HomeಅಂಕಣಗಳುKarnataka against SIRSIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

- Advertisement -
- Advertisement -

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’ ತೀವ್ರ ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯಾದ್ಯಂತ ‘ಮತದಾರರ ಹಕ್ಕು ಪ್ರತಿಪಾದನಾ ದಿನ’ ಆಚರಿಸಲು ಹಾಗೂ ಮುಂದಿನ 15 ದಿನಗಳ ಕಾಲ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೃಹತ್ ಜನಜಾಗೃತಿ ಅಭಿಯಾನ ನಡೆಸಲು ಒಕ್ಕೂಟ ನಿರ್ಧರಿಸಿದೆ.

ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘SIR ಸುನಾಮಿಯಿಂದ ಕರ್ನಾಟಕವನ್ನು ರಕ್ಷಿಸಿಕೊಳ್ಳುವುದು ಹೇಗೆ?’ ಎಂಬ ವಿಷಯದ ಮೇಲಿನ ರಾಜ್ಯಮಟ್ಟದ ದುಂಡುಮೇಜಿನ ಸಭೆಯಲ್ಲಿ ಈ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಚುನಾವಣಾ ಆಯೋಗ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಬರೋಬ್ಬರಿ 1.10 ಕೋಟಿಗೂ ಅಧಿಕ ಮತದಾರರು ASDDO (Absent, Shifted, Dead, Duplicate, Official) ಪಟ್ಟಿಯಲ್ಲಿದ್ದಾರೆ. ಇದರ ಜೊತೆಗೆ 34 ಲಕ್ಷಕ್ಕೂ ಹೆಚ್ಚು ಜನರು ‘ಅನ್‌ಮ್ಯಾಪಿಂಗ್’ ಪಟ್ಟಿಯಲ್ಲಿದ್ದಾರೆ. ಒಟ್ಟಾರೆಯಾಗಿ 1.44 ಕೋಟಿಗೂ ಅಧಿಕ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗುವ ಆತಂಕ ಎದುರಾಗಿದೆ ಎಂದು ಸಭೆಯಲ್ಲಿ ಒಕ್ಕೂಟ ಕಳವಳ ವ್ಯಕ್ತಪಡಿಸಿದೆ.

ಸೆಪ್ಟೆಂಬರ್ ಅಂತ್ಯದವರೆಗೆ ಗಡುವು ವಿಸ್ತರಿಸಲು ಒತ್ತಾಯ

ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖ ಪದಾಧಿಕಾರಿ ನೂರ್‌ ಶ್ರೀಧರ್, “ಜನಚಳವಳಿಗಳ ತೀವ್ರ ಒತ್ತಡಕ್ಕೆ ಮಣಿದು ಚುನಾವಣಾ ಆಯೋಗ ಮೊದಲ ಹಂತದ ಗಡುವನ್ನು 10 ದಿನಗಳ ಕಾಲ ವಿಸ್ತರಿಸಿದೆ. ಆದರೆ, ಪ್ರಸ್ತುತ ಸೃಷ್ಟಿಯಾಗಿರುವ ತಾಂತ್ರಿಕ ಗೊಂದಲ ಹಾಗೂ ಲೋಪಗಳನ್ನು ಸರಿಪಡಿಸಲು ಈ ಕಾಲಾವಕಾಶ ಯಾವುದಕ್ಕೂ ಸಾಲುವುದಿಲ್ಲ. ಆದ್ದರಿಂದ SIR ಪ್ರಕ್ರಿಯೆಯ ಅಂತಿಮ ಗಡುವನ್ನು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಿಸಬೇಕು” ಎಂದು ಆಗ್ರಹಿಸಿದರು.

“ಚುನಾವಣಾ ಆಯೋಗವು ಮನೆಮನೆಗೆ ತೆರಳಿ ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಬದಲಿಗೆ, ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ (Delete) ಕೆಲಸಕ್ಕೆ ಮುಂದಾಗಿದೆ. ಉದ್ಯೋಗ ಅಥವಾ ಇತರೆ ಕಾರಣಗಳಿಗೆ ಸ್ಥಳಾಂತರಗೊಂಡವರಿಗೆ ನಮೂನೆ-8 (Form-8) ನೀಡಿ ಅವರನ್ನು ಮತಪಟ್ಟಿಯಲ್ಲೇ ಉಳಿಸಿಕೊಳ್ಳಬೇಕು. ಲೋಪದೋಷಗಳಿಂದ ಕೂಡಿದ ASDDO ಪಟ್ಟಿಯನ್ನು ಮರುಪರಿಶೀಲಿಸಲು ಬೂತ್ ಮಟ್ಟದ ಅಧಿಕಾರಿಗಳನ್ನು (BLO) ಮತ್ತೊಮ್ಮೆ ಮನೆಗಳಿಗೆ ಕಳುಹಿಸಬೇಕು” ಎಂದು ಅವರು ಒತ್ತಾಯಿಸಿದರು.

ಒಂದುವೇಳೆ ನಾಗರಿಕ ಮನವಿಗಳಿಗೆ ಸ್ಪಂದಿಸದೆ ದೊಡ್ಡ ಮಟ್ಟದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿ ಕರಡು ಪಟ್ಟಿ ಪ್ರಕಟಿಸಿದರೆ, ಹೆಸರು ಕಳೆದುಕೊಂಡ ಎಲ್ಲಾ ಮತದಾರರೊಂದಿಗೆ ಚುನಾವಣಾ ಆಯೋಗದ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ಹಾಗೂ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಒಕ್ಕೂಟ, ನಾಗರಿಕರು ಪ್ರಮಾಣಪತ್ರಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರತಿ ಗ್ರಾಮ ಪಂಚಾಯತಿ ಹಾಗೂ ನಗರ ಪ್ರದೇಶದ ವಾರ್ಡ್‌ಗಳಲ್ಲಿ ತಕ್ಷಣವೇ ‘ಸಹಾಯ ಕೇಂದ್ರಗಳನ್ನು’ (Help Desks) ತೆರೆಯಬೇಕು ಎಂದು ಆಗ್ರಹಿಸಿತು.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಜಿ.ಸಿ. ಚಂದ್ರಶೇಖರ್, “SIR ವಿಚಾರದಲ್ಲಿ ನಾಗರಿಕ ಸಮಾಜ ಮತ್ತು ಜನಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಬಿಜೆಪಿ ಮತ್ತು ಜೆಡಿಎಸ್ ಹೊರತುಪಡಿಸಿ ನಾವೆಲ್ಲರೂ ಈ ಗಂಭೀರ ಸಮಸ್ಯೆಯ ವಿರುದ್ಧ ಒಗ್ಗಟ್ಟಾಗಿ ನಿಂತಿದ್ದೇವೆ. ಯಾರೊಬ್ಬರೂ ಧ್ವನಿ ಕಳೆದುಕೊಳ್ಳುವ ಅಗತ್ಯವಿಲ್ಲ. ಸಂಘಟನೆಗಳು ಇಟ್ಟಿರುವ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳ ಜೊತೆ ಶೀಘ್ರವೇ ಉನ್ನತ ಮಟ್ಟದ ಸಭೆ ಏರ್ಪಡಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಮಹತ್ವದ ಸಭೆಯಲ್ಲಿ ಎಸ್‌ಯುಸಿಐ (SUCI) ನಾಯಕ ಕೆ.ವಿ. ಭಟ್, ಸಿಪಿಎಂನ ಕೆ. ಮಹಾಂತೇಶ್, ಆಮ್ ಆದ್ಮಿ ಪಕ್ಷದ ಸೀತಾರಾಮ ಗುಂಡಪ್ಪ, ಜಮಾತೆ ಇಸ್ಲಾಮಿ ಹಿಂದ್‌ನ ಮುಹಮ್ಮದ್ ಯೂಸುಫ್ ಕನ್ನಿ, ಎದ್ದೇಳು ಕರ್ನಾಟಕ ಸಂಘಟನೆಯ ತಾರಾ ರಾವ್, ಕೆ.ಎಲ್. ಅಶೋಕ್, ಮಲ್ಲಿಗೆ ಸಿರಿಮನೆ, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಡಾ. ಪೂರ್ಣಾನಂದ, ರಮೇಶ್ ಬೆಲ್ಲಂಕೊಂಡ, ಹಾಗೂ ಒಳಮೀಸಲಾತಿ ಹೋರಾಟಗಾರರಾದ ಕರಿಯಪ್ಪ ಗುಡಿಮನಿ, ಅಂಬಣ್ಣ ಅರೋಲಿಕರ್ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಪ್ರಮುಖ ನಾಯಕರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...