HomeಅಂಕಣಗಳುKarnataka against SIRರಾಜ್ಯದಲ್ಲಿ 'SIR' ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, 'SIR ವಿರೋಧಿ ಕರ್ನಾಟಕ'...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

- Advertisement -
- Advertisement -

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ ‘ಎಸ್‌ಐಆರ್’ (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10 ಕೋಟಿಗೂ ಹೆಚ್ಚು) ಜೀವಂತ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಆಯೋಗ ಸಂಚು ರೂಪಿಸಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ಒಕ್ಕೂಟ ಗಂಭೀರ ಆರೋಪ ಮಾಡಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಒಕ್ಕೂಟದ ಮುಖಂಡರು, ಚುನಾವಣಾ ಆಯೋಗ ಹಂಚಿಕೊಂಡಿರುವ SIR ಮಾಹಿತಿ ಪ್ರತಿಗಳನ್ನು ಹರಿದು ಆಯೋಗದ ಸರ್ವಾಧಿಕಾರಿ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಭಾರಿ ಪ್ರಮಾಣದ ಡಿಲೀಷನ್: ಆಯೋಗಕ್ಕೆ 3 ಪ್ರಮುಖ ಪ್ರಶ್ನೆಗಳು

ರಾಜ್ಯದಲ್ಲಿ ಪ್ರತಿ ಐವರು ಮತದಾರರಲ್ಲಿ ಒಬ್ಬರು ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಬೆಂಗಳೂರಿನಲ್ಲೇ ಶೇ. 40 ರಷ್ಟು ಮತದಾರರು ಪಟ್ಟಿಯಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ಒಕ್ಕೂಟ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದೆ.

ಡಿಲೀಟ್ ಮಾಡಲು ಗುರುತಿಸಲಾಗಿರುವ ಮತದಾರರಲ್ಲಿ ಶೇ. 15 ರಷ್ಟು ಜನ ಕೇವಲ ವಲಸೆ ಹೋದವರು (Shifted) ಅಥವಾ ಬಿಎಲ್‌ಒ (BLO) ಭೇಟಿ ನೀಡಿದಾಗ ಸಿಗದವರಾಗಿದ್ದಾರೆ (Absent). ಇವರು ಸತ್ತವರೂ ಅಲ್ಲ, ನಕಲಿ ಮತದಾರರೂ ಅಲ್ಲ. ಹೀಗಿರುವಾಗ ರಾಜ್ಯದ ಒಂದು ಕೋಟಿಗೂ ಹೆಚ್ಚು ಜೀವಂತ ನಾಗರಿಕರನ್ನು ಪಟ್ಟಿಯಿಂದ ತೆಗೆದುಹಾಕುವುದು ಎಷ್ಟು ಸರಿ?

ಇನ್ಯುಮುರೇಷನ್ ಫಾರಂ 100% ವಿತರಣೆಯಾಗಿದೆ ಮತ್ತು ಡಿಜಿಟಲೀಕರಣ ಮುಕ್ತಾಯಗೊಂಡಿದೆ ಎಂದು ಆಯೋಗ ಪ್ರಕಟಿಸಿದೆ. ಆದರೆ ಇಂದಿಗೂ ಖಾಲಿ ಫಾರಂ ಹಿಡಿದು ಪರದಾಡುತ್ತಿರುವ ನೂರಾರು ಜೀವಂತ ಉದಾಹರಣೆಗಳನ್ನು ನಾವು ನೀಡಬಲ್ಲೆವು. ಇದಕ್ಕೆ ಆಯೋಗದ ಉತ್ತರವೇನು?

ಬಿಎಲ್‌ಒ ಆಪ್‌ನಲ್ಲಿರುವ ‘ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್‌ವೇರ್’ ಬಗ್ಗೆ ಬಿಎಲ್‌ಎ (BLA) ಗಳಿಗೆ ತರಬೇತಿ ನೀಡಿಲ್ಲವೇಕೆ? ಪ್ರಧಾನಿ ಹಾಗೂ ಗೃಹ ಸಚಿವರು ಈ ಪ್ರಕ್ರಿಯೆ ಒಳನುಸುಳುಕೋರರನ್ನು ಪತ್ತೆಹಚ್ಚಲು ನಡೆಯುತ್ತಿದೆ ಎಂದಿದ್ದಾರೆ. ಹಾಗಾದರೆ ಈ ಪ್ರಕ್ರಿಯೆಯ ಮೂಲಕ ಆಯೋಗ ಪತ್ತೆ ಹಚ್ಚಿದ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಸಂಖ್ಯೆ ಎಷ್ಟು?

ದುರುದ್ದೇಶಪೂರಿತ ಹಾಗೂ ಅವೈಜ್ಞಾನಿಕ ಪ್ರಕ್ರಿಯೆ

ಕೇಂದ್ರದ ಆಡಳಿತಾರೂಢ ಬಿಜೆಪಿಯ ರಾಜಕೀಯ ಅಜೆಂಡಾ ಈಡೇರಿಸಲು ಎಸ್‌ಐಆರ್ ಪ್ರಕ್ರಿಯೆಯನ್ನು ಜನರ ಮೇಲೆ ಹೇರಲಾಗಿದೆ. ಇದು ಮತದಾರರ ಪಟ್ಟಿ ಪರಿಷ್ಕರಣೆಯಲ್ಲ, ಬದಲಿಗೆ ಇಡೀ ರಾಜ್ಯದ ಮತದಾರರ ಹಕ್ಕನ್ನು ಕಸಿದುಕೊಂಡು ವಿಕೃತ ಪಟ್ಟಿ ತಯಾರಿಸುವ ಹುನ್ನಾರ. ಸರಿಯಾದ ತರಬೇತಿ ಇಲ್ಲದೆ, ಒತ್ತಡದಲ್ಲಿ ಕೆಲಸ ಮಾಡುತ್ತಿರುವ ಬಿಎಲ್‌ಒ (BLO) ಗಳನ್ನು ಬಲಿಪಶು ಮಾಡಲಾಗುತ್ತಿದೆ.

ಉದ್ಯೋಗ ಅರಸಿ, ಜೀವನೋಪಾಯಕ್ಕಾಗಿ ಬೇರೆಡೆಗೆ ವಲಸೆ ಹೋದ ಬಡ ಮತ್ತು ಮಧ್ಯಮ ವರ್ಗದವರನ್ನು ‘ಸಿಗದವರು’ ಎಂಬ ಏಕೈಕ ಕಾರಣಕ್ಕೆ ಪಟ್ಟಿಯಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ.

ಎಸ್‌ಐಆರ್ ವಿರೋಧಿ ಕರ್ನಾಟಕ’ದ ಪ್ರಮುಖ ಒತ್ತಾಯಗಳು:
  • ಸಮಗ್ರ ಪರಿಶೀಲನೆ: ಇದುವರೆಗೆ ನಡೆದಿರುವ ಎಸ್‌ಐಆರ್ ಪ್ರಕ್ರಿಯೆಯ ಪುನರ್ ಪರಿಶೀಲನೆಯಾಗಬೇಕು ಮತ್ತು ಜನಪರ ಸಂಘಟನೆಗಳಿಗೂ ಅಭಿಪ್ರಾಯ ಮಂಡಿಸಲು ಅವಕಾಶ ನೀಡಬೇಕು.
  • ವಲಸೆ ಹೋದವರಿಗೆ ಪರ್ಯಾಯ ವ್ಯವಸ್ಥೆ: ಬೇರೆಡೆಗೆ ಸ್ಥಳಾಂತರಗೊಂಡವರನ್ನು ಪಟ್ಟಿಯಿಂದ ತೆಗೆಯದೆ, ಅವರು ಇರುವ ಸ್ಥಳದಲ್ಲೇ ‘ಫಾರಂ 8’ ನೀಡಿ ಮತದಾನದ ಹಕ್ಕನ್ನು ವರ್ಗಾಯಿಸಿಕೊಡಬೇಕು.
  • ಸಮಯಾವಕಾಶ ವಿಸ್ತರಣೆ: ಈ ಗಂಭೀರ ದೋಷಗಳನ್ನು ಸರಿಪಡಿಸಲು ಪ್ರಕ್ರಿಯೆಯ ಅವಧಿಯನ್ನು ಕನಿಷ್ಠ ಒಂದು ತಿಂಗಳು ವಿಸ್ತರಿಸಬೇಕು.
  • ಸಾರ್ವಜನಿಕ ಪರಿಶೀಲನಾ ಸಭೆ: ಕರಡು ಪಟ್ಟಿ ಪ್ರಕಟವಾದ ನಂತರ ಆಯೋಗದ ಮಾರ್ಗದರ್ಶನದಂತೆ ಪ್ರತಿಯೊಂದು ಪ್ರದೇಶದಲ್ಲೂ ಸಾರ್ವಜನಿಕ ಪರಿಶೀಲನಾ ಸಭೆ ನಡೆಸಿ, ಸಾಕ್ಷ್ಯಗಳ ಆಧಾರದ ಮೇಲೆ ಹೆಸರುಗಳನ್ನು ಉಳಿಸಿಕೊಳ್ಳಬೇಕು.

ಪ್ರಸ್ತುತ ರಾಜ್ಯದಾದ್ಯಂತ ‘ನಾಗರಿಕ ಮತ ಕಾವಲು ಸಮಿತಿ’ಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಸುರಕ್ಷಿತಗೊಳ್ಳುವವರೆಗೆ ಈ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಜನರ ತಾಳ್ಮೆಯನ್ನು ಆಯೋಗ ಪರೀಕ್ಷಿಸಬಾರದು. ನಾಗರಿಕ ಸಮಾಜದ ಪ್ರಸ್ತಾಪಗಳನ್ನು ಪುರಸ್ಕರಿಸದೆ, ಅಕ್ರಮ ಡಿಲೀಷನ್ ಕೈಬಿಡದಿದ್ದರೆ ಹಾಗೂ ಪ್ರಕ್ರಿಯೆಯ ಅವಧಿ ವಿಸ್ತರಿಸದಿದ್ದರೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಸಾರ್ವಜನಿಕ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಚುನಾವಣಾ ಆಯೋಗವನ್ನು ಎಚ್ಚರಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...