HomeಅಂಕಣಗಳುKarnataka against SIRKarnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

- Advertisement -
- Advertisement -

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ.

ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ ಎಫ್‌ಐಆರ್ ಬಿಡುಗಡೆ ಮಾಡಿರುವ ಸಂಘಟನೆಗಳು, ಇಡೀ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಕದವನ್ನೂ ತಟ್ಟಲಿದ್ದೇವೆ ಎಂದು ಘೋಷಿಸಿವೆ.

ಚುನಾವಣಾ ಆಯೋಗ ನಡೆಸಿರುವ ಎಸ್‌ಐಆರ್ ಪ್ರಕ್ರಿಯೆಯನ್ನಾಗಲೀ, ಅದು ನೀಡಿರುವ ಅಂಕಿ ಸಂಖ್ಯೆಯನ್ನಾಗಲೀ, ಅದರ ಹಿಂದಿರುವ ವಿವರಣೆಯನ್ನಾಗಲೀ ನಾವು ಒಪ್ಪಲು ಸಾಧ್ಯವಿಲ್ಲ. ಕರ್ನಾಟಕದ ನಾಗರಿಕ ಸಮಾಜ ಇದೊಂದು ದೋಷಭರಿತ ಅನಾಗರಿಕ ಪ್ರಕ್ರಿಯೆ ಎಂದು ಘೋಷಿಸುತ್ತದೆ ಮತ್ತು ತಿರಸ್ಕರಿಸುತ್ತದೆ ಎಂದು ಸಂಘಟನೆಗಳು ಹೇಳಿಕೊಂಡಿವೆ.

ಎಸ್‌ಐಆರ್‌ನಂತಹ ದೋಷ ಮತ್ತು ದುಷ್ಟತನದ ಪ್ರಕ್ರಿಯೆಯನ್ನು ರೂಪಿಸಿರುವ ಕೇಂದ್ರ ಚುನಾವಣಾ ಆಯೋಗ, ವಿಶೇಷವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ರಾಜೀನಾಮೆಯನ್ನು ಕೊಡಬೇಕು ಎಂದು ಒತ್ತಾಯಿಸಿವೆ.

ಕೇಂದ್ರ ಚುನಾವಣಾ ಆಯುಕ್ತರು ಆಯ್ಕೆ ಮಾಡಲು ಕೇಂದ್ರ ಸರ್ಕಾರ ಮಾಡಿರುವ ಕಾನೂನು ತಿದ್ದುಪಡಿಯೇ ದುರುದ್ದೇಷದಿಂದ ಕೂಡಿದೆ. ಇಬ್ಬರು ಆಳುವ ಪಕ್ಷದ ಮತ್ತು ಒಬ್ಬರು ವಿರೋಧ ಪಕ್ಷದ ಸದಸ್ಯರಿದ್ದು ಆಯ್ಕೆ ಮಾಡುವ ಸಮಿತಿ ನಿಷ್ಪಕ್ಷಪಾತಿಯಾಗಿ ಇರಲು ಸಾಧ್ಯವಿಲ್ಲ. ಇದನ್ನು ಈ ಹಿಂದಿನಂತೆ ಒಬ್ಬರು ಆಳುವ , ಒಬ್ಬರು ವಿರೋಧ ಪಕ್ಷದ ಹಾಗೂ ಒಬ್ಬರು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಇರುವ ಸಮಿತಿ ಆಯ್ಕೆ ಮಾಡುವ ವಿಧಾನಕ್ಕೆ ಮರಳಬೇಕು ಎಂದು ಆಗ್ರಹಿಸಿವೆ.

ಎಸ್‌ಐಆರ್ ಅಕ್ರಮ ಪ್ರಕ್ರಿಯೆಯನ್ನು ಖಂಡಿಸಿ ಸೆಪ್ಟೆಂಬರ್‌ 1ರಂದು ಸಂತ್ರಸ್ತರ ಸಾಕ್ಷ್ಯಗಳೊಂದಿಗೆ ‘ಎಲೆಕ್ಷನ್‌ ಕಮಿಷನ್‌ ಚಲೋ’ ನಡೆಸಲಾಗುತ್ತಿದೆ ಎಂದು ನಾಗರಿಕ ಸಂಘಟನೆಗಳು ಘೋಷಿಸಿದ್ದು, ಇಡೀ ಪ್ರಕ್ರಿಯೆ ಹೇಗೆ ತಪ್ಪಾದುದು ಎಂಬುವುದನ್ನು ಕೇವಲ ತರ್ಕದ ಮೂಲಕವಲ್ಲ, ಜೀವಂತ ಸಾಕ್ಷಿಗಳ ಸಮೇತ ಚುನಾವಣಾ ಆಯೋಗದ ಮುಂದೆ ತರಲಿದ್ದೇವೆ ಎಂದು ಸವಾಲು ಹಾಕಿವೆ.

1.08 ಕೋಟಿ ಜನರನ್ನು ಎಎಸ್‌ಡಿಡಿಒ ಎಂದು ಡಿಲೀಟ್ ಪಟ್ಟಿಯಲ್ಲಿ ಇಟ್ಟಿರುದು ಮತ್ತು 43.80 ಲಕ್ಷ ಜನರಿಗೆ ದಾಖಲೆ ಕೇಳಿ ನೋಟಿಸ್ ನೀಡುವುದನ್ನು ನಾವು ಒಪ್ಪುವುದಿಲ್ಲ ಎಂದು ನಾಗರಿಕ ಸಂಘಟನೆಗಳು ಹೇಳಿಕೊಂಡಿವೆ.

ಎಎಸ್‌ಡಿಡಿಒ ಪಟ್ಟಿಯ ಕುರಿತು ಆಕ್ಷೇಪ ಎತ್ತಿರುವ ಸಂಘಟನೆಗಳು, ಡಿಲೀಟ್ ಪಟ್ಟಿಯಲ್ಲಿರುವ 1.08 ಕೋಟಿ ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ಗಂಭೀರ ಆರೋಪ ಮಾಡಿವೆ.

ಇನ್ನು ಅನ್‌ಮ್ಯಾಪಿಂಗ್ ಮತ್ತು ಅನಾಮಲಿಸ್ ಹೆಸರಿನಲ್ಲಿ 43.80 ಲಕ್ಷ ಜನರಿಗೆ ನೋಟಿಸ್ ನೀಡುವುದನ್ನು ಕೂಡ ಸಂಘಟನೆಗಳು ವಿರೋಧಿಸಿವೆ.

“ಒಟ್ಟು 43 ಲಕ್ಷ ಜನರನ್ನು ಅನುಮಾನಾಸ್ಪದ ಮತದಾರರನ್ನಾಗಿ ಗುರುತಿಸಿದ್ದೀರಿ..ಯಾರಿವರು? ಇವರ ಬಗ್ಗೆ ನಿಮಗೆ ಅನುಮಾನ ಬರಲು ಕಾರಣವೇನು? ಪಟ್ಟಿಯನ್ನೇಕೆ ಬಿಡುಗಡೆ ಮಾಡುತ್ತಿಲ್ಲ? ಇವರು ಪರದೇಶಗಳಿಂದ ಬಂದವರಾ? ಇಲ್ಲ ಎಂದು ನೀವೇ ಹೇಳಿದ್ದೀರಿ. ಹಾಗಿದ್ದ ಮೇಲೆ ನಮ್ಮ ನಾಗರೀಕರನ್ನೇ ಈ ರೀತಿ ಅನುಮಾನಿಸಿ ಅವಮಾನಿಸುವುದು ಹೇಗೆ ಸರಿ? ನಾವೇಕೆ ಇದನ್ನು ಸಹಿಸಬೇಕು? ಎಂದು ಖಾರವಾಗಿ ಪ್ರಶ್ನಿಸಿವೆ.

ಮೂಲಗಳ ಪ್ರಕಾರ, ಚುನಾವಣಾ ಆಯೋಗ ಎಎಸ್‌ಡಿಡಿಒ ಎಂದು ಈಗಾಗಲೇ ಮತ ಪಟ್ಟಿಯಿಂದ ಹೊರಗಿಟ್ಟಿರುವ ಅರ್ಹ ಮತದಾರರನ್ನು ನ್ಯಾಯಾಲಯದ ಮುಂದೆ ತಂದು ಇಡೀ ಎಸ್‌ಐಆರ್ ಪ್ರಕ್ರಿಯೆಯ ಲೋಪಗಳ ವಿರುದ್ದ ಕಾನೂನು ಸಮರ ನಡೆಸಲು ಸಂಘಟನೆಗಳು ಸಿದ್ದತೆ ನಡೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...