HomeಅಂಕಣಗಳುKarnataka against SIRಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್;...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

- Advertisement -
- Advertisement -

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ ಮತದಾರರ ಗುರುತನ್ನು ದಾಖಲೆಗಳ ಮೂಲಕ ಸಾಬೀತುಪಡಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಹಳೆಯ ಮತ್ತು ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಹೆಸರಿನ ಅಕ್ಷರ ಹಾಗೂ ಇನಿಷಿಯಲ್‌ಗಳಲ್ಲಿ ಕಂಡುಬಂದಿರುವ ಸಣ್ಣ ವ್ಯತ್ಯಾಸದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರಿಗೆ ನೋಟಿಸ್ ಜಾರಿಯಾಗಿದೆ. ಆದರೆ, ಹೆಸರಿನ ತಾಂತ್ರಿಕ ವ್ಯತ್ಯಾಸದ ವಿಚಾರಣೆಗೆ ಕರೆದಿರುವುದಕ್ಕಿಂತಲೂ ನೋಟಿಸ್‌ನಲ್ಲಿ ಬಳಸಿರುವ ‘ಸುಳ್ಳು ಮಾಹಿತಿ ನೀಡಿದರೆ ಕ್ರಿಮಿನಲ್ ಅಪರಾಧ, ಜೈಲು ಶಿಕ್ಷೆ ಹಾಗೂ ದಂಡ’ ಎಂಬ ಎಚ್ಚರಿಕೆಯ ಭಾಷೆಯೇ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರಾಗಿರುವ ಎ.ಬಿ. ಇಬ್ರಾಹಿಂ ಅವರು 1986ರಲ್ಲಿ ತಹಶೀಲ್ದಾರ್ ಆಗಿ ಸರ್ಕಾರಿ ಸೇವೆಗೆ ಪ್ರವೇಶಿಸಿದ್ದರು. ನಂತರ ಉಪ ಜಿಲ್ಲಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ, ಕೆಒಎನ್‌ಐಸಿಎಸ್ ನಿರ್ದೇಶಕ, ಕರ್ನಾಟಕ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಾರಿಗೆ ಆಯುಕ್ತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದ ಅವರು 2020ರಲ್ಲಿ ನಿವೃತ್ತರಾಗಿದ್ದಾರೆ.

ಅಂದರೆ, ಮತದಾರರ ಪಟ್ಟಿ, ಚುನಾವಣಾ ಆಡಳಿತ ಮತ್ತು ಸಾರ್ವಜನಿಕ ಆಡಳಿತದ ಕಾರ್ಯವಿಧಾನಗಳಿಗೆ ಅಪರಿಚಿತರಲ್ಲದ ಹಿರಿಯ ಅಧಿಕಾರಿಯೊಬ್ಬರೇ ಇಂದು ತಮ್ಮ ಮತದಾರರ ಅಸ್ತಿತ್ವವನ್ನು ದಾಖಲೆಗಳ ಮೂಲಕ ಸಾಬೀತುಪಡಿಸಲು ಚುನಾವಣಾ ಅಧಿಕಾರಿಗಳ ಮುಂದೆ ಹಾಜರಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅದೂ ಮತದಾರರ ಪಟ್ಟಿಯಲ್ಲಿರುವ ಹೆಸರಿನ ಅಕ್ಷರ ಅಥವಾ ಇನಿಷಿಯಲ್‌ನಲ್ಲಿನ ವ್ಯತ್ಯಾಸದಂತಹ ತಾಂತ್ರಿಕ ಕಾರಣಕ್ಕಾಗಿ ಎಂಬುದು SIR ಪ್ರಕ್ರಿಯೆಯ ಕಾರ್ಯವಿಧಾನದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇಬ್ರಾಹಿಂ ಅವರಿಗೆ ನೀಡಿರುವ ನೋಟಿಸ್‌ನಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಅಥವಾ ಸುಳ್ಳು ಘೋಷಣೆ ನೀಡುವುದು ಅಪರಾಧ ಎಂಬ ಎಚ್ಚರಿಕೆ ನೀಡಲಾಗಿದೆ. ಜನಪ್ರತಿನಿಧಿತ್ವ ಕಾಯ್ದೆ, 1950ರ ಸೆಕ್ಷನ್ 31ರ ಅಡಿಯಲ್ಲಿ ಕ್ರಮ ಕೈಗೊಳ್ಳಬಹುದೆಂಬ ಉಲ್ಲೇಖದೊಂದಿಗೆ, ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ದಂಡದಂತಹ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂಬ ಅಂಶವನ್ನು ನೋಟಿಸ್‌ನಲ್ಲಿ ತಿಳಿಸಲಾಗಿದೆ. ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸುವ ಆಡಳಿತಾತ್ಮಕ ನೋಟಿಸ್‌ನಲ್ಲೇ ಇಂತಹ ಕಠಿಣ ಎಚ್ಚರಿಕೆಗಳನ್ನು ಬಳಸಿರುವುದು ನಿವೃತ್ತ ಅಧಿಕಾರಿಗೆ ಆಘಾತ ತಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎ.ಬಿ. ಇಬ್ರಾಹಿಂ, ಮೂರೂವರೆ ದಶಕಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿರುವ ತಮ್ಮಂತಹ ವ್ಯಕ್ತಿಗೂ ಭಯ ಹುಟ್ಟಿಸುವ ರೀತಿಯ ನೋಟಿಸ್ ನೀಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋಟಿಸ್‌ನ ಎರಡನೇ ಪುಟದಲ್ಲಿರುವ ಸೂಚನೆಗಳನ್ನು ಓದಿದಾಗ ಆತಂಕ ಉಂಟಾಯಿತು ಎಂದು ಅವರು ಹೇಳಿದ್ದಾರೆ. ಕ್ರಿಮಿನಲ್ ಅಪರಾಧ, ಜೈಲು ಶಿಕ್ಷೆ, ದಂಡ ಮತ್ತು ಸುಳ್ಳು ಮಾಹಿತಿ ನೀಡಿದರೆ ಕಾನೂನು ಕ್ರಮ ಎಂಬ ರೀತಿಯ ಭಾಷೆ ಸಾಮಾನ್ಯ ನಾಗರಿಕನ ಮೇಲೆ ಎಂತಹ ಮಾನಸಿಕ ಪರಿಣಾಮ ಬೀರಬಹುದು ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟಿದ್ದಾರೆ.

ಇದು ತಮ್ಮೊಬ್ಬರ ಸಮಸ್ಯೆಯಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರನಿಗೂ ಸಂಬಂಧಿಸಿದ ವಿಚಾರ ಎಂದು ಇಬ್ರಾಹಿಂ ಹೇಳಿದ್ದಾರೆ. ಮತದಾರರ ಹಕ್ಕನ್ನು ಸುಗಮಗೊಳಿಸುವ ಬದಲು, ಇಂತಹ ನೋಟಿಸ್‌ಗಳ ಮೂಲಕ ನಾಗರಿಕರಲ್ಲಿ ಭಯ ಮೂಡಿಸುವ ವಾತಾವರಣ ನಿರ್ಮಾಣವಾಗುತ್ತಿದೆ ಎಂಬುದು ಅವರ ಆರೋಪ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಉಳಿಸಿಕೊಳ್ಳಲು ಸಾಮಾನ್ಯ ನಾಗರಿಕರು ಅಧಿಕಾರಿಗಳ ಮುಂದೆ ದಾಖಲೆಗಳನ್ನು ಹಿಡಿದು ನಿಲ್ಲಬೇಕಾದ ಪರಿಸ್ಥಿತಿ ಉಂಟಾದರೆ, ಚುನಾವಣಾ ಪ್ರಕ್ರಿಯೆಯ ಮೇಲಿನ ಜನರ ವಿಶ್ವಾಸದ ಮೇಲೆ ಅದರ ಪರಿಣಾಮವೇನು ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ.

ಇಬ್ರಾಹಿಂ ಅವರ ಪ್ರಕರಣಕ್ಕೆ ಮತ್ತೊಂದು ಮಹತ್ವದ ಹಿನ್ನೆಲೆಯೂ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿ ಅವರು ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯನ್ನು ನಿರ್ವಹಿಸಿದ್ದರು. 2014ರ ಲೋಕಸಭಾ ಚುನಾವಣೆ ಮತ್ತು 2016ರ ಪಂಚಾಯತ್ ಚುನಾವಣೆಗಳನ್ನು ಮುಖ್ಯ ಚುನಾವಣಾಧಿಕಾರಿಯಾಗಿ ನಡೆಸಿದ್ದ ಅವರು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

ಮುನೀರ್ ಕಾಟಿಪಳ್ಳ, ಇಬ್ರಾಹಿಂ ಅವರಂತಹ ಹಿರಿಯ ಅಧಿಕಾರಿಯೇ ಇಂದು ತಮ್ಮ ಮತದಾರರ ಗುರುತನ್ನು ಸಾಬೀತುಪಡಿಸುವ ನೋಟಿಸ್ ಎದುರಿಸುತ್ತಿರುವುದು ಚುನಾವಣಾ ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನೇ ಪ್ರಶ್ನಿಸುವಂತಾಗಿದೆ ಎಂದು ಟೀಕಿಸಿದ್ದಾರೆ. ಮತದಾರರ ಪಟ್ಟಿಯನ್ನು ನಿಖರಗೊಳಿಸುವ ಉದ್ದೇಶವನ್ನು ಯಾರೂ ಪ್ರಶ್ನಿಸದಿದ್ದರೂ, ಅದನ್ನು ಜಾರಿಗೊಳಿಸುವ ವಿಧಾನದಲ್ಲಿ ಸಾಮಾನ್ಯ ನಾಗರಿಕರ ಮೇಲೆ ಬೀರುವ ಒತ್ತಡ, ಭಯ ಮತ್ತು ಆಡಳಿತಾತ್ಮಕ ಹೊರೆ ಕುರಿತು ಪ್ರಶ್ನೆಗಳು ಎದ್ದಿವೆ.

ಕರ್ನಾಟಕದಲ್ಲಿ SIR ಪ್ರಕ್ರಿಯೆಯ ವೇಳೆ ತಾಂತ್ರಿಕ ವ್ಯತ್ಯಾಸಗಳಿಂದ ಹೆಸರುಗಳು ಪರಿಶೀಲನಾ ಪಟ್ಟಿಗೆ ಸೇರ್ಪಡೆಯಾಗುತ್ತಿರುವ ಪ್ರಕರಣಗಳಲ್ಲಿ ಇಬ್ರಾಹಿಂ ಒಬ್ಬರೇ ಅಲ್ಲ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಹೆಸರಿನಲ್ಲಿನ ವ್ಯತ್ಯಾಸವೂ ಇದೇ ರೀತಿಯ ಚರ್ಚೆಗೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಬಳಿಕ ಅಧಿಕಾರಿಗಳು ಅವರ ಮನೆಗೆ ತೆರಳಿ ದಾಖಲೆಗಳನ್ನು ಪರಿಶೀಲಿಸಿ ನೋಟಿಸ್ ಹಿಂಪಡೆದಿದ್ದರು. ಭಾರತ ರತ್ನ ಪುರಸ್ಕೃತ ಪ್ರೊ. ಸಿ.ಎನ್.ಆರ್. ರಾವ್, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನೀಲೇಕಣಿ ಹಾಗೂ ಜೆರೋಧಾ ಸಂಸ್ಥಾಪಕರಾದ ನಿತಿನ್ ಮತ್ತು ನಿಖಿಲ್ ಕಾಮತ್ ಅವರ ಹೆಸರುಗಳೂ ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಪರಿಶೀಲನೆಗೆ ಒಳಪಟ್ಟಿರುವುದಾಗಿ ವರದಿಯಾಗಿದೆ.

ಈ ಬೆಳವಣಿಗೆಗಳ ನಡುವೆ ಕರ್ನಾಟಕದಲ್ಲಿ ಒಟ್ಟು 43,81,141 ಮತದಾರರಿಗೆ ನೋಟಿಸ್ ನೀಡಲಾಗಿದೆ ಎಂಬ ಅಂಕಿ SIR ಪ್ರಕ್ರಿಯೆಯ ವ್ಯಾಪ್ತಿಯನ್ನೇ ತೋರಿಸುತ್ತದೆ. ಆದರೆ ಆರಂಭಿಕ ಹಂತದಲ್ಲಿ ಸುಮಾರು 7.3 ಲಕ್ಷ ನೋಟಿಸ್‌ಗಳು ಮಾತ್ರ ಸಂಬಂಧಪಟ್ಟವರಿಗೆ ತಲುಪಿದ್ದು, ಉಳಿದ ಲಕ್ಷಾಂತರ ನೋಟಿಸ್‌ಗಳ ವಿತರಣೆಯೂ ಬಾಕಿ ಉಳಿದಿದೆ ಎಂಬ ಮಾಹಿತಿ ಇದೆ. ಇದರಿಂದ ಉದ್ಯೋಗದಲ್ಲಿರುವವರು, ವೃದ್ಧರು ಹಾಗೂ ವಿವಿಧ ವೈಯಕ್ತಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ದಾಖಲೆಗಳನ್ನು ಸಂಗ್ರಹಿಸಿ ಅಧಿಕಾರಿಗಳ ಮುಂದೆ ಹಾಜರಾಗಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ.

ಮತದಾರರ ಪಟ್ಟಿಯ ಶುದ್ಧೀಕರಣದ ಹೆಸರಿನಲ್ಲಿ ನಕಲಿ ಹೆಸರುಗಳು, ಮೃತರ ಹೆಸರುಗಳು ಅಥವಾ ಸ್ಥಳಾಂತರಗೊಂಡವರ ಹೆಸರುಗಳನ್ನು ಗುರುತಿಸುವುದು ಚುನಾವಣಾ ವ್ಯವಸ್ಥೆಯ ಅಗತ್ಯ ಪ್ರಕ್ರಿಯೆಯಾಗಿರಬಹುದು. ಆದರೆ, ನಿಜವಾದ ಮತದಾರನನ್ನೇ ತನ್ನ ಅಸ್ತಿತ್ವವನ್ನು ಸಾಬೀತುಪಡಿಸುವ ಸ್ಥಿತಿಗೆ ತಳ್ಳುವಾಗ ಪ್ರಕ್ರಿಯೆಯ ಹೊಣೆಗಾರಿಕೆ ಯಾರದ್ದು? ಎಂಬ ಪ್ರಶ್ನೆ ಇಲ್ಲಿ ಮುಖ್ಯವಾಗುತ್ತದೆ. ಹೆಸರು ಅಥವಾ ಇನಿಷಿಯಲ್‌ನ ಸಣ್ಣ ವ್ಯತ್ಯಾಸವನ್ನು ಸರಿಪಡಿಸುವ ಆಡಳಿತಾತ್ಮಕ ಅವಕಾಶವಿರುವಾಗಲೇ, ಅದರ ಜತೆಗೆ ಕ್ರಿಮಿನಲ್ ಪ್ರಕರಣ ಮತ್ತು ಜೈಲು ಶಿಕ್ಷೆಯ ಎಚ್ಚರಿಕೆಯನ್ನು ಮುಂದಿಡುವುದು ನಾಗರಿಕರ ಮೇಲೆ ಅನಗತ್ಯ ಭಯದ ವಾತಾವರಣ ಸೃಷ್ಟಿಸುವುದೇ ಎಂಬ ಚರ್ಚೆ ಇದೀಗ ತೀವ್ರಗೊಂಡಿದೆ.

“ಒಂದು SIR, ನೂರು ಕರಾಳ ಮುಖಗಳು” ಎಂಬ ಟೀಕೆ ಇದೇ ಕಾರಣಕ್ಕೆ ಪ್ರಸ್ತುತವಾಗುತ್ತದೆ. ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಒಂದು ಆಡಳಿತಾತ್ಮಕ ಪ್ರಕ್ರಿಯೆಯಾಗಿರಬಹುದು; ಆದರೆ ಆ ಪ್ರಕ್ರಿಯೆಯ ಕೇಂದ್ರಬಿಂದು ನಾಗರಿಕನ ಮತದಾನದ ಹಕ್ಕಾಗಿರಬೇಕು. ಮತದಾರರನ್ನು ಅನುಮಾನದಿಂದ ನೋಡುವ, ದಾಖಲೆಗಳ ಹೊರೆ ಹೊರಿಸುವ ಮತ್ತು ಕಾನೂನು ಕ್ರಮದ ಭಯ ತೋರಿಸುವ ವಿಧಾನವು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಎಷ್ಟರ ಮಟ್ಟಿಗೆ ಹೊಂದಿಕೆಯಾಗುತ್ತದೆ ಎಂಬ ಪ್ರಶ್ನೆಗೆ ಚುನಾವಣಾ ಆಡಳಿತವೇ ಉತ್ತರಿಸಬೇಕಿದೆ. 

ವಿಶೇಷವಾಗಿ ಸ್ವತಃ ಚುನಾವಣಾ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಹುದ್ದೆ ನಿರ್ವಹಿಸಿದ್ದ ನಿವೃತ್ತ ಅಧಿಕಾರಿಯೊಬ್ಬರು ಇಂತಹ ನೋಟಿಸ್ ಎದುರಿಸಿರುವುದು, SIR ಪ್ರಕ್ರಿಯೆಯ ಮಾನವೀಯತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಕುರಿತು ಮತ್ತಷ್ಟು ಗಂಭೀರ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....