ.

ಇದನ್ನೂ ಓದಿ: ಟಿಪ್ಪು ಸುಲ್ತಾನರ ಖಡ್ಗದಲ್ಲಿ ಬರೆದಿರುವುದೇನು…?

ಶಾಸಕ ಜಮೀರ್ ಅಹ್ಮದ್ ಖಾನ್ ಟಿಪ್ಪು ಜಯಂತಿಯ ಶುಭ ಕೋರಿದ್ದಾರೆ. “ಬ್ರಿಟೀಷರ ಸರ್ವಾಧಿಕಾರಿ ಆಡಳಿತದ ವಿರುದ್ಧ ಸೆಟೆದು ನಿಂತು, ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಮಹಾನ್ ದೇಶಪ್ರೇಮಿ ಹಜ್ರತ್ ಟಿಪ್ಪು ಸುಲ್ತಾನ್ ಅವರ ಜನ್ಮದಿನದ ಸಂದರ್ಭದಲ್ಲಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸುತ್ತಾ, ನನ್ನ ಗೌರವ ನಮನಗಳನ್ನು ಅರ್ಪಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ , “ಮೈಸೂರಿನ ಹುಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯ ಶುಭಾಶಯಗಳು” ಎಂದಿದ್ದಾರೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಟಿಪ್ಪು ಜಯಂತಿಯ ಶುಭ ಕೋರಿದ್ದು, “ಕೃಷಿ ದೇಶದ ಜೀವಾಳ” ಎಂದಿದ್ದ ಟಿಪ್ಪು ಸುಲ್ತಾನ್, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿದ್ದರು. ಕೃಷಿಯ ಅಭಿವೃದ್ದಿಗಾಗಿ ಪ್ರಥಮ ಬಾರಿಗೆ ರೇಷ್ಮೆ ಪರಿಚಯಿಸಿದ್ದ ಟಿಪ್ಪು, ರೈತರ ಕೃಷಿಗಾಗಿ ನೂರಾರು ಕೆರೆಗಳನ್ನು ನಿರ್ಮಿಸಿದ್ದರು. ರೈತರಿಗೆ ಬಡ್ಡಿ ರಹಿತ ಸಾಲ, ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಜಾರಿಗೊಳಿಸಿದ್ದರು. ಅಲ್ಲದೆ, ಕೃಷಿ ಭೂಮಿಯನ್ನು ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಲು ಶ್ರಮಿಸಿದ್ದರು. ಆದರೆ, ಇಂದಿನ ರೈತ ವಿರೋಧಿ ಸರ್ಕಾರಗಳು ರೈತರನ್ನು ಬೀದಿಪಾಲು ಮಾಡಲು ಮುಂದಾಗಿವೆ.. ಟಿಪ್ಪುವಿಗೆ ರೈತರ ಬಗೆಗಿದ್ದ ಕಾಳಜಿಯನ್ನು ಅರಿತುಕೊಳ್ಳೋಣ, ರೈತ ಹೋರಾಟದಲ್ಲಿ ಭಾಗಿಯಾಗೋಣ” ಎಂದಿದೆ.

ಈ ಮೂಲಕ ಟಿಪ್ಪು ಸುಲ್ತಾನ್ ಕೃಷಿಗೆ ನೀಡಿದ್ದ ಪ್ರಾಮುಖ್ಯತೆಯನ್ನು ತಿಳಿಸಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...